Homeಫ್ಯಾಕ್ಟ್‌ಚೆಕ್FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

FACT CHECK : ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆ ಕುರಿತು ಸುಳ್ಳು ಪೋಸ್ಟ್‌ ಹಂಚಿಕೆ

- Advertisement -
- Advertisement -

ಉತ್ತರಾಖಂಡದಲ್ಲಿ 2000 ಇಸವಿಯಲ್ಲಿ 1.5% ರಷ್ಟಿದ್ದ ಮುಸ್ಲಿಮರ ಜನಸಂಖ್ಯೆ 2024ರ ಹೊತ್ತಿಗೆ 16 % ರಷ್ಟು ಗಣನೀಯವಾಗಿ ಹೆಚ್ಚಳವಾಗಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ. ‘ಎಚ್ಚರಿಕೆಯ ಕರೆಗಂಟೆ’ ಎಂದು ಮುಸ್ಲಿಮರನ್ನು ಗುರಿಯಾಗಿಸಿ ವಿಡಿಯೋವನ್ನು ಎಕ್ಸ್‌ ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಹಾಗಿದ್ದರೆ, ಈ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ಭಾರತದಲ್ಲಿ ಬಲಪಂಥೀಯವಾದ ಮುನ್ನಲೆಗೆ ಬಂದಾಗಲೆಲ್ಲ ಮುಸ್ಲಿಮರ ಜನಸಂಖ್ಯೆ ಬಗ್ಗೆಯೇ ಹೆಚ್ಚಾಗಿ ಚರ್ಚೆಗಳು ಆರಂಭವಾಗುತ್ತದೆ. ಅದರಲ್ಲೂ ಇತ್ತೀಚೆಗಂತೂ ಮುಸ್ಲಿ ಜನಸಂಖ್ಯೆ ಹೆಚ್ಚಳದಿಂದ ಭಾರತ ನಾಶವಾಗಲಿದೆ ಎಂದೆಲ್ಲ ಅಪಪ್ರಚಾರ ಮಾಡಲಾಗುತ್ತಿದೆ. ಹಾಗಾಗಿ, 24 ವರ್ಷಗಳಲ್ಲಿ ಉತ್ತರಾಖಂಡದಲ್ಲಿರುವ ಮುಸ್ಲಿಮರ ಸಂಖ್ಯೆ ಶೇಕಡಾ.1 ರಿಂದ ಶೇಕಡಾ 16ರಷ್ಟು ಏರಿಕೆಯಾಗಿದೆ ಎಂದು ಹಂಚಿಕೊಳ್ಳುತ್ತಿರುವ ಮಾಹಿತಿ ಸಂಪೂರ್ಣ ಸುಳ್ಳು.

“2001-11ರ ಅವಧಿಯಲ್ಲಿ ಮುಸ್ಲಿಮರ ಜನಸಂಖ್ಯೆಯಲ್ಲಿ ಶೇಕಡಾ 24 ರಷ್ಟು ಏರಿಕೆ” ಎಂಬ ಶೀರ್ಷಿಕೆಯಲ್ಲಿ  2015ರ ಜನವರಿ 22ರಂದು ದಿ ಇಕನಾಮಿಕ್ ಟೈಮ್ಸ್ ವರದಿ ಮಾಡಿದ್ದು, ಯಾವ ಯಾವ ರಾಜ್ಯಗಳಲ್ಲಿ ಮುಸ್ಲಿಮರ ಜನಸಂಖ್ಯೆ ಎಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ ಎಂಬ ಬಗ್ಗೆ ಜನಗಣತಿಯ ವರದಿಯನ್ನು ಆಧಾರವಾಗಿಸಿ ವಿಶ್ಲೇಷಣೆ ಮಾಡಿದೆ.

ತಪ್ಪು ಮಾಹಿತಿಯನ್ನು ಹಂಚಿಕೊಳ್ಳುವ ಮೂಲಕ ಮುಸ್ಲಿಮರನ್ನು ಗುರಿಯಾಗಿಸಿ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಂಚಿಕೊಳ್ಳಲಾಗುತ್ತಿದೆ ಎಂದು ಸತ್ಯಶೋಧನಾ ಸಂಸ್ಥೆ ದಿ ಇಟೆಂಟ್ ಡಾಟಾ ವರದಿ ಮಾಡಿದೆ. ವಾಸ್ತವವಾಗಿ, ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಲ್ಲಿ 11.9% ರಷ್ಟಿತ್ತು ಮತ್ತು 2011 ರ ವೇಳೆಗೆ 13.9% ಕ್ಕೆ ಏರಿತು, ಇದು ಆ ದಶಕದಲ್ಲಿ 2 ಶೇಕಡಾವಾರು ಅಂಶಗಳ ಏರಿಕೆಯನ್ನು ಸೂಚಿಸುತ್ತದೆ. 2011 ರ ಜನಗಣತಿಯನ್ನು ಮೀರಿ ಉತ್ತರಾಖಂಡದ ಧಾರ್ಮಿಕ ಜನಸಂಖ್ಯೆಯ ಬಗ್ಗೆ ಯಾವುದೇ ನವೀಕರಿಸಿದ ಅಧಿಕೃತ ಡೇಟಾ ಇಲ್ಲ.

ಒಟ್ಟಾರೆಯಾಗಿ ಹೇಳುವುದಾದರೆ, ಲಭ್ಯವಾದ ವರದಿಳ ಪ್ರಕಾರ ಉತ್ತರಾಖಂಡದ ಮುಸ್ಲಿಂ ಜನಸಂಖ್ಯೆಯು 2001 ರಿಂದ 2011ರ 10ವರ್ಷದ ಅವಧಿಯಲ್ಲಿ ಶೇಕಡ 2% ಮಾತ್ರ ಏರಿಕೆಯಾಗಿದೆ. ಮುಂದುವರೆದು 2011 ರ ನಂತರ ಜನಗಣತಿಯನ್ನು ಅಂದರೆ 2024ರ ಜನಗಣತಿ ಇನ್ನೂ ಆಗಿಲ್ಲ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...