Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು...

FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತ ಬೆಂಗಳೂರು ನಗರದಲ್ಲಿ ಬಸ್ ಅನ್ನು ಗುರಿಯಾಗಿಸಿಕೊಂಡು ಮ್ಯಾಗ್ನೆಟಿಕ್ ಬಾಂಬ್ ದಾಳಿ ನಡೆಸಲಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಡಿಫೆನ್ಸ್ ರಿಸರ್ಚ್ ಅಂಡ್ ಡೆವಲಪ್‌ಮೆಂಟ್ ಆರ್ಗನೈಸೇಶನ್‌ (ಡಿಆರ್‌ಡಿಒ)ನ ಮೂವರು ಇಂಜಿನಿಯರ್‌ಗಳು ಸಾವನಪ್ಪಿರುವ ಸಾಧ್ಯತೆಯಿದೆ. ಘಟನೆಯು ಡಿಆರ್‌ಡಿಒ ಹೆಚ್‌ಎಎಲ್ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ ಪಶ್ಚಿಮಕ್ಕೆ 4 ಕಿಮೀ ದೂರದಲ್ಲಿ ನಡೆದಿದೆ” ಎಂದು ಪಾಕಿಸ್ತಾನ್ ಫಸ್ಟ್ (@Pak1stTeam) ಹೆಸರಿನ ಎಕ್ಸ್ ಹ್ಯಾಂಡಲ್‌ನಲ್ಲಿ ಪೋಸ್ಟ್‌ ಹಾಕಲಾಗಿದೆ. ಜೊತೆಗೆ ಬಿಎಂಟಿಸಿ ಬಸ್ಸೊಂದು ಹೊತ್ತಿ ಉರಿಯುತ್ತಿರುವ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿರುವುದು ಸಂಪೂರ್ಣ ಸುಳ್ಳು ಮಾಹಿತಿಯಾಗಿದೆ. ಪೋಸ್ಟ್‌ನಲ್ಲಿರುವ ವಿಡಿಯೋ ಇತ್ತೀಚೆಗೆ ಎಂ.ಜಿ ರಸ್ತೆಯಲ್ಲಿ ಬಿಎಂಟಿಸಿ ಬಸ್‌ ಬೆಂಕಿಗಾಹುತಿಯಾದ ಘಟನೆಯದ್ದಾಗಿದೆ.

ಜುಲೈ 9, 2024ರಂದು ಬಿಎಂಟಿಸಿ ಬಸ್​ವೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರಿನ ಎಂ.ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್‌ ಬಳಿ ನಡೆದಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದಂತೆ ಎಚ್ಚೆತ್ತ ನಿರ್ವಾಹಕ ಬಸ್‌ನಲ್ಲಿದ್ದ ಜನರನ್ನು ಕೆಳಗಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ಎಂ.ಜಿ ರಸ್ತೆಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಬಸ್‌ ಹೊತ್ತಿ ಉರಿಯುವಾಗ ಭಾರೀ ಪ್ರಮಾಣದ ಹೊಗೆ ಪಕ್ಕದಲ್ಲಿದ್ದ ಮೆಟ್ರೋ ನಿಲ್ದಾಣವನ್ನು ಸಹ ಆವರಿಸಿತ್ತು.

ಎಕ್ಸ್‌ ಪೋಸ್ಟ್‌ನಲ್ಲಿ ಡಿಆರ್‌ಡಿಒ ತೇಜಸ್ ವಿಮಾನ ಪರೀಕ್ಷಾ ಕೇಂದ್ರದಿಂದ 4 ಕಿಮೀ ಪಶ್ಚಿಮಕ್ಕೆ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಅಸಲಿಗೆ ಹೆಚ್‌ಎಲ್‌ ವಿಮಾನ ಪರೀಕ್ಷಾ ಕೇಂದ್ರದಿಂದ ಎಂ.ಜಿ ರಸ್ತೆಯ ಅನಿಲ್‌ ಕುಂಬ್ಳೆ ಸರ್ಕಲ್‌ ಸುಮಾರು 9 ಕಿಮೀ ದೂರದಲ್ಲಿದೆ.

ಇದನ್ನೂ ಓದಿ : FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿ-ಐಜಿಪಿ ಎಂ.ಎ ಸಲೀಂ ವಿರುದ್ಧ ಸುಳ್ಳಾರೋಪ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ (ಡಿಜಿ-ಐಜಿಪಿ) ಎಂ.ಎ ಸಲೀಂ ಅವರ ವಿರುದ್ಧ ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ದ ಬೆಂಗಳೂರಿನ ಸೈಬರ್ ಅಪರಾಧ ಪೊಲೀಸರು...

ಭಾರತ-ಯುರೋಪ್ ಒಕ್ಕೂಟ ವ್ಯಾಪಾರ ಒಪ್ಪಂದ: ಬಿಎಂಡಬ್ಲ್ಯು, ವೋಕ್ಸ್‌ವ್ಯಾಗನ್, ಮರ್ಸಿಡಿಸ್ ಬೆಂಜ್ ಮೇಲಿನ ಸುಂಕ ಶೇ. 110 ರಿಂದ ಶೇ. 40ಕ್ಕೆ ಇಳಿಕೆಯಾಗುವ ಸಾಧ್ಯತೆ

ಯುರೋಪಿಯನ್ ಒಕ್ಕೂಟದಿಂದ ಆಮದು ಮಾಡಿಕೊಳ್ಳುವ ಕಾರುಗಳ ಮೇಲಿನ ಸುಂಕವನ್ನು ಪ್ರಸ್ತುತ ಶೇ. 110 ರಿಂದ ಶೇ. 40 ಕ್ಕೆ ಇಳಿಸಲು ಭಾರತ ಯೋಜಿಸಿದೆ, ಇದು ದೇಶದ ವಿಶಾಲ ಮಾರುಕಟ್ಟೆಯಲ್ಲಿ ಇದುವರೆಗಿನ ಅತಿದೊಡ್ಡ ಆರಂಭವಾಗಿದೆ,...

ಗಣರಾಜ್ಯೋತ್ಸವ : ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್

ಸಂವಿಧಾನವು ತನ್ನ ಮೊದಲ ಅನುಚ್ಛೇದದಲ್ಲಿಯೇ ಭಾರತವನ್ನು ಒಂದು ರಾಜ್ಯಗಳ ಒಕ್ಕೂಟ ಎಂದು ಘೋಷಿಸುತ್ತದೆ. ಸಶಕ್ತ ರಾಜ್ಯಗಳ ಮೂಲಕ ಸಶಕ್ತ ಭಾರತ ನಿರ್ಮಿಸುವುದು ನಮ್ಮ ಸಂವಿಧಾನದ ನಿರ್ಮಾತೃಗಳ ಕನಸಾಗಿತ್ತು. ಆ ಕನಸಿಗೆ ಕುಂದುಂಟಾಗದಂತೆ ನಮ್ಮ...

‘ಪುಸ್ತಕ ಮನೆʼಯ ಅಂಕೇಗೌಡ ಸೇರಿ ರಾಜ್ಯದ ಮೂವರಿಗೆ ಪದ್ಮಶ್ರೀ ಪ್ರಶಸ್ತಿ

ಕರ್ನಾಟಕದ ಮೂವರು ಸೇರಿದಂತೆ ದೇಶದ ಒಟ್ಟು 45 ಸಾಧಕರನ್ನು 2026ನೇ ಸಾಲಿನ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಮಂಡ್ಯ ಮೂಲದ ಪುಸ್ತಕ ಪ್ರೇಮಿ ಅಂಕೇಗೌಡ, ದಾವಣಗೆರೆಯ ಹಿಮೋಫಿಲಿಯಾ ಸೊಸೈಟಿಯ ವೈದ್ಯ...

ದೆಹಲಿ ಲೆಫ್ಟಿನೆಂಟ್ ಗವರ್ನರ್ ಮಾನನಷ್ಟ ಪ್ರಕರಣ : ಹೋರಾಟಗಾರ್ತಿ ಮೇಧಾ ಪಾಟ್ಕರ್ ಖುಲಾಸೆ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು 20 ವರ್ಷಗಳ ಹಿಂದಿನ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಪರಿಸರ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ದೆಹಲಿ ನ್ಯಾಯಾಲಯ ಶನಿವಾರ (ಜ.24) ಖುಲಾಸೆಗೊಳಿಸಿದೆ ಎಂದು ಬಾರ್...

ಆರ್‌ಜೆಡಿ ರಾಷ್ಟ್ರೀಯ ಕಾರ್ಯಕಾರಿ ಸಭೆ; ಕಾರ್ಯಕಾರಿ ಅಧ್ಯಕ್ಷರಾಗಿ ತೇಜಸ್ವಿ ನೇಮಕ

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್ ಅವರನ್ನು, ಇಂದು (ಜ.25) ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಪಕ್ಷದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು. 'ಮಹಾಘಟಬಂಧನ್' 36...

ಹಿಂದುತ್ವ ಗುಂಪಿನಿಂದ ಕಿರುಕುಳ : ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದ ಜೋಡಿ

ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹಿಂದುತ್ವ ಗುಂಪು ಕಿರುಕುಳ ನೀಡಿದ್ದರಿಂದ ಜೋಡಿಯೊಂದು ಪಿಜ್ಜಾ ಔಟ್‌ಲೆಟ್‌ನ ಎರಡನೇ ಮಹಡಿಯಿಂದ ಜಿಗಿದಿದ್ದು, ಈ ಸಂಬಂಧ ಎಂಟು ಮಂದಿಯ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ದಿ ನ್ಯೂ...

ಹಿಂದಿ ಚಿತ್ರಗಳು ತಮ್ಮ ಬೇರುಗಳನ್ನು ಕಳೆದುಕೊಂಡಿವೆ, ಹಣ ಆಧಾರಿತವಾಗಿವೆ: ಪ್ರಕಾಶ್ ರಾಜ್

ದೃಢ, ವಿಷಯಾಧಾರಿತ ಕಥೆ ನಿರೂಪಣೆಯಿಂದ ಪ್ರಶಂಸಿಸಲಾದ ಮಲಯಾಳಂ ಮತ್ತು ತಮಿಳು ಸಿನಿಮಾಗಳಿಗಿಂತ ಭಿನ್ನವಾಗಿ, ಹಿಂದಿ ಸಿನಿಮಾ ತನ್ನ ಬೇರುಗಳನ್ನು ಕಳೆದುಕೊಂಡಿದೆ. ಹೆಚ್ಚು ಹೆಚ್ಚು ನಕಲಿ ಮತ್ತು ಹಣ-ಆಧಾರಿತವಾಗುತ್ತಿದೆ ಎಂದು ನಟ ಪ್ರಕಾಶ್ ರಾಜ್...

ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ದರೋಡೆ: ಏನಿದು ಪ್ರಕರಣ..ಬೆಳಗಾವಿ ಎಸ್ಪಿ ಹೇಳಿದ್ದೇನು?

ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಗಡಿಯಲ್ಲಿರುವ ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಚೋರ್ಲಾ ಘಾಟ್‌ನಲ್ಲಿ ಬರೋಬ್ಬರಿ 400 ಕೋಟಿ ರೂಪಾಯಿ ಹಣ ಸಾಗಿಸುತ್ತಿದ್ದ ಕಂಟೇನರ್‌ಗಳನ್ನು ದರೋಡೆ ಮಾಡಲಾಗಿದೆ ಎಂಬ ವಿಚಾರ ದೊಡ್ಡ ಮಟ್ಟದಲ್ಲಿ...

‘ಅಲೈಡ್ ಹೆಲ್ತ್ ಕೋರ್ಸ್‌ಗಳ ನೀಟ್ ಪರೀಕ್ಷೆಯಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ..’; ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಅಲೈಡ್ ಹೆಲ್ತ್ ಕೋರ್ಸ್‌ಗಳ ಪ್ರವೇಶದಿಂದ ಹೊರಗಿಡಬೇಕು ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು...