Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು...

FACT CHECK : ಮುಸ್ಲಿಂ ವ್ಯಕ್ತಿ ವಂದೇ ಭಾರತ್ ರೈಲಿನ ಗಾಜನ್ನು ಸುತ್ತಿಗೆಯಿಂದ ಒಡೆದ್ದಾನೆ ಎಂಬುವುದು ನಿಜವೇ?

- Advertisement -
- Advertisement -

ವ್ಯಕ್ತಿಯೊಬ್ಬ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿನ ಕಿಟಕಿಯ ಗಾಜನ್ನು ಸುತ್ತಿಗೆಯಿಂದ ಒಡೆದು ಹಾಕುವ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮುಸ್ಲಿಂ ವ್ಯಕ್ತಿ ರೈಲಿನ ಗಾಜನ್ನು ಒಡೆದಿದ್ದಾನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ.

ದೇಶದ ಹಲವು ಭಾಗಗಳಲ್ಲಿ ರೈಲು ಹಳಿ ಮೇಲೆ ವಿವಿಧ ವಸ್ತುಗಳನ್ನು ಇಟ್ಟು ರೈಲು ಹಳಿ ತಪ್ಪಿಸಲು ಪ್ರಯತ್ನಿಸುವದು, ವಂದೇ ಭಾರತ್ ರೈಲುಗಳ ಮೇಲೆ ಕಲ್ಲು ತೂರಾಟ ನಡೆಸುವುದು ಸೇರಿದಂತೆ ಎಲ್ಲಾ ಘಟನೆಗಳನ್ನು ಮುಸ್ಲಿಮರ ತಲೆಗೆ ಕಟ್ಟುತ್ತಿರುವ ಸಂದರ್ಭದಲ್ಲಿ ವಂದೇ ಭಾರತ್ ರೈಲಿನ ಗಾಜನ್ನು ಮುಸ್ಲಿಂ ವ್ಯಕ್ತಿ ರಾಜಾರೋಷವಾಗಿ ಒಡೆದು ಹಾಕಿದ್ದಾನೆ ಎಂಬುವುದು ಮಹತ್ವ ಪಡೆದುಕೊಂಡಿದೆ. ಹಾಗಾಗಿ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ತಮಿಳುನಾಡಿನ ತಿರುನೆಲ್ವೇಲಿ ಕೋಚಿಂಗ್ ಡಿಪೋದಲ್ಲಿ ಸೆಕ್ಷನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಂಥೀರ ಮೂರ್ತಿ ಎಂಬವರು ಪೋಸ್ಟ್‌ವೊಂದಕ್ಕೆ ಪ್ರತಿಕ್ರಿಯೆ ನೀಡಿದ್ದ ಕಮೆಂಟ್ ಲಭ್ಯವಾಗಿದೆ.

ಕಮೆಂಟ್ ಪ್ರಕಾರ, ವಂದೇ ಭಾರತ್‌ ರೈಲಿಗೆ ಹಾನಿ ಮಾಡಲು ಗಾಜುಗಳನ್ನು ಒಡೆಯಲಾಗಿಲ್ಲ‌. ಬದಲಿಗೆ ಈಗಾಗಲೇ ಒಡೆದು ಹೋಗಿದ್ದ ಕಿಟಕಿ ಗಾಜನ್ನು ಬದಲಾಯಿಸುವ ಪ್ರಕ್ರಿಯೆಯಾಗಿದೆ ಅದು ಎಂದು ತಿಳಿದು ಬಂದಿದೆ.

ನಾವು ಈ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ, 10 ಸೆಪ್ಟೆಂಬರ್‌ 2024 ರಂದು ಟ್ರೈನ್ಸ್‌ ಆಫ್‌ ಇಂಡಿಯಾ ಎಂಬ ಎಕ್ಸ್‌ ಖಾತೆಯಿಂದ ಹಂಚಿಕೊಂಡ ಪೋಸ್ಟ್‌ವೊಂದು ಲಭ್ಯವಾಗಿದೆ. ಪೋಸ್ಟ್‌ನಲ್ಲಿ “ಇಲ್ಲ, ಅವರು ರೈಲಿಗೆ ಹಾನಿ ಮಾಡುತ್ತಿಲ್ಲ, ನಿರ್ವಹಣಾ ಡಿಪೋದಲ್ಲಿ ಹೊಸ ಗಾಜಿಗೆ ಬದಲಿಸಲು ಈಗಾಗಲೇ ಹಾನಿಗೊಳಗಾದ ಗಾಜನ್ನು ಒಡೆಯುತ್ತಿದ್ದಾರೆ. ಏಕೆಂದರೆ, ರೈಲಿನ ಗಾಜನ್ನು ಅದರ ಬಾಡಿಗೆ ಬಿಗಿಯಾಗಿ ಅಳವಡಿಸಿರುವುದರಿಂದ ಅದನ್ನು ತೆಗೆಯಲು ಒಡೆದು ಹಾಕುವ ಅವಶ್ಯಕತೆಯಿದೆ” ಎಂದು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ಗಾಜು ಒಡೆಯುತ್ತಿರುವ ವ್ಯಕ್ತಿ ಮನೀಶ್ ಕುಮಾರ್ ಗುಪ್ತಾ, ಅವರು ಭಾರತೀಯ ರೈಲ್ವೆಯಲ್ಲಿ ಗುತ್ತಿಗೆ ಆಧಾರಿತ ಕಂಪನಿಯೊಂದಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆದ್ದರಿಂದ ಮುಸ್ಲಿಂ ವ್ಯಕ್ತಿ ರೈಲಿನ ಗಾಜು ಒಡೆದಿದ್ದಾರೆ ಎಂಬುವುದು ಸುಳ್ಳು ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : ಪಾವಗಡದಲ್ಲಿ ಸಿಂಹ ಎಂದು ಸುಳ್ಳು ವಿಡಿಯೊ ಪ್ರಸಾರ ಮಾಡಿದ ‘ಝೀ ಕನ್ನಡ ನ್ಯೂಸ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...