Homeಫ್ಯಾಕ್ಟ್‌ಚೆಕ್FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

- Advertisement -
- Advertisement -

“ಜಗದೀಶ್ ಶೆಟ್ಟರ್ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದಾಗ ಲಂಡನ್‌ ನಗರದ ಥೇಮ್ಸ್ ನದಿ ತಟದಲ್ಲಿ ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಅನುದಾನ ನೀಡಿದ್ದರು. ಆದರೆ, ಶೆಟ್ಟರ್ ಬಳಿಕ ಸಿಎಂ ಆದ ಸಿದ್ದರಾಮಯ್ಯ ಅವರು ಆ ಅನುದಾನವನ್ನು ಕಡಿತಗೊಳಿಸಿದ್ದರು. ಲಂಡನ್‌ನಲ್ಲಿ ಬಸವಣ್ಣ ಪ್ರತಿಮೆ ನಿರ್ಮಾಣದ ಉಸ್ತುವಾರಿ ತೆಗೆದುಕೊಂಡಿದ್ದ ಡಾ. ನೀರಜ್ ಪಾಟೀಲ್ ಹಲವು ಭಾರೀ ಆಹ್ವಾನಿಸಿದ್ದರೂ, ಸಿದ್ದರಾಮಯ್ಯ ಪ್ರತಿಮೆ ಉದ್ಘಾಟನೆಗೆ ಹೋಗಿರಲಿಲ್ಲ. ಕೊನೆಗೆ ನೀರಜ್ ಪಾಟೀಲ್ ಅವರು ಪ್ರಧಾನಿ ಮೋದಿಯಿಂದ ಪ್ರತಿಮೆ ಉದ್ಘಾಟಿಸಿದ್ದರು. ಇದೆಲ್ಲಾ ಆದ ಬಳಿಕ ಲಂಡನ್‌ಗೆ ತೆರಳಿದ್ದ ಸಿದ್ದರಾಮಯ್ಯ ಅವರು ಒಂದು ದಿನ ರಾತ್ರಿ ಹೊತ್ತು ಬಸನವಣ್ಣ ಪ್ರತಿಮೆ ಬಳಿ ತೆರಳಿ ಫೋಟೋ ತೆಗೆಸಿಕೊಂಡು ಪೋಸ್‌ ಕೊಟ್ಟಿದ್ದಾರೆ. ಸಿದ್ದರಾಮಯ್ಯನವರು ಬಸವಣ್ಣ ಮತ್ತು ಅವರ ಅನುಯಾಯಿಗಳ ವಿರೋಧಿ” ಎಂದು ಆರೋಪಿಸಿರುವ ವಿಡಿಯೋವೊಂದು ವೈರಲ್ ಆಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಇದು 2018ರ ವಿಷಯ ಎಂದು ಗೊತ್ತಾಗಿದೆ. 2018ರಲ್ಲಿ ಸಿದ್ದರಾಮಯ್ಯನವರು ಲಂಡನ್‌ಗೆ ತೆರಳಿದ್ದ ವೇಳೆ ವ ಬಸವಣ್ಣ ಪ್ರತಿಮೆ ಮುಂದೆ ನಿಂತು ಫೋಟೋಈ ತೆಗೆಸಿಕೊಂಡಿದ್ದರು. ಅದನ್ನು ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು “ಲಂಡನ್‌ನ ಜೇಮ್ಸ್ ಪಾರ್ಕ್‌ನಲ್ಲಿರುವ ಅಣ್ಣ ಬಸವಣ್ಣನವರ ಪುತ್ಥಳಿ ನೋಡಿ‌ ಕಣ್ತುಂಬಿ ಬಂತು. ನಿಜವಾದ ವಿಶ್ವಗುರು ನಮ್ಮ ಬಸವಣ್ಣ” ಎಂದು ಬರೆದುಕೊಂಡಿದ್ದರು.

ಸಿದ್ದರಾಮಯ್ಯನವರು ಫೋಟೋ ತೆಗೆಸಿಕೊಂಡಿದ್ದ ಬಸವಣ್ಣ ಪ್ರತಿಮೆಯ ನಿರ್ಮಾಣದ ಉಸ್ತುವಾರಿಯನ್ನು ಕರ್ನಾಟಕದ ಕಲಬುರಗಿ ಮೂಲದ ಅಂದಿನ ಲಂಡನ್ ಮೇಯರ್ ಡಾ. ನೀರಜ್ ಪಾಟೀಲ್ ವಹಿಸಿದ್ದರು. ಟಿವಿ ವಾಹಿನಿಯೊಂದರ ಜೊತೆ ಮಾತನಾಡಿದ್ದ ಈ ನೀರಜ್ ಪಾಟೀಲ್, ಸಿದ್ದರಾಮಯ್ಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು. ಆ ಆರೋಪಗಳನ್ನು ಆಧರಿಸಿ ವೈರಲ್ ವಿಡಿಯೋ ತಯಾರಿಸಲಾಗಿದೆ.

ಟಿವಿ ವಾಹಿನಿ ಜೊತೆ ಮಾತನಾಡಿದ್ದ ನೀರಜ್ ಪಾಟೀಲ್, “ಸಿದ್ದರಾಮಯ್ಯನವರು ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಜಗದೀಶ್ ಶೆಟ್ಟರ್ ನೀಡಿದ್ದ ಅನುದಾನವನ್ನು ಕಡಿತಗೊಳಿಸಿದ್ದರು. ಇದರಿಂದ ನಾವು ತುಂಬಾ ಕಷ್ಟಪಡುವಂತಾಯಿತು. ಅನುದಾನ ಕೋರಿ ನಾವು ಸಿದ್ದರಾಮಯ್ಯ ಅವರನ್ನು ಭೇಟಿಯಾದಾಗ, “ಲಂಡನ್‌ನಲ್ಲಿ ಯಾರಿಗೆ ಬಸವಣ್ಣ ಪ್ರತಿಮೆ? ಅಲ್ಲಿ ಯಾರಿಗೆ ಬಸವಣ್ಣ ಗೊತ್ತು?” ಎಂದು ಉಡಾಫೆಯಾಗಿ ಮಾತನಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆ ಕಾರ್ಯಕ್ರಮಕ್ಕೆ ಬರಲು ನಿರಾಕರಿಸಿದ್ದರು” ಎಂದು ಆರೋಪಿಸಿದ್ದರು.

ಈ ಆರೋಪಗಳಿಗೆ ಸಿಎಂ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದರು. “ನಾನು ಬಸವಣ್ಣನವರ ಪ್ರತಿಮೆ ಸ್ಥಾಪನೆಗೆ ಯಾವುದೇ ಅನುದಾನ ನೀಡಿಲ್ಲ ಮತ್ತು ಖಡಿತಗೊಳಿಸಿಲ್ಲ. ಪ್ರಧಾನಿ ಮೋದಿಯವರು ಪ್ರತಿಮೆ ಉದ್ಘಾಟನೆಗೆ ಬರುತ್ತಾರೆ ಎಂಬ ಕಾರಣಕ್ಕೆ ನಾನು ಹೋಗಿರಲಿಲ್ಲ ಎಂಬುವುದು ಸುಳ್ಳು. ಆ ಸಂದರ್ಭದಲ್ಲಿ ಬೇರೆ ಕಾರ್ಯಕ್ರಮಗಳು ನಿಗದಿಯಾಗಿದ್ದ ಕಾರಣ ನಾನು ಪ್ರತಿಮೆ ಉದ್ಘಾಟನೆಗೆ ಹೋಗಲಾಗಿಲ್ಲ. ಆ ಬಳಿಕ ಲಂಡನ್‌ಗೆ ಹೋಗಿದ್ದಾಗ ಬಸವಣ್ಣ ಪ್ರತಿಮೆ ಕಂಡು ಫೋಟೋ ತೆಗೆಸಿಕೊಂಡಿದ್ದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ 

ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಿದಂತೆ ಡಾ. ನೀರಜ್ ಪಾಟೀಲ್ ಮಾಡಿರುವ ಆರೋಪಗಳು ಸುಳ್ಳು. ಅಲ್ಲದೆ, ನಾವು ಪರಿಶೀಲನೆ ನಡೆಸಿದಂತೆ ಸಿಎಂ ಸಿದ್ದರಾಮಯ್ಯ ಬಸವಣ್ಣ ಪ್ರತಿಮೆಗೆ ನೀಡಿದ್ದ ಅನುದಾನ ಕಡಿತಗೊಳಿಸಿದ್ದಾರೆ ಎಂದು ನೀರಜ್ ಪಾಟೀಲ್ ಹೊರತು ಇತರ ಯಾರೂ ಆರೋಪ ಮಾಡಿಲ್ಲ. 2018ರ ಬಳಿಕ ಬಂದ ಕಾಂಗ್ರೆಸ್- ಬಿಜೆಪಿ ಸರ್ಕಾರಗಳು ಕೂಡ ಇದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನೀರಜ್ ಪಾಟೀಲ್ ಆರೋಪಕ್ಕೆ ಪೂರಕವಾದ ಯಾವುದೇ ಸಾಕ್ಷ್ಯಗಳು ಕೂಡ ದೊರೆತಿಲ್ಲ.

ಇದನ್ನೂ ಓದಿ : FACT CHECK : ಹತ್ಯೆಯಾದ ಉಗ್ರರ ಕುಟುಂಬಗಳಿಗೆ ಕಾಂಗ್ರೆಸ್ ಪರಿಹಾರ ನೀಡಲಿದೆ ಎಂಬ ಪೋಸ್ಟ್ ದಿಕ್ಕು ತಪ್ಪಿಸುವಂತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...