Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

FACT CHECK : ಹಿಂದೂ ಸ್ವಾಮೀಜಿ ಮಹಿಳೆಯರೊಂದಿಗೆ ಅರೆ ನಗ್ನಾವಸ್ಥೆಯಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬುವುದು ನಿಜವೇ?

- Advertisement -
- Advertisement -

ಹಿಂದೂ ಸನ್ಯಾಸಿಯೊಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ಭಾರತದಲ್ಲಿ ಹಿಂದೂ ಸನ್ಯಾಸಿಯೊಬ್ಬರು ಇಬ್ಬರು ಮಹಿಳೆಯರೊಂದಿಗೆ ಖಾಸಗಿ ಕ್ಷಣಗಳನ್ನು ಕಳೆಯುವ ವೇಳೆ ಸಿಕ್ಕಿಬಿದ್ದಾರೆ ಎಂದು ಪ್ರತಿಪಾದಿಸಿ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ. ಅರೆ ನಗ್ನಾವಸ್ಥೆಯಲ್ಲಿರುವ ಇಬ್ಬರು ಮಹಿಳೆಯರೊಂದಿಗೆ ಏಕಾಂತವಾಗಿ ಇದ್ದ ಸಂದರ್ಭದಲ್ಲಿ ಗುಂಪೊಂದು ಕೊಠಡಿಗೆ ನುಗ್ಗಿಇಬ್ಬರು ಮಹಿಳೆ ಮತ್ತು ಸ್ವಾಮೀಜಿಯ ಮೇಲೆ  ಹಲ್ಲೆ ಮಾಡುವುದನ್ನು ವೈರಲ್ ವಿಡಿಯೋದಲ್ಲಿ ಕಾಣಬಹುದು.

ಕೆಲವು ಸಾಮಾಜಿಕ ಮಾಧ್ಯಮಗಳ ಬಳಕೆದಾರರು ಸಿಕ್ಕಿಬಿದ್ದ ಸ್ವಾಮೀಜಿಯನ್ನು ನಿರ್ಮಲ್ ಸಿಂಗ್ ಜಿ ಹಿಂದೂ ಸನ್ಯಾಸಿ ಎಂದು ಆರೋಪಿಸಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಸ್ವಾಮೀಜಿಯೊಬ್ಬರ ಫೋಟೊದೊಂದಿಗೆ ಸಂಯೋಜಿಸಲಾಗಿದ್ದು, ಫೋಟೊದಲ್ಲಿರುವ ಸ್ವಾಮೀಜಿ ಮತ್ತು ವಿಡಿಯೋದಲ್ಲಿರುವ ಸಾಧು ಇಬ್ಬರು ಒಬ್ಬರೆ ಎಂಬ ಹೇಳಿಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಕುರಿತು ಮಾಡಿರುವ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 08 ಜುಲೈ 2023ರಂದು ಶ್ರೀಲಂಕಾದ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳು ಲಭ್ಯವಾಗಿವೆ. ವರದಿಗಳ ಪ್ರಕಾರ ಶ್ರೀಲಂಕಾದ ನವಗಮುವಾ ಪ್ರದೇಶದ ಪಲ್ಲೆಗಾಮ ಸುಮನ ಥೆರೋ ಎಂಬ ಬೌದ್ಧ ಸನ್ಯಾಸಿ ಇಬ್ಬರು ಮಹಿಳೆಯರೊಂದಿಗೆ ಅರೆನಗ್ನಾವಸ್ಥೆಯಲ್ಲಿ ಇದ್ದಾಗ ಗುಂಪೊಂದು ದಾಳಿ ನಡೆಸಿದೆ. ವರದಿಗಳು ಇಲ್ಲಿ , ಇಲ್ಲಿ ಮತ್ತು ಇಲ್ಲಿ ನೋಡಬಹುದು.

ವರದಿಯ ಪ್ರಕಾರ, 08 ಜುಲೈ 2023ರಂದು ನವಗಾಮುವ, ಬೊಮಿರಿಯಾ, ರಸಪಾನದಲ್ಲಿ ಸಂಭವಿಸಿದ ಆಘಾತಕಾರಿ ಘಟನೆಯಲ್ಲಿ, ಪಲ್ಲೆಗಾಮ ಸುಮನ ಥೇರೋ ಮತ್ತು ವಸತಿ ಗೃಹದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲ್ಲೆ ನಡೆಸಿದ ನಂತರ ನವಗಾಮುವಾ ಪೊಲೀಸರು ನಾಲ್ವರು ಯುವಕರನ್ನು ಬಂಧಿಸಿದ್ದಾರೆ.

ಯುವಕರ ಗುಂಪೊಂದು ಬಲವಂತವಾಗಿ ಮನೆಗೆ ನುಗ್ಗಿ ತಾಯಿ ಮತ್ತು ಮಗಳ ಮೇಲೆ ದೈಹಿಕ ಹಲ್ಲೆ ನಡೆಸಿ ಆಸ್ತಿ-ಪಾಸ್ತಿ ಹಾನಿ ಮಾಡಿದ್ದಾರೆ ಎಂದು ಪಲ್ಲೆಗಾಮ ಸುಮನ ಥೇರೋ ನೀಡಿದ ದೂರಿನ ಆಧಾರದ ಮೇಲೆ ಬಂಧಿಸಲಾಗಿದೆ. ಸಮುದಾಯದಲ್ಲಿ ಪ್ರಮುಖ ಸ್ಥಾನದಲ್ಲಿರುವ ಸುಮನಾ ಥೇರೋ ಅವರು ಶಾಮೀಲಾಗಿರುವುದರಿಂದ ದೂರು ಹೆಚ್ಚಿನ ಗಮನ ಸೆಳೆಯಿತು.

ಜಾಮೀನಿನ ಮೇಲೆ ಬಿಡುಗಡೆಯಾದ ಶಂಕಿತ ಆರೋಪಿಗಳು, ಸುಮನ ಥೇರೋ ಇಬ್ಬರು ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ದಾಳಿ ನೀಡಿದ್ದೇವೆ ಎಂದು ಹೇಳಿದ್ದಾರೆ. ಈ ಆಪಾದಿತ ಸನ್ನಿವೇಶದಿಂದ ಕೋಪಗೊಂಡ ಗುಂಪು ಸನ್ಯಾಸಿ ಮತ್ತು ಮಹಿಳೆಯರ ಮೇಲೆ ಹಲ್ಲೆ ನಡೆಸಿತು. ಈ ಘಟನೆಯನ್ನು ವಿಡಿಯೋದಲ್ಲಿ ರೆಕಾರ್ಡ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಂಡ ನಂತರ ವಿಡಿಯೋ ವೈರಲ್ ಆಗಿತ್ತು ಮತ್ತು ಸಾರ್ವಜನಿಕವಾಗಿ ಖಂಡನೆಗೆ ಒಳಗಾಗಿತ್ತು.

ವರದಿಗಳ ಪ್ರಕಾರ, ಗುರೂಜಿ ಎಂದು ಕರೆಯಲ್ಪಡುವ ನಿರ್ಮಲ್ ಸಿಂಗ್ ಜಿ ಅವರು 2007 ರಲ್ಲಿ ನಿಧನರಾಗಿದ್ದಾರೆ ಎಂಬ ವರದಿಗಳು ಲಭ್ಯವಾಗಿದೆ. ಇಂಡಿಯಾ ಟುಡೇ ಜೊತೆಗಿನ ಸಂವಾದದಲ್ಲಿ, ದೆಹಲಿಯಲ್ಲಿರುವ ನಿರ್ಮಲ್ ಸಿಂಗ್ ಜಿ ಅವರ ಆಶ್ರಮದ ಸದಸ್ಯರೊಬ್ಬರು ಮಾತನಾಡಿದ್ದು, ಗುರೂಜಿಯವರಿಗೂ ವಿಡಿಯೋಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದಕ್ಕೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಶ್ರಮ ಮುಂದಾಗಿದೆ ಎಂದು ಉಲ್ಲೇಖಿಸಲಾಗಿದೆ.

ಒಟ್ಟಿನಲ್ಲಿ, ವೈರಲ್ ವಿಡಿಯೋ ಶ್ರೀಲಂಕಾದ ಬೌದ್ಧ ಸನ್ಯಾಸಿಗೆ ಸಂಬಂಧಿಸಿದ್ದು,  ವೈರಲ್ ವಿಡಿಯೋದಲ್ಲಿ ಭಾರತದ ಸ್ವಾಮೀಜಿ ಎಂದು ಹೇಳಲಾಗುತ್ತಿರುವ ಸನ್ಯಾಸಿ ನಿರ್ಮಲ್ ಸಿಂಗ್ 2007 ರಲ್ಲಿಯೇ ನಿಧನರಾಗಿದ್ದಾರೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಕಲಬುರಗಿಯ ಹಳೆಯ ವಿಡಿಯೋಗೆ ಕೋಮು ಬಣ್ಣ ಬಳಿದು ಹಂಚಿಕೊಳ್ಳುತ್ತಿರುವ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....