Homeಫ್ಯಾಕ್ಟ್‌ಚೆಕ್ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ - ವಿಶ್ವೇಶ್ವರ ಭಟ್ ಕ್ಷಮೆ...

ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

- Advertisement -
- Advertisement -

ನೀಟ್‌‌ ಪಿಜಿ ಪರೀಕ್ಷೆಯಲ್ಲಿ ಭಾರತಕ್ಕೆ ಮೊದಲ ರ್‍ಯಾಂಕ್ ಪಡೆದ ಬ್ರಾಹ್ಮಣ ವಿದ್ಯಾರ್ಥಿಗೆ ಮೀಸಲಾತಿಯ ಕಾರಣಕ್ಕೆ ಗದಗ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಗಲಿಲ್ಲ” ಎಂದು ಪ್ರತಿಪಾದಿಸಿ ಕನ್ನಡ ದಿನಪತ್ರಿಕೆ ‘ವಿಶ್ವವಾಣಿ’ ಜನವರಿ 29ರ ಶನಿವಾರದಂದು ಸುದ್ದಿಯೊಂದು ಪ್ರಸಾರ ಮಾಡಿತ್ತು. ಆ ವರದಿ ಚಿತ್ರವನ್ನು ಹಂಚಿಕೊಂಡಿದ್ದ ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್‌‌ ಅವರು, “ಇದು ಕರ್ನಾಟಕದ ಅರ್ಹತೆಯ ಅಣಕ. ಮೊದಲ ರ್‍ಯಾಂಕ್‌ ಪಡೆದರೂ ಮೀಸಲಾತಿ ಕಾರಣಕ್ಕೆ ಎಂಡಿ ಸೀಟು ನಿರಾಕರಿಸಲಾಗಿದೆ” ಎಂದು ಬರೆದು ಮತ್ತೆ ಓದುಗರ ದಾರಿ ತಪ್ಪಿಸಿದ್ದರು.

ವಿಶ್ವೇಶ್ವರ ಭಟ್‌ ಟ್ವೀಟ್

ಈ ಸುದ್ದಿಯ ಸತ್ಯಾಸತ್ಯತೆ ಪರೀಶೀಲಿಸಿದಾಗ ವಾಸ್ತವದಲ್ಲಿ ಗಗನ್‌ ಕುಬೇರ್‌ ಅವರು, ‘2021 ರ ನೀಟ್‌ ಪಿಜಿ ಪರೀಕ್ಷೆ’ಯಲ್ಲಿ ಮೊದಲ ರ್‍ಯಾಂಕ್‌ ಪಡೆದಿಲ್ಲ ಎಂಬುದು ಕಂಡುಬಂದಿತ್ತು. 2021 ರ ನೀಟ್‌ ಪಿಜಿ ಪರೀಕ್ಷೆಯಲ್ಲಿ ಮೊದಲ ರ್‍ಯಾಂಕ್‌ ಪಡೆದವರು ಹೆಸರು ಅಮರ್ಥ್ಯ ಸೇನ್‌ಗುಪ್ತಾ ಎಂದಾಗಿದ್ದು, ಅವರು ಪಶ್ಚಿಮ ಬಂಗಾಳದವರಾಗಿದ್ದಾರೆ. 2021 ರ ನೀಟ್ ಪರೀಕ್ಷೆಯಲ್ಲಿ ರ್‍ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿಯಲ್ಲಿ ಗಗನ್ ಕುಬೇರ್ ಹೆಸರೇ ಇಲ್ಲ. ಅದರ ಸಂಪೂರ್ಣ ಪಟ್ಟಿಯನ್ನು ನೀವು ಇಲ್ಲಿ ನೋಡಬಹುದಾಗಿದೆ.

ಗಗನ್‌ ಅವರ ವಿಡಿಯೊ ವ್ಯಾಪಕವಾಗಿ ಹರಿದಾಡಿದಾಗ ಅವರು ತನ್ನ ಯೂಟ್ಯೂಬ್‌‌ನ ವಿಡಿಯೊ ವಿವರಣೆಯಲ್ಲಿ ತನ್ನ ರ್‍ಯಾಂಕ್‌ ಬಗ್ಗೆ ಸ್ಪಷ್ಟೀಕರಣ ಕೂಡಾ ನೀಡಿದ್ದಾರೆ. ಅದರಲ್ಲಿ ಅವರು, “ನಾನು 1 ನೇ ರ್‍ಯಾಂಕ್ ಅಲ್ಲ. ಬದಲಾಗಿ ಅಖಿಲ ಭಾರತ ಮಟ್ಟದಲ್ಲಿ 12,406 ಪಡೆದಿದ್ದೇನೆ. ಅದು ಹಿಂದಿನ ಕಟ್-ಆಫ್ ಅಥವಾ ಮೀಸಲಾತಿ ಪ್ರಕಾರ ಕರ್ನಾಟಕದ ಸರ್ಕಾರಿ ಕಾಲೇಜಿನಲ್ಲಿ ಕ್ಲಿನಿಕಲ್ ಸೀಟ್ ಪಡೆಯಲು ಯೋಗ್ಯವಾಗಿದೆ” ಎಂದು ಬರೆದಿದ್ದಾರೆ.

ಈ ಮೂಲಕ ತಿಳಿಯುವುದೇನೆಂದರೆ, ವಿಶ್ವವಾಣಿ ಪತ್ರಿಕೆಯ ವರದಿಯು ಸಂಪೂರ್ಣ ಸುಳ್ಳಾಗಿದ್ದು, ಅದರ ಪತ್ರಕರ್ತರಾಗಿರುವ ವಿಶ್ವೇಶ್ವರ ಭಟ್‌ ಅವರ ಪ್ರತಿಪಾದನೆಯೂ ತಪ್ಪಾಗಿದೆ. ಇಡೀ ವರದಿ ಮೀಸಲಾತಿಯನ್ನು ವಿರೋಧಿಸಲೇ ಬೇಕು ಎಂಬ ಸಿದ್ದ ಮಾದರಿಯೊಂದಿಗೆ ಬರೆಯಲಾಗಿದೆ. ಈ ಕುರಿತು ನಾನುಗೌರಿ.ಕಾಂ ಫ್ಯಾಕ್ಟ್‌ಚೆಕ್ ಮಾಡಿ ಬಯಲಿಗೆಳೆದಿತ್ತು.

ತದನಂತರ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವರದಿ ಮಾಡಿ ವಿಶ್ವವಾಣಿ, ಟ್ವಿಟರ್‌ನಲ್ಲಿ ಹಂಚಿಕೊಂಡ ವಿಶ್ವೇಶ್ವರ ಭಟ್ ಮತ್ತು ತಪ್ಪಾಗಿ ಮೀಸಲಾತಿ ವಿರೋಧಿಸಿ ವಿಡಿಯೋ ಮಾಡಿದ್ದ ಗಗನ್ ಕುಬೇರ್ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಈ ರೀತಿ ಹಸಿ ಹಸಿ ಸುಳ್ಳುಗಳನ್ನು ಹೇಗೆ ಹರಡುತ್ತೀರಿ ಎಂದು ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿತ್ತು. ಕಪೋಲಕಲ್ಪಿತ ಸುಳ್ಳು ವರದಿ ಮಾಡಿದ ವಿಶ್ವವಾಣಿ ಮತ್ತು ಅದರ ಸಂಪಾದಕ ವಿಶ್ವೇಶ್ವರ ಭಟ್ ಕ್ಷಮೆ ಕೇಳಬೇಕೆಂದು ಆಗ್ರಹಿಸಲಾಗಿತ್ತು.

ಅದರ ನಂತರ ಇಂದು ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದಾರೆ ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿದ್ದಾರೆ ಎಂದು ಹಲವರು ಸ್ಕ್ರೀನ್‌ ಶಾಟ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್‌ಬುಕ್ ಬಳಕೆದಾರರಾದ ರಾಘವ್ ಮೌರ್ಯ ಮತ್ತು ಲೋಕೇಶ್ ಪೂಜಾರಿ ಎಂಬುವವರು ಸೇರಿದಂತೆ ಹಲವರು ಈ ಸ್ಕ್ರೀನ್‌ಶಾಟ್ ಅನ್ನು ಫೇಸ್‌ಬುಕ್‌ನಲ್ಲಿ ಪ್ರಕಟಿಸಿದ್ದಾರೆ.

ಫ್ಯಾಕ್ಟ್‌ಚೆಕ್:

ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್‌ರವರು ಈ ರೀತಿಯ ಕ್ಷಮೆ ಕೇಳಿ ಟ್ವೀಟ್ ಮಾಡಿದ್ದಾರೆಯೇ ನಾವು ಹುಡುಕಿದಾಗ ಅವರ ಅಧಿಕೃತ ಟ್ವಿಟರ್ ಖಾತೆಯಲ್ಲಿ ಈ ರೀತಿಯ ಯಾವುದೇ ಟ್ವೀಟ್ ಕಂಡುಬಂದಿಲ್ಲ. ಅಲ್ಲದೆ ಅವರು ತಮ್ಮ ಹಿಂದಿನ ಸುಳ್ಳು ವರದಿಯ ಟ್ವೀಟ್ ಅನ್ನು ಸಹ ಡಿಲೀಟ್ ಮಾಡಿಲ್ಲ. ಅದನ್ನು ಈ ಕೆಳಗೆ ನೋಡಬಹುದು.

ವಿಶ್ವೇಶ್ವರ ಭಟ್ ಅವರ ಅಧಿಕೃತ ಫೇಸ್‌ ಬುಕ್ ಖಾತೆಯಲ್ಲಿಯೂ ಕ್ಷಮೆ ಕೇಳಿರುವುದು ಕಂಡುಬಂದಿಲ್ಲ.

ಇನ್ನು ಈಗ ಅವರು ಕ್ಷಮೆ ಕೇಳಿದ್ದಾರೆಂದು ಹರಿದಾಡುತ್ತಿರುವ ಟ್ವೀಟ್‌ನ ಸ್ಕ್ರೀನ್‌ ಶಾಟ್‌ ಅನ್ನು ಸೂಕ್ಷ್ಮವಾಗಿ ಗಮನಿಸಿ ಹುಡುಕಿದಾಗ ಆ ಹೆಸರಿನ (vishweshwarbhatt) ಯಾವುದೇ ಟ್ವಿಟರ್ ಖಾತೆ ನಮಗೆ ದೊರಕಿಲ್ಲ. ಅಲ್ಲದೆ ಮೇಲ್ನೋಟಕ್ಕೆ ಅದು ಎಡಿಟ್ ಮಾಡಿರುವ ಪೋಸ್ಟ್ ಎಂದು ತಿಳಿಯುತ್ತದೆ.

ಒಟ್ಟಿನಲ್ಲಿ ಹೇಳುವುದಾದರೆ “ಓದುಗರಲ್ಲಿ ಕಳಕಳಯ ಮನವಿ, ತಪ್ಪು ಮಾಹಿತಿಯಿಂದ ಆದ ಯಡವಟ್ಟು, ದಯವಿಟ್ಟು ಕ್ಷಮಿಸಿಬಿಡಿ” ಎಂದು ವಿಶ್ವೇಶ್ವರ ಭಟ್ ಟ್ವೀಟ್ ಮಾಡಿಲ್ಲ. ಅವರು ನೀಟ್ ಪಿಜಿಯಲ್ಲಿ ಮೊದಲ ರ್ಯಾಂಕ್ ಎಂಬ ತಪ್ಪು ಸುದ್ದಿಯನ್ನು ಸಹ ಇಲ್ಲಿಯವರೆಗೂ ಡಿಲೀಟ್ ಮಾಡಿಲ್ಲ. ಆದರೆ ಯಾರೋ ಕಿಡಿಗೇಡಿಗಳು ವಿಶ್ವೇಶ್ವರ ಭಟ್ ಹೆಸರಿನಲ್ಲಿ ಟ್ವೀಟ್ ಮಾಡಿರುವ ರೀತಿ ಎಡಿಟ್ ಫೋಟೊವನ್ನು ರಚಿಸಿ ಹಂಚುತ್ತಿದ್ದಾರೆ ಎಂಬುದು ಖಚಿತವಾಗಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂದು ಸುಳ್ಳು ಸುದ್ದಿ ಹರಡಿದ ‘ವಿಶ್ವವಾಣಿ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...