Homeಫ್ಯಾಕ್ಟ್‌ಚೆಕ್FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ...

FACT CHECK : ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿದ್ದು ನಿಜವೇ? ವೈರಲ್ ಫೋಟೋದ ಸತ್ಯಾಸತ್ಯತೆ ಇಲ್ಲಿದೆ

- Advertisement -
- Advertisement -

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ನಿಂತಿರುವಂತೆ ತೋರುವ ಕಪ್ಪು ಬಿಳುಪಿನ (Black and white) ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಸರ್ವೇಶ್ ಕುಟ್ಲೆಹರಿಯ ಎಂಬ ಫೇಸ್‌ಬುಕ್ ಬಳಕೆದಾರ ಜುಲೈ 12ರಂದು ಈ ಫೋಟೋ ಹಂಚಿಕೊಂಡಿದ್ದು “8,500 ರೂ. ಕಟಾ ಕಟ್‌ ಟಕಾ ಟಕ್ ಸಿಗಲಿದೆ ಎಂದು ಹೇಳಲಾದ ವ್ಯಕ್ತಿಯ ಪೋಸ್ಟ್ 20 ಸಾವಿರಕ್ಕೂ ಹೆಚ್ಚು ಲೈಕ್ಸ್‌ಗಳು ಮತ್ತು 5,900 ಶೇರ್‌ಗಳನ್ನು ಪಡೆದುಕೊಂಡಿದೆ ಎಂದು ಬರೆದುಕೊಂಡಿದ್ದಾರೆ.

ಅನೇಕ ಎಕ್ಸ್‌ ಮತ್ತು ಫೇಸ್‌ಬುಕ್ ಬಳಕೆದಾರರು ಇದೇ ಬರಹದೊಂದಿಗೆ ಫೋಟೋ ಹಂಚಿಕೊಂಡಿದ್ದಾರೆ.

ಹಾಗಾದರೆ ವೈರಲ್ ಫೋಟೋದಲ್ಲಿರುವ ಮಹಿಳೆ ನಿಜವಾಗ್ಲೂ ಸೋನಿಯಾ ಗಾಂಧಿಯ? ಸೋನಿಯಾ ಗಾಂಧಿ ಕೈಯಲ್ಲಿ ಸಿಗರೇಟ್ ಹಿಡಿದು ಫೋಟೋಗೆ ಪೋಸ್‌ಗೆ ಕೊಟ್ರಾ? ಎಂದು ಪರಿಶೀಲಿಸೋನ.

ಫ್ಯಾಕ್ಟ್‌ಚೆಕ್ : ವೈರಲ್ ಫೋಟೋದ ಕೆಳಗೆ ಎರಡ ಭಾಗದಲ್ಲಿ ‘ರಿಮಾರ್ಕರ್’ (Remarker)ಎಂಬ ವಾಟರ್ ಮಾರ್ಕ್ ಇರುವುದನ್ನು ನಾವು ಗಮನಿಸಿದ್ದೇವೆ. ರಿಮಾರ್ಕರ್ ಕುರಿತು ನಾವು ಗೂಗಲ್ ಮೂಲಕ ಮಾಹಿತಿ ಹುಡುಕಿದಾಗ ಅದೊಂದು ಕೃತಕ ಬುದ್ದಿಮತ್ತೆ (Artificial intelligence) ಟೂಲ್ ಎಂಬುವುದು ಗೊತ್ತಾಗಿದೆ. ಈ ಎಐ ಟೂಲ್ ಯಾವುದಾದರು ಫೋಟೋದಲ್ಲಿ ವ್ಯಕ್ತಿಗಳ ಮುಖವನ್ನು ಬದಲಿ ಮತ್ತೊಬ್ಬರ ಮುಖ ಜೋಡಿಸಲು ಅನುವು ಮಾಡುತ್ತದೆ. ಹಾಗಾಗಿ, ಸೋನಿಯಾ ಗಾಂಧಿಯವರ ಫೋಟೋವನ್ನು ಎಐ ಮೂಲಕ ಸೃಷ್ಟಿಸಿರುವುದು ನಮಗೆ ಗೊತ್ತಾಗಿದೆ.

ಇನ್ನು ವೈರಲ್ ಫೋಟೋದ ಮೂಲ ಹುಡುಕಲು ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮೈಕ್ರೋ ಬ್ಲಾಗಿಂಗ್ ವೆಬ್‌ಸೈಟ್ ತಂಬ್ಲರ್‌ನಲ್ಲಿ 2013ರಲ್ಲಿ ವೈರಲ್ ಫೋಟೋದ ರೀತಿಯ ಪೋಟೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಆದರೆ, ಅಲ್ಲಿ ಸೋನಿಯಾ ಗಾಂಧಿಯ ಬದಲು ಮತ್ತೊಬ್ಬರು ಮಹಿಳೆಯ ಫೋಟೋ ಇದೆ. ಫೋಟೋಗೆ “Ghazale Photographed By Farzad Sarfarazi, 2012” ಎಂದು ಕ್ಯಾಪ್ಶನ್ ಕೊಡಲಾಗಿದೆ. ಫೋಟೋದ ಕೆಳಗೆ ಬಲ ಭಾಗದಲ್ಲಿ ವಾಟರ್ ಮಾರ್ಕ್‌ ಕೂಡ ಇದೆ.

ತಂಬ್ಲರ್‌ನಲ್ಲಿ ನಮಗೆ ಲಭ್ಯವಾಗಿರುವ ಫೋಟೋವನ್ನು ಅನೇಕರು ವಿವಿಧ ಸಂದರ್ಭಗಳಲ್ಲಿ ಹಂಚಿಕೊಂಡಿದ್ದು, ಫರ್ಝಾದ್ ಸರ್ಫರಾಝಿ ಅವರ ಫೋಟೋ ಎಂದು ತಿಳಿಸಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ, ಸೋನಿಯಾ ಗಾಂಧಿ ಸಿಗರೇಟ್ ಹಿಡಿದು ನಿಂತಿರುವಂತೆ ಕಾಣುವ ಫೋಟೋ ರಿಮಾರ್ಕರ್ ಎಂಬ ಎಐ ಟೂಲ್ ಬಳಸಿ ಎಡಿಟ್ ಮಾಡಿರುವಂತದ್ದು. ಬೇರೊಬ್ಬ ಮಹಿಳೆಯ ಫೋಟೋದ ಮುಖ ಬದಲಾಯಿಸಿ ಸೋನಿಯಾ ಗಾಂಧಿಯವರ ಮುಖ ಕೂರಿಸಿರುವುದು ಗೊತ್ತಾಗಿದೆ.

ಇದನ್ನೂ ಓದಿ : FACT CHECK : ‘ಸ್ಟಾರ್’ ಚಿಹ್ನೆಯಿರುವ 500 ರೂ. ನೋಟು ನಕಲಿಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...