HomeದಿಟನಾಗರFact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

Fact Check: ರಂಝಾನ್‌ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

- Advertisement -
- Advertisement -

‘ರಂಝಾನ್ ಪ್ರಯುಕ್ತ ರಾಜ್ಯದ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರ ಸಮಯ ಬದಲಿಸಿದೆ. ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಶಾಲೆಯಿಂದ ಅರ್ಧ ಗಂಟೆ ಬೇಗ ಹೋಗಬಹುದು’ ಎಂಬ ಸುದ್ದಿಯೊಂದು ಎರಡು ದಿನಗಳ ಹಿಂದೆ ಮುಖ್ಯವಾಹಿನಿ ಮಾಧ್ಯಮಗಳಲ್ಲಿ ಪ್ರಕಟಗೊಂಡಿದೆ.

ಟಿವಿ9, ಸುವರ್ಣ ನ್ಯೂಸ್‌, ಹೊಸ ದಿಗಂತ ಸೇರಿದಂತೆ ಕನ್ನಡದ ಮುಖ್ಯವಾಹಿನಿ ಮಾಧ್ಯಮಗಳು ಈ ಸುದ್ದಿಯನ್ನು ಪ್ರಸಾರ ಮಾಡಿವೆ.

ಫೋಸ್ಟ್ ಲಿಂಕ್ ಇಲ್ಲಿದೆ

ಇದನ್ನೇ ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು, “ರಂಜಾನ್ ಹಬ್ಬದ ಪ್ರಯುಕ್ತ ಸಂಜೆ ನಾಲ್ಕರ ಬದಲು ಮಧ್ಯಾಹ್ನ 12:45ಕ್ಕೆ ಶಾಲೆ ಮುಕ್ತಾಯಗೊಳಿಸಲು ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಸರ್ಕಾರದ ಮುಸ್ಲಿಂ ಪ್ರೀತಿ” ಎಂದು ಬರೆದುಕೊಂಡಿದ್ದಾರೆ.


ಫ್ಯಾಕ್ಟ್‌ಚೆಕ್:
ರಾಜ್ಯ ಸರ್ಕಾರ ರಂಝಾನ್ ಪ್ರಯುಕ್ತ ಶಾಲೆಗಳ ವೇಳಾಪಟ್ಟಿ ಬದಲಾಯಿಸಿದೆ ಎಂಬ ಸುದ್ದಿಯ ಸತ್ಯಾಸತ್ಯತೆ ತಿಳಿಯುವ ಪ್ರಯತ್ನವನ್ನು ನಾನುಗೌರಿ.ಕಾಂ ಮಾಡಿದೆ.

ಇದಕ್ಕಾಗಿ ನಾವು ಮೊದಲು ಸರ್ಕಾರ ಸಮಯ ಬದಲಾವಣೆಯ ಕುರಿತು ಸುತ್ತೋಲೆ ಹೊರಡಿಸಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಮಾರ್ಚ್‌ 6,2024ರಂದು ‘ಕರ್ನಾಟಕ ರಾಜ್ಯ ಉರ್ದು ಮತ್ತು ಇತರ ಅಲ್ಪ ಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಆಯುಕ್ತರ ಕಚೇರಿಯಿಂದ’ ಹೊರಡಿಸಿರುವ ಸುತ್ತೋಲೆ ದೊರೆತಿದೆ.

ಈ ಸುತ್ತೋಲೆಯ ಆರಂಭದಲ್ಲಿಯೇ “ರಂಜಾನ್ ಮಾಹೆಯಲ್ಲಿ ರಾಜ್ಯದ ಉರ್ದು ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಾಲಾ ಅವಧಿ ಬದಲಾವಣೆ ಮಾಡುವ ಬಗ್ಗೆ” ಎಂಬ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದೆ.

ಸುತ್ತೋಲೆಯ ಎರಡನೇ ಪ್ಯಾರದಲ್ಲಿ “ಉಲ್ಲೇಖಿತ 2ರ ಸರ್ಕಾರದ ಪತ್ರದಲ್ಲಿ ರಂಜಾನ್ ಮಾಸದ ಪ್ರಯುಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ರಂಜಾನ್ ತಿಂಗಳು ಪ್ರಾರಂಭವಾದ ದಿನಾಂಕದಂದು ಒಂದು ತಿಂಗಳವರೆಗೆ ಮಾತ್ರ ನಡೆಸಲು ಈ ಹಿಂದೆ ದಿನಾಂಕ 31, 10 2002ರಲ್ಲಿ ಹೊರಡಿಸಲಾಗಿದ್ದ ಸ್ಟ್ಯಾಂಡಿಂಗ್ ಆರ್ಡರ್ ಅನ್ನು ಯಥಾವತ್ತು ಹೊರಡಿಸಲು ಸ್ವೀಕೃತವಾದ ಮನವಿಗಳನ್ನು ನಿಯಮನುಸಾರ ಪರಿಶೀಲಿಸಿ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ” ಎನ್ನುವುದನ್ನು ಉಲ್ಲೇಖಿಸಿರುವುದನ್ನು ಕಾಣಬಹುದು.

ಅಧಿಕೃತ ಸುತ್ತೋಲೆಯ ಪ್ರಕಾರ, ರಂಝಾನ್ ಪ್ರಯುಕ್ತ ಒಂದು ತಿಂಗಳ ಕಾಲ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ, ಹಿರಿಯ ಮತ್ತು ಪ್ರೌಢ ಶಾಲೆಗಳನ್ನು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 12:45 ರವರೆಗೆ ಸಮಯ ಬದಲಾವಣೆ ಮಾಡಿ ನಡೆಸಲು ಸೂಚಿಸಲಾಗಿದೆ.

ಸುತ್ತೋಲೆಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿರುವಂತೆ ರಂಝಾನ್ ಪ್ರಯಕ್ತ ರಾಜ್ಯದಲ್ಲಿನ ಉರ್ದು ಮಾಧ್ಯಮದ ಕಿರಿಯ ಹಿರಿಯ ಮತ್ತು ಪ್ರೌಢ ಶಾಲೆಗಳ ಸಮಯ ಮಾತ್ರ ಬದಲಾವಣೆ ಮಾಡಲು ಸೂಚಿಸಲಾಗಿದೆ. ಅಲ್ಲದೆ, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಅಲ್ಲ. ಮಾಧ್ಯಮಗಳು ಉರ್ದು ಶಾಲೆಗಳ ಸಮಯ ಬದಲಾಯಿಸಲಾಗಿದೆ ಎಂದು ಉಲ್ಲೇಖಿಸದೆ, ಸರ್ಕಾರಿ, ಅನುದಾನಿತ ಶಾಲೆಗಳ ಸಮಯ ಬದಲಾವಣೆ ಎಂದು ಸುದ್ದಿ ಪ್ರಸಾರ ಮಾಡಿ ತಪ್ಪು ಮಾಹಿತಿ ನೀಡಿದೆ. ಇದನ್ನೇ ನಂಬಿರುವ ಅನೇಕ ಜನರು ಮುಸ್ಲಿಮರ ರಂಝಾನ್ ಆಚರಣೆಗಾಗಿ ಸರ್ಕಾರಿ ಶಾಲೆಯ ವೇಳಾಪಟ್ಟಿಯನ್ನೇ ಬದಲಾಯಿಸಲಾಗಿದೆ ಎಂದು ಸರ್ಕಾರದ ಆದೇಶಕ್ಕೆ ಕೋಮು ಬಣ್ಣ ಬಳಿದಿದ್ದಾರೆ.

ಇದನ್ನೂ ಓದಿ : Fact Check: ವಿದೇಶಿ ಮಹಿಳೆಯ ಅತ್ಯಾಚಾರ ಆರೋಪಿಗಳೆಲ್ಲರೂ ಕ್ರೈಸ್ತರೆಂದು ಸುಳ್ಳು ಸುದ್ದಿ ಹಂಚಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...