Homeಫ್ಯಾಕ್ಟ್‌ಚೆಕ್FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ...

FACT CHECK : ಅಜ್ಮೀರ್ ದರ್ಗಾ ವಿರುದ್ಧ ಪಂಜಿನ ಮೆರವಣಿಗೆ ವೇಳೆ ಬೆಂಕಿ ಅವಘಡ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಸೂಫಿ ಸಂತ ಖ್ವಾಜಾ ಮುಈನುದ್ದೀನ್ ಚಿಸ್ತಿ ಅವರ ಅಜ್ಮೀರ್ ದರ್ಗಾವನ್ನು ದೇವಸ್ಥಾನ ಎಂದು ಪ್ರತಿಪಾದಿಸಿ ಸಲ್ಲಿಸಿರುವ ಅರ್ಜಿಯನ್ನು ನ.27ರಂದು ನ್ಯಾಯಾಲಯ ವಿಚಾರಣೆಗೆ ಪರಿಗಣಿಸಿದೆ.

ಆ ಬಳಿಕ ಸಾಮಾಜಿಕ ಜಾಲತಾಣಗಳಾದ ಎಕ್ಸ್‌, ಫೇಸ್‌ಬುಕ್ ಮತ್ತು ವಾಟ್ಸಾಪ್ ಮೆಸೆಂಜರ್‌ನಲ್ಲಿ ವಿಡಿಯೋವೊಂದು ವ್ಯಾಪಕವಾಗಿ ಹರಿದಾಡುತ್ತಿದೆ. ಪಂಜಿನ ಮೆರವಣಿಗೆಯೊಂದರ ವೇಳೆ ಬೆಂಕಿ ಅವಘಡ ಸಂಭವಿಸಿದ ದೃಶ್ಯ ಆ ವಿಡಿಯೋದಲ್ಲಿದೆ.


ವಿಡಿಯೋ ಹಂಚಿಕೊಳ್ಳುತ್ತಿರುವವರು “ಅಜ್ಮೀರ್ ಶರೀಫ್ ದರ್ಗಾದ ವಿರುದ್ದ ಕೋಮುವಾದಿ ಸಂಘಿಗಳು ನಡೆಸಿದ ಪಂಜಿನ‌ ಮೆರವಣಿಗೆಯಲ್ಲಿ ದೊಡ್ಡ ಮಟ್ಟದಲ್ಲಿ ಬೆಂಕಿಯ ಅವಘಡ ಸಂಭವಿಸಿದೆ” ಎಂದು ಪ್ರತಿಪಾದಿಸಿದ್ದಾರೆ.

ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ

ಹಾಗಾದರೆ, ಈ ವಿಷಯ ನಿಜಾನಾ? ಅಜ್ಮೀರ್ ದರ್ಗಾ ವಿರುದ್ದ ಪ್ರತಿಭಟನೆ ವೇಳೆ ಬೆಂಕಿ ಅವಘಡ ಸಂಭವಿಸಿದೆಯಾ? ಎಂಬುವುದರ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ಅಜ್ಮೀರ್ ದರ್ಗಾ ವಿರುದ್ದ ಪ್ರತಿಭಟಿಸುವಾಗ ಬೆಂಕಿ ಅವಘಡ ಸಂಭವಿಸಿದೆ ಎಂಬುವುದು ಶುದ್ದ ಸುಳ್ಳು. ಅಂತಹ ಯಾವುದೇ ಘಟನೆ ಇತ್ತೀಚೆಗೆ ನಡೆದಿರುವ ಬಗ್ಗೆ ವರದಿಯಾಗಿಲ್ಲ. ವಾಟ್ಸಾಪ್‌ನಲ್ಲಿ ಹರಿದಾಡುತ್ತಿರುವ ವಿಡಿಯೋ ಮಧ್ಯಪ್ರದೇಶದಲ್ಲಿ ನಡೆದ ಘಟನೆಯೊಂದಕ್ಕೆ ಸಂಬಂಧಿಸಿದ್ದಾಗಿದೆ.

2024ರ ನವೆಂಬರ್ 29ರಂದು ‘ರಾಷ್ಟ್ರ ಭಕ್ತ್‌ ವೀರ್ ಯುವ ಮಂಚ್‌’ ಎಂಬ ಸಂಘಟನೆ ಪಂಚಿನ ಮೆರವಣಿಗೆ ಆಯೋಜಿಸಿತ್ತು. ಮೆರವಣಿಗೆ ಮಧ್ಯ ಪ್ರದೇಶದ ಖಾಂದ್ವಾದ ಘಂಟಾಘರ್‌ನ ಬಾಂಬೆ ಬಝಾರ್‌ಗೆ ತಲುಪಿದಾಗ ಬೆಂಕಿ ಅವಘಡ ಸಂಭವಿಸಿದೆ.

ಬಾಂಬೆ ಬಝಾರ್‌ನ ಕ್ಲೋ ಟವರ್ ಪ್ರದೇಶದಲ್ಲಿ ಪಂಜಿನ ಮೆರವಣಿಗೆ ಕೊನೆಗೊಂಡಾಗ, ಜನರು ತಮ್ಮ ಕೈಯಲ್ಲಿದ್ದ ಪಂಜನ್ನು ನೀರು ತುಂಬಿದ್ದ ಕಂಟೈನರ್‌ಗೆ ಮುಳುಗಿಸಿ ನಂದಿಸುತ್ತಿದ್ದರು. ಈ ವೇಳೆ ಪಂಜಿನಿಂದ ನೆಲಕ್ಕೆ ಬಿದ್ದಿದ್ದ ಎಣ್ಣೆಗೆ ಬೆಂಕಿ ತಗುಲಿ ಒಮ್ಮೆಲೆ ಆವರಿಸಿಕೊಂಡಿದೆ.

ಘಟನೆಯ ಕುರಿತ ಟೈಮ್ಸ್‌ ನೌ ವರದಿ

ಈ ಘಟನೆಯಲ್ಲಿ ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಕೆಲ ವರದಿಗಳು ಹೇಳಿವೆ. ಇನ್ನೂ ಕೆಲ ವರದಿಗಳು ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದಿವೆ.

ನವೆಂಬರ್ 28, 2009 ರಂದು ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (SIMI) ಸದಸ್ಯರಿಂದ ಹತ್ಯೆಯಾದ ಪೊಲೀಸ್ ಅಧಿಕಾರಿ ಸೀತಾರಾಮ್ ಬಾಥಮ್ ಸೇರಿದಂತೆ ಮೂವರ ಸ್ಮರಣಾರ್ಥವಾಗಿ ಪ್ರತಿ ವರ್ಷ ಪಂಜಿನ ಮೆರವಣಿಗೆಯನ್ನು ನಡೆಸಲಾಗುತ್ತದೆ. ಈ ವರ್ಷದ ಮೆರವಣಿಗೆ ನವೆಂಬರ್ 29 2024ರಂದು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಹೈದರಾಬಾದ್‌ನ ಹಿಂದುತ್ವವಾದಿ ಶಾಸಕ ಟಿ. ರಾಜಾಸಿಂಗ್ ಕೂಡ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 26/11ರ ಭಯೋತ್ಪಾದಕ ದಾಳಿಯಲ್ಲಿ ಮೃತರಾದವರಿಗೂ ಗೌರವಾರ್ಪಣೆ ಮಾಡಲಾಗಿದೆ.

ಒಟ್ಟಿನಲ್ಲಿ, ಬೆಂಕಿ ಅವಘಡ ಸಂಭವಿಸಿದ ವೈರಲ್ ವಿಡಿಯೋ ಅಜ್ಮೀರ್ ದರ್ಗಾದ ವಿರುದ್ದ ಪ್ರತಿಭಟಿಸುವಾಗ ನಡೆದ ಘಟನೆಯದ್ದಲ್ಲ. ಅದು ಮಧ್ಯಪ್ರದೇಶದ ಪಂಜಿನ ಮೆರವಣಿಗೆ ವೇಳೆ ನಡೆದ ಅವಘಡದ್ದಾಗಿದೆ.

ಗಮನಾರ್ಹ ವಿಷಯವೆಂದರೆ, ವಾಟ್ಸಾಪ್‌ನಲ್ಲಿ ಹಂಚಿಕೊಳ್ಳುತ್ತಿರುವ ವಿಡಿಯೋ ‘ಪೈಗಾಮ್ ಟಿವಿ’ ಎಂಬ ಹೆಸರಿನಲ್ಲಿದೆ. ಆ ವಿಡಿಯೋಗೆ ಹಿಂದಿ ಭಾಷೆಯಲ್ಲಿ ಕೊಟ್ಟ ಹಿನ್ನೆಲೆ ಧ್ವನಿಯಲ್ಲಿ ಮಧ್ಯ ಪ್ರದೇಶದ ಖಾಂದ್ವಾದಲ್ಲಿ ಹಿಂದುತ್ವ ಸಂಘಟನೆ ಮುಸ್ಲಿಮರಲ್ಲಿ ಭಯ ಹುಟ್ಟಿಸಲು ಪಂಜಿನ ಮೆರವಣಿಗೆ ಹಮ್ಮಿಕೊಂಡಿತ್ತು. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಆ ವಿಡಿಯೋದಲ್ಲಿ ಎಲ್ಲೂ ಅಜ್ಮೀರ್ ದರ್ಗಾ ವಿಷಯ ಉಲ್ಲೇಖಿಸಿಲ್ಲ. 

ಘಟನೆಯ ಕುರಿತು ರಾಷ್ಟ್ರೀಯ ಮಾಧ್ಯಮಗಳು ಮಾಡಿರುವ ವರದಿಯ ಲಿಂಕ್ ಇಲ್ಲಿದೆ..ಟೈಮ್ಸ್ ನೌ, ಲೋಕಮತ್, ನ್ಯೂಸ್ 18 ಹಿಂದಿ, ಮನಿ ಕಂಟ್ರೋಲ್ 

ಏನಿದು ಅಜ್ಮೀರ್ ದರ್ಗಾ ವಿವಾದ?

ಸೂಫಿ ಸಂತ ಖ್ವಾಜಾ ಮೊಯಿನುದ್ದೀನ್ ಚಿಸ್ತಿ ಅವರ ಸಮಾಧಿ ಅಥವಾ ಅಜ್ಮೀರ್ ದರ್ಗಾವನ್ನು ಶಿವ ದೇವಾಲಯ ಎಂದು ಪ್ರತಿಪಾದಿಸಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಾಲಯ ನ.27 ರಂದು ವಿಚಾರಣೆಗೆ ಸ್ವೀಕರಿಸಿದೆ.

ಹಿಂದೂ ಸೇನೆ ಸಲ್ಲಿಸಿರುವ ಅರ್ಜಿಯನ್ನು ಅಜ್ಮೀರ್‌ನ ಸ್ಥಳೀಯ ನ್ಯಾಯಾಲಯ ವಿಚಾರಣೆಗೆ ಅಂಗೀಕರಿಸಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 20ಕ್ಕೆ ನಿಗದಿಪಡಿಸಿದೆ.

ಅಜ್ಮೀರ್ ಪಶ್ಚಿಮ ಸಿವಿಲ್ ನ್ಯಾಯಾಧೀಶ (ಹಿರಿಯ ವಿಭಾಗ) ಮನಮೋಹನ್ ಚಂದೇಲ್ ಅವರು ವಿಷ್ಣು ಗುಪ್ತಾ ಎಂಬವರು ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಿದ್ದು, ಅಜ್ಮೀರ್ ದರ್ಗಾ ಸಮಿತಿ, ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯ ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ)ಗೆ ನೋಟಿಸ್ ಜಾರಿ ಮಾಡಿದೆ.

ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅರ್ಜಿದಾರ ವಿಷ್ಣು ಗುಪ್ತಾ, ಅಜ್ಮೀರ್ ದರ್ಗಾವು ಮಹಾದೇವನಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಈ ವರ್ಷದ ಸೆಪ್ಟೆಂಬರ್‌ನಲ್ಲಿ, ಅಜ್ಮೀರ್ ದರ್ಗಾವನ್ನು ಶಿವ ದೇವಾಲಯವೆಂದು ಘೋಷಿಸಲು ಕೋರಿ ವಿಷ್ಣು ಗುಪ್ತಾ ಅವರು ಸಲ್ಲಿಸಿದ್ದ ಸಿವಿಲ್ ದಾವೆಯನ್ನು ಸ್ವೀಕರಿಸಲು ಅಜ್ಮೀರ್ ನ್ಯಾಯಾಲಯ ನಿರಾಕರಿಸಿತ್ತು.

ಇದನ್ನೂ ಓದಿ : FACT CHECK | ವಕ್ಫ್‌ ಬೋರ್ಡ್‌ ಅನ್ನು ರದ್ದು ಮಾಡ್ತಾ ಆಂಧ್ರ ಪ್ರದೇಶದ ಸರ್ಕಾರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...