Homeಫ್ಯಾಕ್ಟ್‌ಚೆಕ್FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

FACT CHECK : ಆರೋಗ್ಯ, ಜೀವ ವಿಮೆ ಮೇಲಿನ ಜಿಎಸ್‌ಟಿಯನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆಯಾ?

- Advertisement -
- Advertisement -

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಕೌನ್ಸಿಲ್ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿಯನ್ನು ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಯವರು ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ತೆಗೆದು ಹಾಕುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಅವರಿಗೆ ಕೆಲ ದಿನಗಳ ಹಿಂದೆ ಪತ್ರ ಬರೆದಿದ್ದರು. ಹಾಗಾಗಿ, ಜಿಎಸ್‌ಟಿ ಇಳಿಸಲಾಗಿದೆ ಎಂದು ಪೋಸ್ಟ್ ಹಾಕಿದವರು ಸಚಿವ ನಿತಿನ್ ಗಡ್ಕರಿಯವರಿಗೂ ಧನ್ಯವಾದ ಹೇಳಿದ್ದಾರೆ.

ಹಾಗಿದ್ದರೆ, ನಿಜವಾಗಿಯೂ ಕೇಂದ್ರ ಸರ್ಕಾರ ಆರೋಗ್ಯ ವಿಮೆಯ ಮೇಲಿನ ಜಿಎಸ್‌ಟಿ ಶೇಕಡಾ 18% ರಿಂದ ಶೇಕಡಾ 5 % ಕ್ಕೆ ಇಳಿಸಿದೆಯೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಕಡಿತಗೊಳಿಸಲಾಗಿದೆಯೇ? ಎಂದು ಪರಿಶೀಲಿಸಲು ನಾವು ಮಾಹಿತಿ ಹುಡುಕಿದಾಗ, ಜಿಎಸ್‌ಟಿ ಕೌನ್ಸಿಲ್‌ ಜಿಎಸ್‌ಟಿ ದರವನ್ನು ಶೇ.18ರಿಂದ ಶೇ. 5ಕ್ಕೆ ಕಡಿತಗೊಳಿಸಿದೆ ಎಂದು ಆದೇಶ ಹೊರಡಿಸಿದಿರುವುದರ ಕುರಿತು ಯಾವುದೇ ವಿಶ್ವಾಸಾರ್ಹ ವರದಿಗಳು ನಮಗೆ ಲಭ್ಯವಾಗಿಲ್ಲ.

ಸೆಪ್ಟೆಂಬರ್ 12ರಂದು ಪ್ರಜಾವಾಣಿ ವೆಬ್‌ಸೈಟ್ ಪ್ರಕಟಿಸಿದ ಲೇಖನದಲ್ಲಿ “ಆರೋಗ್ಯ ಮತ್ತು ಜೀವ ವಿಮಾ ಕಂತುಗಳ ಮೇಲೆ ಜಿಎಸ್‌ಟಿ ವಿಧಿಸುವುದರ ವಿರುದ್ಧ ಕೇಳಿ ಬಂದಿರುವ ಮಾತುಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿದಂತೆ ಕಾಣುತ್ತಿದೆ. ಈ ಬಗ್ಗೆ ಪರಿಶೀಲನೆ ನಡೆಸುವುದಕ್ಕಾಗಿ ಸಚಿವರ ತಂಡವನ್ನು ರಚಿಸಿದೆ. ತಂಡವು ವಸ್ತುಸ್ಥಿತಿ ಅಧ್ಯಯನ ಮಾಡಿ ಜಿಎಸ್‌ಟಿ ಕೌನ್ಸಿಲ್‌ಗೆ ವರದಿ ನೀಡಲಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಮಂಡಳಿಯು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಜಿಎಸ್‌ಟಿಯನ್ನು ಪೂರ್ಣವಾಗಿ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರ ಪರಿಗಣಿಸಿದಂತೆ ಕಾಣುತ್ತಿಲ್ಲ. ತೆರಿಗೆ ಕಡಿತಕ್ಕೆ ಮಾತ್ರ ಒಲವು ತೋರಿದಂತಿದೆ” ಎಂದು ಹೇಳಿತ್ತು.

“ಕೆಲವು ವರ್ಷಗಳಿಂದೀಚೆಗೆ ಆರೋಗ್ಯ ಸೇವೆ ದುಬಾರಿಯಾಗುತ್ತಿದೆ. ರೋಗಿಗಳ ಆಸ್ಪತ್ರೆ ವೆಚ್ಚ ಜಾಸ್ತಿಯಾಗುತ್ತಿದೆ. ಕಳೆದ ವರ್ಷ ವೈದ್ಯಕೀಯ ಹಣದುಬ್ಬರ ಶೇ 14ರಷ್ಟಿತ್ತು. ಇದು ವಿಮಾ ಕಂಪನಿಗಳಿಗೆ ಹೊರೆಯಾಗುತ್ತಿದೆ. ಇದರೊಂದಿಗೆ ಜಿಎಸ್‌ಟಿ ಜಾಸ್ತಿ ಇರುವುದರಿಂದ ವಿಮಾ ಕಂತುಗಳ ಮೊತ್ತ ಹೆಚ್ಚಳವಾಗಿದೆ. ಹೀಗಾಗಿ ಜಿಎಸ್‌ಟಿಯಲ್ಲಿ ಕಡಿತ ಮಾಡಬೇಕು ಎಂಬುವುದು ವಿಮಾ ಕ್ಷೇತ್ರದಲ್ಲಿ ತೊಡಗಿಕೊಂಡವರ ಹೇಳಿಕೆ. ಭಾರತೀಯ ಸಾಮಾನ್ಯ ವಿಮಾ ಏಜೆಂಟರ ಮಹಾ ಒಕ್ಕೂಟವು ಜೂನ್‌ ತಿಂಗಳಲ್ಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಬರೆದು ಸಾಮಾನ್ಯ ವಿಮೆಗಳ ಮೇಲಿನ ಜಿಎಸ್‌ಟಿಯನ್ನು ಶೇ 18ರಿಂದ ಶೇ 5ಕ್ಕೆ ಇಳಿಸಬೇಕು ಎಂದು ಒತ್ತಾಯಿಸಿತ್ತು” ಎಂದು ಪ್ರಜಾವಾಣಿ ಲೇಖನ ತಿಳಿಸಿದೆ.

ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆ. ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಗೆ ಜುಲೈ 31ರಂದು ಪತ್ರ ಬರೆದ ನಂತರ ಈ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ.

ಒಟ್ಟಿನಲ್ಲಿ, ಆರೋಗ್ಯ ವಿಮೆ ಮೇಲೆ ಜಿಎಸ್‌ಟಿ ವಿಧಿಸಬಾರದು ಎಂಬ ಒತ್ತಾಯ ಹಲವು ಸಮಯದಿಂದ ಕೇಳಿಬರುತ್ತಿದೆಯಾದರೂ ಆರೋಗ್ಯ ವಿಮೆ ಮೇಲಿನ ಜಿಎಸ್‌ಟಿಯನ್ನು ಶೇಕಡ 18% ರಿಂದ ಶೇಖಡ 5% ಇಳಿಸಲಾಗಿದೆ ಎಂಬುವುದು ಸುಳ್ಳು. ಈ ಬಗ್ಗೆ ನವೆಂಬರ್ 2024ರಲ್ಲಿ ನಡೆಯುವ ಜಿಎಸ್‌ಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....