Homeಫ್ಯಾಕ್ಟ್‌ಚೆಕ್FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

FACT CHECK : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿವೆ ನಕಲಿ ಸಂದೇಶ

- Advertisement -
- Advertisement -

“ನಿಮ್ಮ ಪಾರ್ಸೆಲ್ ಗೋದಾಮಿನಲ್ಲಿ ಡೆಲಿವರಿಗಾಗಿ ಕಾಯ್ತಿದೆ. ಹಲವಾರು ಬಾರಿ ಡೆಲಿವರಿ ಮಾಡಲು ಪ್ರಯತ್ನಿಸಿದರೂ, ತಪ್ಪಾದ ವಿಳಾಸದ ಕಾರಣ ಸಾಧ್ಯವಾಗಿಲ್ಲ. ದಯವಿಟ್ಟು ಕೆಳಗಿನ ಲಿಂಕ್ ಒತ್ತಿ, ನಿಮ್ಮ ಮಾಹಿತಿಯನ್ನು ಅಪ್ಡೇಡ್ ಮಾಡಿ. 24 ಗಂಟೆಯೊಳಗೆ ಡೆಲಿವರಿ ಮಾಡಲಾಗುವುದು” ಎಂಬ ಸಂದೇಶವೊಂದು ಭಾರತೀಯ ಅಂಚೆಯ ಹೆಸರಿನಲ್ಲಿ ಅನೇಕ ಜನರ ಮೊಬೈಲ್‌ಗೆ ಬರುತ್ತಿವೆ.

ಭಾರತೀಯ ಅಂಚೆಯ ಹೆಸರಿನಲ್ಲಿ ಸಂದೇಶ ಬರುತ್ತಿರುವುದರಿಂದ ಅನೇಕ ಜನರು ಅದರಲ್ಲಿರುವ ಲಿಂಕ್ ಒತ್ತಿ ತಮ್ಮ ಮಾಹಿತಿಯನ್ನು ಅಪ್ಲೋಡ್ ಮಾಡುವ ಸಾಧ್ಯಗಳಿವೆ.

ಹಾಗಾದರೆ, ಅಂಚೆ ಇಲಾಖೆ ನಿಜವಾಗಿಯೂ ಆ ರೀತಿಯ ಸಂದೇಶ ಕಳುಹಿಸಿದೆಯಾ? ಲಿಂಕ್ ಒತ್ತಿದರೆ ಏನಾಗುತ್ತದೆ ಎಂದು ನೋಡೋಣ.

ಫ್ಯಾಕ್ಟ್‌ ಚೆಕ್ : ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ (ಫೇಕ್) ಎಂದು ಸರ್ಕಾರದ ಅಧಿಕೃತ ಸಂಸ್ಥೆ ಪ್ರೆಸ್‌ ಇನ್ಫರ್ಮೇಶನ್ ಬ್ಯೂರೋ (ಪಿಐಬಿ) ಖಚಿತಪಡಿಸಿದೆ.

“ಅಂಚೆ ಇಲಾಖೆ ಸಂದೇಶದ ಮೂಲಕ ವಿಳಾಸ ಅಪ್ಡೇಟ್ ಮಾಡಲು ಕೋರುವುದಿಲ್ಲ. ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ. ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಬೇಡಿ. ಅಂಚೆಗೆ ಸಂಬಂಧಿಸಿದ ಏನೇ ಗೊಂದಲಗಳಿದ್ದರೂ, ನೇರವಾಗಿ ಅಂಚೆ ಕಚೇರಿಗೆ ಹೋಗಿ ಬಗೆಹರಿಸಿಕೊಳ್ಳಿ” ಎಂದು ಪಿಐಬಿ ತಿಳಿಸಿದೆ.

ಅಂಚೆ ಇಲಾಖೆಯೂ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿ, ಮೊಬೈಲ್‌ಗೆ ಬರುತ್ತಿರುವ ಸಂದೇಶ ನಕಲಿ ಎಂದು ಖಚಿತಪಡಿಸಿದೆ

ಅಂಚೆ ಇಲಾಖೆಯ ಹೆಸರಿನಲ್ಲಿ ಬಂದಿರುವ ಸಂದೇಶದಲ್ಲಿರುವ ಲಿಂಕ್ ಒತ್ತಿ ವೈಯುಕ್ತಿಕ ಮಾಹಿತಿ ನೀಡಿದರೆ ಸೈಬರ್ ವಂಚಕರು ನಿಮ್ಮ ಬ್ಯಾಂಕ್‌ ಖಾತೆಯಿಂದ ಹಣ ಕದಿಯುವ ಸಾಧ್ಯತೆಗಳಿವೆ.

ಎಸ್‌ಎಂಎಸ್‌ ಮೂಲಕ ನಡೆಯುವ ಸೈಬರ್ ವಂಚಕರ ದಾಳಿಯಿಂದ ತಪ್ಪಿಸಿಕೊಳ್ಳಲು ಪಿಐಬಿ ಕೆಲವೊಂದು ಸಲಹೆಗಳನ್ನು ನೀಡಿವೆ. ಅವುಗಳು ಹೀಗಿವೆ.

  • ಅಪರಿಚಿತ ಮೂಲಗಳಿಂದ, ವಿಶೇಷವಾಗಿ ತುರ್ತಾಗಿ ಪ್ರತಿಕ್ರಿಯೆ ನೀಡುವಂತೆ ಒತ್ತಾಯಿಸುವ ಸಂದೇಶಗಳನ್ನು ನಂಬುವುದರಿಂದ ದೂರವಿರಿ
  • ಪ್ರತಿಷ್ಠಿತ ಸಂಸ್ಥೆಗಳ ಹೆಸರಿನಲ್ಲಿ ಬರುವ ಸಂದೇಶಗಳ ಸತ್ಯಾಸತ್ಯತೆಯನ್ನು ತಿಳಿದು ಮುಂದುವರಿಯಿರಿ
  • ಮೊಬೈಲ್‌ಗೆ ಬಂದಿರುವ ಅನುಮಾನಸ್ಪದ ಲಿಂಕ್‌ಗಳ ಮೇಲೆ ಕ್ಲಿಕ್ ಮಾಡಬೇಡಿ. ಅಗತ್ಯವಿದ್ದರೆ ಅವುಗಳನ್ನು ವೆಬ್‌ಸೈಟ್‌ನಲ್ಲಿ ಟೈಪ್‌ ಮಾಡಿ ಪರಿಶೀಲಿಸಿ
  • ಅಪರಿಚಿತ ಸಂದೇಶಗಳಿಗೆ ನಿಮ್ಮ ವೈಯುಕ್ತಿಕ, ಹಣಕಾಸಿನ ಮಾಹಿತಿಯನ್ನು ಯಾವುದೇ ಕಾರಣಕ್ಕೂ ನೀಡಬೇಡಿ
  • ಯಾವುದೇ ಅನುಮಾನಾಸ್ಪದ ಸಂದೇಶ ಬಂದರೆ ತಕ್ಷಣವೇ ಸಂಬಂಧಿತ ಅಧಿಕಾರಿಗಳು ಅಥವಾ ಸೈಬರ್ ಸುರಕ್ಷತಾ ತಂಡಕ್ಕೆ ವರದಿ ಮಾಡಿ

ಸರ್ಕಾರದ ಅಧಿಕೃತ ಸಂಸ್ಥೆ ಪಿಐಬಿ ಖಚಿತಪಡಿಸಿದ ಪ್ರಕಾರ, ಅಂಚೆ ಇಲಾಖೆಯ ಹೆಸರಿನಲ್ಲಿ ಮೊಬೈಲ್‌ಗೆ ಬರುತ್ತಿರುವ ಸಂದೇಶಗಳು ಸೈಬರ್ ವಂಚಕರದ್ದಾಗಿವೆ.

ಇದನ್ನೂ ಓದಿ : FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...