Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

FACT CHECK : ಹಿಂದೂ ದೇವಾಲಯವೊಂದಕ್ಕೆ ಬೆಂಕಿ ಹಚ್ಚಲಾಗಿದೆ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ

- Advertisement -
- Advertisement -

ಬಾಂಗ್ಲಾದೇಶದ ಪ್ರಧಾನಿಯಾಗಿದ್ದ ಶೇಖ್ ಹಸೀನಾ ನೇತೃತ್ವದ ಸರ್ಕಾರದ ವಿರುದ್ದ ಜನರು ದಂಗೆಯೆದ್ದ ಕಾರಣ, ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ್ದಾರೆ. ಪ್ರಸ್ತುತ ಅಲ್ಲಿ ನೋಬೆಲ್ ಪುರಸ್ಕತ ಮೊಹಮ್ಮದ್ ಯೂನುಸ್ ಅವರ ನೇತೃತ್ವದ ಮಧ್ಯಂತರ ಸರ್ಕಾರ ದೇಶವನ್ನು ಮುನ್ನಡೆಸುತ್ತಿದೆ.

ಈ ನಡುವೆ ಬಾಂಗ್ಲಾದಲ್ಲಿ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಬಹುಸಂಖ್ಯಾತ ಮುಸ್ಲಿಮರು ದಾಳಿ ನಡೆಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಸಂಬಂಧ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಅವುಗಳಲ್ಲಿ ಬಹುತೇಕ ಫೋಟೋ, ವಿಡಿಯೋಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದು, ಜನರಿಗೆ ನಿಜಾಂಶ ಏನು ಎಂಬುವುದನ್ನು ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದೀಗ ಹೊಸದಾಗಿ ಕಳೆದ ಎರಡು ದಿನಗಳಿಂದ “ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದು ಪ್ರತಿಪಾದಿಸಿ ವಿಡಿಯೋವೊಂದು ಎಲ್ಲೆಡೆ ಹರಿದಾಡುತ್ತಿದೆ.

ಝೀ ನ್ಯೂಸ್ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ, ನ್ಯೂಸ್‌ 24 ಹಿಂದಿ‘ ಸೇರಿದಂತೆ ಕೆಲ ಮಾಧ್ಯಮಗಳು ತಮ್ಮ ವರದಿಗಳಲ್ಲಿ ವಿಡಿಯೋ, ಫೋಟೋ ಹಂಚಿಕೊಂಡಿವೆ. ಸಾಮಾಜಿಕ ಜಾಲತಾಣ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ದೇವಸ್ಥಾನಕ್ಕೆ ಬೆಂಕಿ ಹಚ್ಚಲಾಗಿದೆ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್ : ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ “ವೈರಲ್ ವಿಡಿಯೋದಲ್ಲಿರುವುದು ಹಿಂದೂ ದೇವಸ್ಥಾನವಲ್ಲ, ಅದು ಬಾಂಗ್ಲಾದೇಶದ ಸತಿಖ್ರಾ ಎಂಬ ಪ್ರದೇಶದ ಒಂದು ರೆಸ್ಟೋರೆಂಟ್‌” ಎಂದು ಗೊತ್ತಾಗಿದೆ.

ಬಾಂಗ್ಲಾದೇಶದ ಫ್ಯಾಕ್ಟ್‌ಚೆಕ್ಕರ್ ಸೊಹಾನುರ್ ರಹಮಾನ್ ಆಗಸ್ಟ್ 6,2024ರಂದು ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಾಕಿದ್ದಾರೆ. ಆ ಪೋಸ್ಟ್‌ನಲ್ಲಿ ವೈರಲ್ ವಿಡಿಯೋದಲ್ಲಿರುವ ಕಟ್ಟಡ ಸಂಬಂಧಿತ ಎರಡು ಸ್ಕ್ರೀನ್‌ ಶಾಟ್‌ಗಳಿವೆ. ಸ್ಕ್ರೀನ್ ಶಾಟ್‌ನಲ್ಲಿ ‘রাজ প্রাসাদ কফি শপ এন্ড রেস্টুরেন্ট কলারোয়া সাতক্ষীরা’(ರಾಜ್ ಪ್ರಸಾದ್ ಕಾಫಿ ಶಾಪ್ & ರೆಸ್ಟೋರೆಂಟ್ ಕಲೋರ ಸತಿಖ್ರಾ) ಎಂದು ಬರೆಯಲಾಗಿದೆ. ಇದು ದೇವಸ್ಥಾನವಲ್ಲ, ಸತಿಖ್ರಾದ ರೆಸ್ಟೋರೆಂಟ್ ಎಂದು ಸೊಹಾನುರ್ ರಹಮಾನ್ ಕೂಡ ಬರೆದುಕೊಂಡಿದ್ದಾರೆ.

ಕಲೋರಾ ಸ್ಪೀಚ್ ಎಂಬ ಫೇಸ್‌ಬುಕ್ ಪೇಜೊಂದರಲ್ಲಿ ಆಗಸ್ಟ್ 6, 2024ರಂದು ಹಾಕಿರುವ ಪೋಸ್ಟ್‌ನಲ್ಲೂ ವೈರಲ್ ವಿಡಿಯೋದ ಸ್ಕ್ರೀನ್‌ಶಾಟ್ ಮತ್ತು ಮೇಲೆ ನಾವು ಹೆಸರಿಸಿದ ರೆಸ್ಟೋರೆಂಟ್‌ನ ಫೋಟೋ ಹಂಚಿಕೊಳ್ಳಲಾಗಿದ್ದು, “ವೈರಲ್ ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವ ಕಟ್ಟಡ ದೇವಸ್ಥಾನವಲ್ಲ” ಎಂದು ಖಚಿತಪಡಿಸಲಾಗಿದೆ.

ವಿಡಿಯೋದಲ್ಲಿ ಹೊತ್ತಿ ಉರಿಯುತ್ತಿರುವುದು ರೆಸ್ಟೋರೆಂಟ್ ಎಂದು ಹೇಳಿರುವುದರಿಂದ, ಆ ರೆಸ್ಟೋರೆಂಟ್ ಕುರಿತು ನಾವು ಗೂಗಲ್‌ ಮ್ಯಾಪ್‌ನಲ್ಲಿ ಹುಡುಕಿದ್ದೇವೆ. ಈ ವೇಳೆ ಮ್ಯಾಪ್‌ನಲ್ಲಿ ರೆಸ್ಟೋರೆಂಟ್ ಫೋಟೋ ಕಂಡು ಬಂದಿದೆ.

ಬಳಿಕ ನಾವು ಯೂಟ್ಯೂಬ್‌ನಲ್ಲೂ ರೆಸ್ಟೋರೆಂಟ್ ಕುರಿತು ಮಾಹಿತಿ ಹುಡುಕಿದ್ದು, ಈ ವೇಳೆ ರೆಸ್ಟೋರೆಂಟ್ ಕುರಿತು ಹಲವು ಹಲವು ವಿಡಿಯೋಗಳು ಲಭ್ಯವಾಗಿದೆ. ಅವುಗಳಲ್ಲಿ ಒಂದು ಕೆಳಗಿದೆ.

ಇನ್ನು, ಆ ರೆಸ್ಟೋರೆಂಟ್ ಶೇಖ್ ಹಸೀನಾ ನೇತೃತ್ವದ ಅವಾಮಿ ಲೀಗ್‌ನ ಯುವ ವಿಭಾಗವಾದ ಜೂಬೋ ಲೀಗ್‌ನ ನಾಯಕ ಕಾಝಿ ಅಸಾದುಜ್ಜಮಾನ್ ಶಹಜಾದಾ ಅವರ ಒಡೆತನದಲ್ಲಿದೆ ಎಂದು ತಿಳಿದು ಬಂದಿದೆ.

ರೆಸ್ಟೋರೆಂಟ್ ಹೊತ್ತಿ ಉರಿದಿದ್ದು ಹೇಗೆ?

ಆಗಸ್ಟ್ 5, 2024ರಂದು ಕಲ್ಬೇಲ  ಎಂಬ ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ವರದಿಯ ಪ್ರಕಾರ, ಶೇಕ್ ಹಸೀನಾ ಅವರು ಬಾಂಗ್ಲಾದೇಶದಿಂದ ನಿರ್ಗಮಿಸಿದ ನಂತರ ಹಲವಾರು ಸ್ಥಳಗಳಲ್ಲಿ ಜನರು ಬೆಂಕಿ ಹಚ್ಚುವುದು, ಸಾರ್ವಜನಿಕ ಆಸ್ತಿಗಳನ್ನು ಧ್ವಂಸಗೊಳಿಸುವುದರಲ್ಲಿ ತೊಡಗಿಕೊಂಡಿದ್ದಾರೆ. ಇದೇ ವೇಳೆ ಈ ರೆಸ್ಟೋರೆಂಟ್‌ಗೂ ಬೆಂಕಿ ಹಚ್ಚಿದ್ದಾರೆ.

ರೆಸ್ಟೋರೆಂಟ್ ಮಾಲೀಕ ಶೇಖ್ ಹಸೀನಾ ಪಕ್ಷದವರಾಗಿರುವುದರಿಂದ ರಾಜಕೀಯ ದ್ವೇಷಕ್ಕೆ ಬೆಂಕಿ ಹಚ್ಚಿರಬಹುದು ಎಂದು ನಾವು ಊಹಿಸಿದ್ದೇವೆ. ಏಕೆಂದರೆ, ಹಸೀನಾ ಅವರ ಪಕ್ಷದ ನಾಯಕರ ಆಸ್ತಿಗಳ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದೇಶದ ಹಿಂಸಾತ್ಮಕ ಪ್ರತಿಭಟನೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಪ್ರತಿಮೆ ಧ್ವಂಸಗೊಳಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...