Homeಫ್ಯಾಕ್ಟ್‌ಚೆಕ್Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

Fact Check: ನಮಾಝ್‌ಗಾಗಿ ಹಮೀದ್ ಅನ್ಸಾರಿ ರಾಜ್ಯಸಭೆ ಕಲಾಪ ಮುಂದೂಡುತ್ತಿದ್ದರು ಎಂಬುವುದು ಸುಳ್ಳು

- Advertisement -
- Advertisement -

ಮಾಜಿ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಮಾಜಿ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ರಾಜ್ಯಸಭೆಯಲ್ಲಿ ಪರಸ್ಪರ ಮಾತನಾಡಿರುವ ವಿಡಿಯೋವೊಂದು ಭಾರೀ ವೈರಲ್‌ ಆಗಿದ್ದು, “ಹಮೀದ್ ಅನ್ಸಾರಿ ಅವರು ನಮಾಝ್‌ಗೆ ತೆರಳುವ ಸಲುವಾಗಿ ರಾಜ್ಯಸಭೆ ಕಲಾಪವನ್ನು ಮುಂದೂಡುತ್ತಿದ್ದರು. ಈ ಕುರಿತು ಮಾಯಾವತಿ ರಾಜ್ಯಸಭೆಯಲ್ಲಿ ಪ್ರಶ್ನೆ ಎತ್ತಿದ್ದರು” ಎಂದು ಶೀರ್ಷಿಕೆ ಕೊಟ್ಟು ಹಂಚಿಕೊಳ್ಳಲಾಗ್ತಿದೆ.

ಫೆ.10, 2024ರಂದು ಆಂಧ್ರ ಪ್ರದೇಶ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಷ್ಣು ವರ್ಧನ್ ರೆಡ್ಡಿ ಅವರು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದು, “ಹಮೀದ್ ಅನ್ಸಾರಿ ಅವರನ್ನು ಉಪ ರಾಷ್ಟ್ರಪತಿಯಾಗಿ ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಅವರು ಪ್ರಾರ್ಥನೆ ಸಲ್ಲಿಸಲು ಕಲಾಪದ ವೇಳೆ ಪ್ರತಿದಿನ 12:00 ಗಂಟೆಗೆ ರಾಜ್ಯಸಭೆಯಿಂದ ಹೊರಡುತ್ತಿದ್ದರು. ಎಲ್ಲಾ ಸದಸ್ಯರು ಸಾಂವಿಧಾನಿಕ ಕಲಾಪವನ್ನು ನಿಲ್ಲಿಸಿ, ಅವರ ವಾಪಸಾತಿಗೆ ಕಾಯುತ್ತಾ ಖಾಲಿ ಕೂರುತ್ತಿದ್ದರು. ಮಾಯಾವತಿ ಅವರು ಈ ವಿಷಯವನ್ನು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದರು. ಆದರೆ, ಕಾಂಗ್ರೆಸ್ ಅವರನ್ನು ಬೆಂಬಲಿಸಿರಲಿಲ್ಲ. ಈಗ ಕಾಂಗ್ರೆಸ್ ಜಾತ್ಯತೀತೆಯ ಬಗ್ಗೆ ಪಾಠ ಮಾಡುತ್ತಿದೆ” ಎಂದು ಬರೆದುಕೊಂಡಿದ್ದರು.

ನಿವೃತ್ತ ಐಎಎಸ್ ಅಧಿಕಾರಿ ಸೂರ್ಯ ಪ್ರತಾಪ್ ಸಿಂಗ್ ಅವರು ಫೆ.7, 2024ರಂದು ಈ ವಿಡಿಯೋ ಹಂಚಿಕೊಂಡಿದ್ದು, “ಉಪರಾಷ್ಟ್ರಪತಿಯಾಗಿದ್ದ ಹಮೀದ್ ಅನ್ಸಾರಿ ಅವರು ರಾಜ್ಯಸಭೆ ಕಲಾಪವನ್ನು ಪ್ರತಿದಿನ 12:00 ಗಂಟೆಗೆ ಮುಂದೂಡಿ ನಮಾಜ್ ಮಾಡಲು ಹೋಗುತ್ತಿದ್ದರು. ಎಲ್ಲಾ ಸಂಸದರು ಸಂವಿಧಾನಾತ್ಮಕ ಕೆಲಸಗಳನ್ನು ನಿಲ್ಲಿಸಿ ಅವರಿಗಾಗಿ ಕಾಯುತ್ತಾ ಕೂರುತ್ತಿದ್ದರು. ಹಮೀದ್ ಅನ್ಸಾರಿ ಅವರನ್ನು ಕಾಂಗ್ರೆಸ್ ನಾಮನಿರ್ದೇಶನ ಮಾಡಿತ್ತು. ಮಾಯಾವತಿಯವರು ಈ ವಿಷಯವನ್ನು ಪ್ರಸ್ತಾಪಿಸಿದಾಗ, ಅನ್ಸಾರಿಯವರ ಉತ್ತರವನ್ನು ನೋಡಿ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಗೂಗಲ್‌ನಲ್ಲಿ ಈ ವಿಡಿಯೋ ಕುರಿತು ನಾವು ಹುಡುಕಾಟ ನಡೆಸಿದಾಗ, ಇದು 2012ರಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಆಗಿನ ರಾಜ್ಯಸಭೆ ಅಧ್ಯಕ್ಷ ಹಮೀದ್ ಅನ್ಸಾರಿ ಅವರು ಮತ್ತು ಮಾಯಾವತಿ ನಡುವೆ ನಡೆದ ಚರ್ಚೆಯದ್ದು ಎಂದು ತಿಳಿದು ಬಂದಿದೆ. ವಿಡಿಯೋದಲ್ಲಿ “ಪ್ರತಿದಿನ 12 ಗಂಟೆಯ ನಂತರ ಕಲಾಪ ಸ್ಥಗಿತಗೊಳ್ಳುತ್ತಿದೆ. ನೀವು ಸದನದ ಅಧ್ಯಕ್ಷರು, ಪ್ರತಿದಿನ 12 ಗಂಟೆಗೆ ಎದ್ದು ಹೊರಡುತ್ತೀರಿ. ಹೀಗಾದರೆ ಯಾರು ಸಂಸತ್ತಿನ ಕಲಾಪಗಳ ಅಧ್ಯಕ್ಷತೆ ವಹಿಸುತ್ತಾರೆ? ಸದನವು ಕ್ರಮ ಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಿ” ಎಂದು ಹಮೀದ್ ಅನ್ಸಾರಿಗೆ ಮಾಯಾವತಿ ಹೇಳಿರುವುದನ್ನು ನೋಡಬಹುದು.

ಮಾಯಾವತಿ ಪ್ರಶ್ನೆ ಮಾಡುತ್ತಿದ್ದಂತೆ ಹಮೀದ್ ಅನ್ಸಾರಿ ಅವರು ಕುಳಿತುಕೊಳ್ಳುವಂತೆ ಮನವಿ ಮಾಡಿರುವುದು ವಿಡಿಯೋದಲ್ಲಿದೆ. ಇಲ್ಲಿ ಮಾಯಾವತಿ ಅವರು ಅನ್ಸಾರಿ ಅವರಿಗೆ ಪ್ರಶ್ನೆ ಕೇಳಿರುವ ವಿಡಿಯೋ ನಿಜವಾದದ್ದೆ. ಆದರೆ, ಮಾಯಾವತಿ “ನೀವು 12 ಗಂಟೆಗೆ ಎದ್ದು ಹೊರಡುತ್ತೀರಿ ಎಂದು ಹೇಳಿದ್ದಾರೆಯೇ ಹೊರತು, ಎಲ್ಲೂ ನಮಾಝ್‌ಗೆ ಎದ್ದು ಹೋಗುತ್ತೀರಿ” ಎಂದು ಹೇಳಿಲ್ಲ.

ಮಾಯಾವತಿ ಅವರು ಮಾತನಾಡಿರುವ ಸಂಪೂರ್ಣ ವಿಡಿಯೋ ಇಲ್ಲಿದೆ

ವೈರಲ್ ವಿಡಿಯೋವನ್ನು ಮೊದಲು ಫೆಬ್ರವರಿ 4,2024 ರಂದು ಬಹುಜನ ಸಮಾಜ ಪಕ್ಷದ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಆ ಬಳಿಕ ಅದನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ ಮಾಡಿದ್ದು, ಅನ್ಸಾರಿ ಮತ್ತು ಕಾಂಗ್ರೆಸ್ ಮುಸ್ಲಿಂ ಪರ ಎಂದು ಆರೋಪಿಸಿದ್ದಾರೆ.

ಡಿಸೆಂಬರ್ 2012ರ ಮಾಧ್ಯಮ ವರದಿಗಳ ಪ್ರಕಾರ, ಮಾಯಾವತಿ ಅವರು ಸರ್ಕಾರಿ ಉದ್ಯೋಗ ಬಡ್ತಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯ ವಿಷಯದ ಬಗ್ಗೆ ಮಾತನಾಡಲು ಬಯಸಿದ್ದರು. ಆದರೆ, ಸಮಾಜವಾದಿ ಪಕ್ಷದ ಪ್ರತಿಭಟನೆಯಿಂದಾಗಿ ಸಂಸತ್ ಕಲಾಪ ಅಸ್ತವ್ಯಸ್ತಗೊಂಡಿತ್ತು. ಇದು ಮಾಯಾವತಿ ಅವರನ್ನು ಕೆರಳಿಸಿತ್ತು.

ವರದಿ ಲಿಂಕ್ ಇಲ್ಲಿದೆ 

ಅದೇ ದಿನ, ಮಾಯಾವತಿ ಅವರು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿ ಮಾತನಾಡಿದ್ದರು. “ಅನ್ಸಾರಿ ಅವರು ಪ್ರತಿದಿನ ಮಧ್ಯಾಹ್ನ ಸಂಸತ್ತಿನಿಂದ ಹೊರಡುತ್ತಾರೆ. ಮಧ್ಯಾಹ್ನದ ನಂತರ ಬೇರೆಯವರು ರಾಜ್ಯಸಭೆಯ ಅಧ್ಯಕ್ಷ ಪೀಠದಲ್ಲಿ ಕೂರುತ್ತಾರೆ. ಇದರಿಂದಾಗಿ ಸರ್ಕಾರಿ ಉದ್ಯೋಗ ಬಡ್ತಿಯಲ್ಲಿ ಎಸ್‌ಸಿ/ಎಸ್‌ಟಿಗಳಿಗೆ ಕೋಟಾ ಒದಗಿಸುವ ಮಸೂದೆಯನ್ನು ಚರ್ಚಿಸಲಾಗಲಿಲ್ಲ. ಸದನವನ್ನು ಕ್ರಮಬದ್ಧವಾಗಿಟ್ಟಿಲ್ಲ ಎಂದು ಅನ್ಸಾರಿ ಮತ್ತು ಸರ್ಕಾರವನ್ನು ಮಾಯಾವತಿ ದೂಷಿಸಿದ್ದರು.

ಈ ಘಟನೆಯ ಬಗ್ಗೆ ಹಮೀದ್ ಅನ್ಸಾರಿ ತಮ್ಮ ಆತ್ಮಚರಿತ್ರೆ “ಬೈ ಮೆನಿ ಎ ಹ್ಯಾಪಿ ಆಕ್ಸಿಡೆಂಟ್” ನಲ್ಲಿ ಬರೆದಿದ್ದಾರೆ ಎಂದು ‘ಇಂಡಿಯಾ ಟುಡೇ’ ವರದಿ ಮಾಡಿದೆ. ಅನ್ಸಾರಿ ಪ್ರಕಾರ, ಮಾಯಾವತಿ ಮರುದಿನ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದರು. ಆದರೆ, ಪುಸ್ತಕದಲ್ಲಿ ನಮಾಝ್‌ಗಾಗಿ ಎದ್ದು ಹೋಗಿದ್ದಕ್ಕೆ ಮಾಯಾವತಿ ಪ್ರಶ್ನೆ ಎತ್ತಿದ್ದರು ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಹಾಗಾಗಿ, ಇದು 12 ವರ್ಷಗಳ ಹಿಂದೆ ಸಂಸತ್ತಿನಲ್ಲಿ ನಡೆದ ಘಟನೆಯ ವಿಡಿಯೋವನ್ನು ಕೋಮು ಕೋನದಲ್ಲಿ ತಪ್ಪಾದ ಮಾಹಿತಿಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗಿದೆ.

ಇದನ್ನೂ ಓದಿ : Fact Check : ದೆಹಲಿಯಲ್ಲಿ ಪ್ರತಿಭಟನಾ ನಿರತ ರೈತರು ಹಿಂದೂ ದೇವಾಲಯದ ಮೇಲೆ ದಾಳಿ ಮಾಡಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...