Homeಫ್ಯಾಕ್ಟ್‌ಚೆಕ್FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

FACT CHECK : ಸ್ವೀಡನ್‌ನಲ್ಲಿ ಎಲೆಕ್ಟ್ರಿಕ್ ವಾಹನ ಚಾರ್ಜ್ ಆಗುವ ರಸ್ತೆ ನಿರ್ಮಿಸಲಾಗಿದೆ ಎಂಬುವುದು ನಿಜವೇ?

- Advertisement -
- Advertisement -

“ಸ್ವೀಡನ್‌ನಲ್ಲಿ ರಸ್ತೆ ಮೇಲೆ ಎಲೆಕ್ಟ್ರಿಕ್ ಚಾರ್ಜಿಂಗ್ ಲೇನ್ ಅನ್ನು ಅಳವಡಿಸಲಾಗಿದೆ. ವಾಹನಗಳು ಅದರ ಮೇಲೆ ಚಲಿಸುವಾಗಲೇ ವಿದ್ಯುತ್ ಪಾಸ್ ಆಗಿ ಚಾರ್ಜ್ ಆಗುತ್ತೆ” ಎಂದು ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್‌ನ ಸತ್ಯಾಸತ್ಯತೆ ಪರಿಶೀಲಿಸಲು ನಾವು ಪೋಟೋವನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ಬಿಬಿಸಿಯ ಟಾಪ್ ಗಿಯರ್‌ ವೆಬ್‌ಸೈಟ್‌ 16 ಮೇ 2023ರಲ್ಲಿ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಸ್ವೀಡನ್‌ ವಿಶ್ವದ ಮೊದಲ ಇವಿ ಚಾರ್ಜಿಂಗ್‌ ರಸ್ತೆ ನಿರ್ಮಿಸಲಿದೆ. ಎಲೆಕ್ಟ್ರಿಕ್ ವಾಹನವನ್ನು ಚಾರ್ಜ್ ಮಾಡುವ ಇ-ಮೋಟಾರು ವೇ ಇದಾಗಿದ್ದು, ಚಾರ್ಜ್‌ಗಾಗಿ ದೀರ್ಘ ವಿರಾಮದ ಅಗತ್ಯವನ್ನು ಇದು ತಪ್ಪಿಸಲಿದೆ. ವಿವಿಧ ಪ್ರಾಯೋಗಿಕ ಯೋಜನೆಗಳ ನಂತರ, 2025ರ ವೇಳೆಗೆ ರಸ್ತೆ ನಿರ್ಮಿಸಲು ನಿರ್ಧರಿಸಲಾಗಿದೆ. ಯೋಜನೆಯ ಇಂಜಿನಿಯರ್‌ಗಳು ಯಾವ ತಂತ್ರಜ್ಞಾನ ಹೆಚ್ಚು ಸೂಕ್ತವಾಗಿರುತ್ತದೆ ಎಂಬುವುದರ ಕುರಿತ ಇನ್ನೂ ಕೆಲಸ ಮಾಡುತ್ತಿದ್ದಾರೆ” ಎಂದಿದೆ.

ಮೇ 8,2023ರಲ್ಲಿ ಆಟೋ ಹಿಂದೂಸ್ತಾನ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ “ಸ್ವೀಡನ್‌ 2025ರವೇಳೆಗೆ ವಿಶ್ವದ ಮೊದಲ ಇಲೆಕ್ಟ್ರಿಫೈಡ್ ರಸ್ತೆಯನ್ನು ತೆರೆಯಲಿದೆ. ಇದು ವಾಹನಗಳು ಸಂಚರಿಸುವಾಗಲೇ ಚಾರ್ಜ್ ಆಗಲು ಸಹಾಯ ಮಾಡಲಿದೆ. ಯುರೋಪಿಯನ್‌ ದೇಶವು 3 ಸಾವಿರ ಕಿ.ಮೀಗಳಿಗೂ ಹೆಚ್ಚಿನ ರಸ್ತೆಯನ್ನು ಎಲೆಕ್ಟ್ರಿಫೈ ಮಾಡಲು ಉದ್ದೇಶಿಸಿದೆ” ಎಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ಪೋಸ್ಟ್‌ನಲ್ಲಿ ಇರುವ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ರಸ್ತೆ ಎನ್ನಲಾದ ಫೋಟೋ ಒಂದು ಊಹಾತ್ಮಕ ಫೋಟೋ ಆಗಿದೆ. ಸ್ವೀಡನ್ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ರಸ್ತೆ ನಿರ್ಮಿಸಲು ಮುಂದಾಗಿರುವುದು ಹೌದು. ಆದರೆ, ಅದು ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ. 2025ರ ಹೊತ್ತಿಗೆ ರಸ್ತೆ ಲೋಕಾರ್ಪಣೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ : FACT CHECK : ಬೆಂಗಳೂರಿನಲ್ಲಿ BMTC ಬಸ್‌ ಅನ್ನು ಮ್ಯಾಗ್ನೆಟಿಕ್ ಬಾಂಬ್ ದಾಳಿಯಿಂದ ಸ್ಪೋಟಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...