Homeಫ್ಯಾಕ್ಟ್‌ಚೆಕ್Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್...

Fact Check | ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್, ಮೊಹಮ್ಮದ್ ಹಮೀದ್ ಅಲ್ಲ

- Advertisement -
- Advertisement -

ಯುವತಿಯೊಬ್ಬರ ಮೃತದೇಹವೊಂದರ ಚಿತ್ರದೊಂದಿಗೆ, ಮುಸ್ಲಿಂ ಪ್ರೇಮಿ ಈ ಯುವತಿಯನ್ನು ಕೊಂದಿದ್ದಾರೆ ಎಂದು ಪ್ರತಿಪಾದಿಸಿ ಬಿಜೆಪಿ ಬೆಂಬಲಿಗರು ವಾಟ್ಸಪ್, ಫೇಸ್‌ಬುಕ್, ಟ್ವಿಟರ್, ಇನ್ಸ್‌ಟಾಗ್ರಾಮ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುತ್ತಿದ್ದಾರೆ. ಯುವತಿಯ ಮೃತದೇಹದ ಚಿತ್ರದೊಂದಿಗೆ,  [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಹೇಳಿಕೆಯನ್ನು ವೈರಲ್ ಮಾಡುತ್ತಿದ್ದಾರೆ. Fact Check | The girl was killed by her boyfriend Yuvraj Singh, not Mohammad Hameed

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಹೇಳಿಕೆಯನ್ನು ಬಿಜೆಪಿ ಐಟಿ ಸೆಲ್‌ನ ವಾಟ್ಸಪ್ ಗ್ರೂಪ್‌ಗಳು ಹಂಚಿಕೊಳ್ಳುತ್ತಿರುವುದು ನಾನುಗೌರಿ.ಕಾಂ ಗಮನಿಸಿದ್ದು, ಅದನ್ನೆ ಫೇಸ್‌ಬುಕ್, ಟ್ವಿಟರ್ ಮತ್ತು ಇನ್ಸ್‌ಟಾಗ್ರಾಮ್‌ನಲ್ಲಿ ಕೂಡಾ ವೈರಲ್ ಮಾಡಲಾಗುತ್ತಿದೆ. ಅವುಗಳನ್ನು ನೀವು ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ, ಇಲ್ಲಿ ನೋಡಬಹುದಾಗಿದೆ.

ವೈರಲ್ ಚಿತ್ರವನ್ನು ಪ್ರಗತಿ ಮೀಡಿಯಾ ಹಿಮಾಚಲ್ ಎಂಬ ಫೇಸ್‌ಬುಕ್ ಪೇಜ್‌ ಪೋಸ್ಟ್‌ ಮಾಡಿತ್ತು ಮತ್ತು ಯುವತಿಯ ಗುರುತು ಪತ್ತೆಗಾಗಿ ಕೋರಿತ್ತು. “ಪಸಿಯಾನ ಬಳಿಯ ಧಮೋ ಮಜ್ರಾ ಗ್ರಾಮದ ಭಾಕ್ರಾ ಕಾಲುವೆಯಲ್ಲಿ ಯುವತಿಯ ಶವ ಪತ್ತೆಯಾಗಿದೆ… ವಯಸ್ಸು ಸುಮಾರು ಇಪ್ಪತ್ತೆರಡು ವರ್ಷಗಳು…ಮೃತದೇಹವನ್ನು ಪಟಿಯಾಲಾದ ರಾಜೀಂದ್ರ ಆಸ್ಪತ್ರೆಯಲ್ಲಿ ಇರಿಸಲಾಗಿದೆ.” ಎಂದು ಅದರ ಪೋಸ್ಟ್ ಹೇಳಿತ್ತು.

ಫ್ಯಾಕ್ಟ್‌ಚೆಕ್ | Fact Check

ವೈರಲ್ ಚಿತ್ರವನ್ನು ನಾನುಗೌರಿ.ಕಾಂ ರಿವರ್ಸ್ ಸರ್ಚ್‌ ಮೂಲಕ ಹುಡುಕಾಡಿದಾಗ crazynewsindia.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಈ ಚಿತ್ರ ನಮಗೆ ಕಂಡುಬಂದಿದೆ. ಜನವರಿ 23ರಂದು ಮಾಡಿದ ವರದಿಯಲ್ಲಿ, ಯುವತಿಯನ್ನು ಹಿಮಾಚಲ ಪ್ರದೇಶದ ಜೋಗಿಂದರ್‌ನಗರದ ನಿವಾಸಿ ಯುವತಿಯ ನಿಶಾ ಸೋನಿ ಎಂದು ಗುರುತಿಸಲಾಗಿದೆ.

ಈ ಸುಳಿವನ್ನು ಹಿಡಿದು ನಾವು ಹುಡುಕಾಡಿದಾಗ ಟ್ರಿಬ್ಯೂನ್‌ ಪತ್ರಿಕೆ ಈ ಬಗ್ಗೆ ವರದಿ ಮಾಡಿದ್ದು, ಯುವತಿಯ ಶವವನ್ನು ಬುಧವಾರ ಪಂಜಾಬ್‌ನ ರೋಪರ್ ಬಳಿಯ ಪಟಿಯಾಲ ಕಾಲುವೆಯಲ್ಲಿ ಪತ್ತೆ ಮಾಡಲಾಗಿತ್ತು ಎಂದು ಪತ್ರಿಕೆ ವರದಿ ಮಾಡಿದೆ.

ಅಲ್ಲದೆ, ಇಂಡಿಯನ್ ಎಕ್ಸ್‌ಪ್ರೆಸ್ ಕೂಡಾ ಈ ಘಟನೆಯನ್ನು ವರದಿ ಮಾಡಿದೆ. ವರದಿಯ ಪ್ರಕಾರ, “ಯುವತಿಯನ್ನು ಕಾಲುವೆಗೆ ತಳ್ಳಿ ಕೊಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆರೋಪಿಯು ಪೊಲೀಸ್‌ ಸಿಬ್ಬಂದಿಯಾಗಿದ್ದ, ಯುವರಾಜ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ವಿವಾಹಿತನಾಗಿದ್ದು, ಯುವತಿಯೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ. ಆರೋಪಿಯು ತನ್ನ ಪತ್ನಿ ವಿದೇಶದಿಂದ ಭಾರತಕ್ಕೆ ಮರಳುತ್ತಿದ್ದರಿಂದ ಬಲಿಪಶುವನ್ನು ತೊಡೆದುಹಾಕಲು ಬಯಸಿದ್ದ. ಹಾಗಾಗಿ, ಜನವರಿ 20 ರ ರಾತ್ರಿ ಯುವತಿಯನ್ನು ಭೇಟಿಯಾಗಿ ಪತ್ರೇರಿ ಜಟ್ಟನ್ ಗ್ರಾಮದ ಭಖ್ರಾ ಕಾಲುವೆಯ ಸೇತುವೆಯ ಬಳಿಗೆ ಕರೆದೊಯ್ದು ಅಲ್ಲಿ ಆಕೆಯನ್ನು ಕಾಲುವೆಗೆ ತಳ್ಳಿದ್ದನು. ಜನವರಿ 22 ರಂದು, ಪಟಿಯಾಲ ಜಿಲ್ಲೆಯ ಪಾಸಿಯಾನ ಸೇತುವೆಯ ಬಳಿ ಯುವತಿಯ ಶವವನ್ನು ಹೊರತೆಗೆದರು ಮತ್ತು ಕುಟುಂಬವು ಆಕೆಯನ್ನು ಗುರುತಿಸಿತು.

ಮೃತ ಯುವತಿ ಚಂಡೀಗಢದಲ್ಲಿ ಬಿಎಸ್ಸಿ (ವೈದ್ಯಕೀಯ) ಪದವಿ ಪಡೆದಿದ್ದು, ಪ್ರಸ್ತುತ ಚಂಡೀಗಢದ ಸಂಸ್ಥೆಯಿಂದ ಗಗನಸಖಿಯಾಗಲು ತರಬೇತಿ ಪಡೆಯುತ್ತಿದ್ದರು. ಅವರು ಮೊಹಾಲಿಯ ಸೆಕ್ಟರ್ 123 ರಲ್ಲಿ ಬಾಡಿಗೆ ವಸತಿಗೃಹದಲ್ಲಿ ವಾಸಿಸುತ್ತಿದ್ದರು ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಅಲ್ಲದೆ, ಈ ಘಟನೆಯನ್ನು ನ್ಯೂಸ್‌18 ಪಂಜಾಬ್ ಕೂಡಾ ವರದಿ ಮಾಡಿದ್ದು, ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಘಟನೆಯ ಎಫ್‌ಐಆರ್‌ ಅನ್ನು ಪಡೆದುಕೊಂಡಿದ್ದು, ಅದರಲ್ಲಿ ಆರೋಪಿ ಹೆಸರು ಕರ್ನೈಲ್‌ ಸಿಂಗ್ ಅವರ ಮಗ ಯುವರಾಜ್‌ ಸಿಂಗ್ ಎಂದು ಹೆಸರಿಸಿರುವುದು ಕಾಣಬಹುದಾಗಿದೆ.

ಒಟ್ಟಿನಲ್ಲಿ ಹೇಳಬಹುದಾಗದರೆ, [ ನೀಲಂ,,, ಅಪ್ಪ ಅಮ್ಮನ ಮಾತು ಕೇಳದೆ, ಅವರ ಮಾತುಗಳನ್ನು ವಿರೋಧಿಸಿ “ಮಹಮ್ಮದ್ ಹಮೀದ್” ನನ್ನು ಮದುವೆಯಾಗಿ ಹೋದ 6 ತಿಂಗಳಲ್ಲಿ ಕಾಲುವೆಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ,,,] ಎಂಬ ಬರಹದೊಂದಿಗೆ ಪ್ರತಿಪಾದಿಸಿ ವೈರಲ್ ಆಗಿರುವ ಚಿತ್ರವೂ ನಿಶಾ ಸೋನಿ ಎಂಬ ಹಿಮಾಚಲ ಪ್ರದೇಶದ ಯುವತಿಯೊಬ್ಬರ ಚಿತ್ರವಾಗಿದೆ. ಈ ಯುವತಿಯನ್ನು ಕೊಂದಿದ್ದು ಅವರ ಪ್ರೇಮಿ ಯುವರಾಜ್ ಸಿಂಗ್ ಎಂಬ ಆರೋಪಿಯಾಗಿದ್ದಾರೆ. ಈ ಘಟನೆಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ, ಯುವತಿಯ ಪ್ರೇಮಿಯ ಹೆಸರು ಮಹಮ್ಮದ್ ಹಮೀದ್ ಅಲ್ಲ.

ಇದನ್ನೂಓದಿ:  ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ಫ್ಯಾಕ್ಟ್‌ಚೆಕ್ | ಹಸುವಿಗೆ ಗುಂಡು ಹಾರಿಸುತ್ತಿರುವ ಈ ವ್ಯಕ್ತಿ ಮುಸ್ಲಿಂ ಅಲ್ಲ ಮತ್ತು ಪ್ರಿಯಾಂಕ ಗಾಂಧಿ ಗೆಲುವಿಗೆ ಸಂಭ್ರಮಿಸುತ್ತಿರುವುದೂ ಅಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...