Homeಫ್ಯಾಕ್ಟ್‌ಚೆಕ್FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

- Advertisement -
- Advertisement -

ಏಪ್ರಿಲ್ 26ರಂದು ಲೋಕಸಭೆ ಚುನಾವಣೆಯ ಮತದಾನದ ವೇಳೆ ಬೆಂಗಳೂರಿನ 163 ಶಾಂತಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 17 ರಲ್ಲಿ ಇವಿಎಂನ ಬ್ಯಾಲೆಟ್ ಬಟನ್ ಸಕ್ರಿಯವಾಗಿರಲಿಲ್ಲ ಎಂದು ವ್ಯಕ್ತಿಯೊಬ್ಬರು ಆರೋಪಿಸಿದ ಆಡಿಯೋ ವಾಟ್ಸಾಪ್‌ನಲ್ಲಿ ವೈರಲ್ ಆಗಿತ್ತು.

ಆಡಿಯೋದಲ್ಲಿ ಈ ರೀತಿ ಹೇಳಲಾಗಿತ್ತು.. “ಶುಭೋದಯ, ನಾನು ನನ್ನ ಮತದಾನ ಮಾಡಿ ಬಂದಿದ್ದೇನೆ. ನನ್ನ ಜಿಲ್ಲೆ 163 ಶಾಂತಿನಗರ, ಭಾಗ ಸಂಖ್ಯೆ 17, ಸೇಂಟ್ ಅಣ್ಣಾ ಕಾನ್ವೆಂಟ್. ನಾನು ಮತಗಟ್ಟೆಗೆ ಹೋದಾಗ ರಿಜಿಸ್ಟರ್‌ನಲ್ಲಿ ನನ್ನ ಹೆಸರು ಎಲ್ಲಿದೆ ಎಂದು ಪರಿಶೀಲಿಸಲು ಮೊದಲ ವ್ಯಕ್ತಿ ಭಾಗ ಸಂಖ್ಯೆಯನ್ನು ತೆಗೆದುಕೊಂಡರು, ಎರಡನೆಯವರು ಸಹಿ ಮಾಡಿದರು ಮತ್ತು ಮೂರನೇ ವ್ಯಕ್ತಿ ಬೆರಳಿಗೆ ಗುರುತು ಹಾಕಿದರು. ದಯವಿಟ್ಟು ಈಗ ಎಚ್ಚರಿಕೆಯಿಂದ ಆಲಿಸಿ, ಹಿಡನ್ ಪ್ಯಾನೆಲ್‌ಗಳ ಹಿಂದೆ ಇರುವ ನಿಜವಾದ ಮತದಾನ ಯಂತ್ರವನ್ನು ಸಕ್ರಿಯಗೊಳಿಸಲು ಸಿಬ್ಬಂದಿ ತಮ್ಮ ಮಾಸ್ಟರ್ ನಿಯಂತ್ರಣ ಯೂನಿಟ್‌ನ ಬಟನ್ ಅನ್ನು ಒತ್ತಬೇಕಾಗುತ್ತದೆ. ನಾನು ಹೋಗಿ ಇವಿಎಂ ಬಟನ್ ಒತ್ತಿದಾಗ ನನಗೆ ಯಾವುದೇ ಶಬ್ದ ಕೇಳಿಲ್ಲ. ನನ್ನ ಅಭ್ಯರ್ಥಿಯ ಚಿತ್ರವನ್ನು ತೋರಿಸುವ ವಿವಿಪ್ಯಾಟ್‌ನಲ್ಲೂ ಶಬ್ದ ಕೇಳಿಲ್ಲ. ಹಾಗಾಗಿ 10-15 ಸೆಕೆಂಡ್‌ ಕಾದು ಮತ್ತೆ ಬಟನ್ ಒತ್ತಿದರೂ, ವಿವಿಪ್ಯಾಟ್‌ನಲ್ಲಿ ಶಬ್ದ ಬರಲಿಲ್ಲ, ಚಿತ್ರ ಪ್ರದರ್ಶನವಾಗುತ್ತಿತ್ತು. ಹಾಗಾಗಿ ಸ್ವಲ್ಪ ಸಿಟ್ಟಾಗಿ ಮೂರನೇ ವ್ಯಕ್ತಿಯ ಬಳಿ ಹೋದೆ, ಕಂಟ್ರೋಲ್‌ ಯೂನಿಟ್‌ನಲ್ಲಿರುವ ಆಕ್ಟಿವೇಟ್ ಬಟನ್ ಒತ್ತುವ ಮೂಲಕ ಮತ ಯಂತ್ರವನ್ನು ಸಕ್ರಿಯಗೊಳಿಸುವುದು ಅವರ ಕೆಲಸವಾಗಿತ್ತು. ನಾನು ಬಟನ್ ಏಕೆ ಒತ್ತಲಿಲ್ಲ? ಎಂದು ಕೇಳಿದೆ ಮತ್ತು ಚುನಾವಣಾಧಿಕಾರಿಯನ್ನು ಮಾತನಾಡಿಸಿದೆ. ಮೂರನೇ ವ್ಯಕ್ತಿ ಮತದಾನ ಯಂತ್ರವನ್ನು ಸಕ್ರಿಯಗೊಳಿಸುವುದನ್ನು ಖಚಿತಪಡಿಸಿಕೊಳ್ಳಿ. ಅವರು ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆ ಎಂದು ನೀವು ಖಚಿತಪಡಿಸಿಕೊಂಡ ಬಳಿಕ ಮತದಾನದ ಮಾಡುವ ಜಾಗಕ್ಕೆ ಹೋಗಿ ಬಟನ್ ಒತ್ತಿ. ಹಸಿರು ದೀಪ ಆನ್ ಆಗಿರಬೇಕು. ಎರಡೂ ಸಂದರ್ಭಗಳಲ್ಲಿ ಹಸಿರು ದೀಪವನ್ನು ನೀವು ನೋಡಲು ಸಾಧ್ಯವಾಗುತ್ತದೆ. ದುರಂತವೆಂದರೆ, ನನ್ನ ಕೈಗೆ ಗುರುತು ಹಾಕುವ ಮೊದಲು ಗುರುತು ಹಾಕಿಸಿಕೊಂಡ ವ್ಯಕ್ತಿಗಳನ್ನು ನಾನು ಗಮನಿಸಿದ್ದೇನೆ. ಅವರು ಮತದಾನ ಮಾಡುವಾಗ ಇವಿಎಂನಿಂದ ಯಾವುದೇ ಶಬ್ದ ಬಂದಿಲ್ಲ. ಹಾಗಾಗಿ, ನಾನು ವಿನಂತಿಸುವುದೇನೆಂದರೆ ದಯವಿಟ್ಟು ನೀವು ಮೂರನೇ ವ್ಯಕ್ತಿಯ ಬಳಿ ಇರುವಾಗ ದಯವಿಟ್ಟು ಆ ವ್ಯಕ್ತಿ ಮತ ಯಂತ್ರವನ್ನು ಸಕ್ರಿಯಗೊಳಿಸಿದ್ದಾರೆಯೇ? ಎಂಬುದನ್ನು ಖಚಿತಪಡಿಸಿಕೊಳ್ಳಿ. ನಂತರ ನೀವು ಹಿಡನ್ ಪ್ಯಾನೆಲ್‌ನ ಹಿಂದೆ ಹೋಗಿ ಇವಿಎಂನ ಹಸಿರು ದೀಪ ಆನ್ ಆಗಿರುವುದನ್ನು ಖಚಿತಪಡಿಸಿಕೊಳ್ಳಿ. ಅದು ಆನ್ ಆಗದಿದ್ದರೆ ಮತ್ತೆ ಹಿಂತಿರುಗಿ ಮತ್ತು ಆನ್ ಮಾಡಲು ಹೇಳಿ. ಉಳಿದ ಪ್ರಕ್ರಿಯೆ ನಿಮಗೆ ತಿಳಿದಿದೆ”

ಫ್ಯಾಕ್ಟ್‌ಚೆಕ್ : ವೈರಲ್ ಆಡಿಯೊದ ಹೇಳಿಕೆಯನ್ನು ಚುನಾವಣಾ ಆಯೋಗವು ಸುಳ್ಳು ಮತ್ತು ಆಧಾರರಹಿತ ಎಂದು ತಳ್ಳಿಹಾಕಿದೆ.

ಬೆಂಗಳೂರಿನ ಜಿಲ್ಲಾ ಚುನಾವಣಾಧಿಕಾರಿಯೂ ಇದನ್ನು ದೃಢಪಡಿಸಿದ್ದು, ಏಪ್ರಿಲ್ 26, 2024 ರಂದು ತಮ್ಮ ಎಕ್ಸ್ ಹ್ಯಾಂಡಲ್‌ನಲ್ಲಿ ಮತಗಟ್ಟೆಯಲ್ಲಿ ಬ್ಯಾಲೆಟ್ ಬಟನ್ ಸಕ್ರಿಯಗೊಳಿಸದ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ತಿಳಿಸಿದ್ದಾರೆ.

ಎಎನ್‌ಐ ಮತ್ತು ಡೆಕ್ಕನ್ ಹೆರಾಲ್ಡ್‌ನಂತಹ ಸುದ್ದಿ ಸಂಸ್ಥೆಗಳು ಕೂಡ ಚುನಾವಣಾ ಆಯೋಗವನ್ನು ಉಲ್ಲೇಖಿಸಿ ಪ್ರಕರಣದ ಕುರಿತು ವರದಿ ಮಾಡಿವೆ.

ಚುನಾವಣಾ ಆಯೋಗ ನೀಡಿರುವ ಸ್ಪಷ್ಟೀಕರಣದಂತೆ ವೈರಲ್ ಆಡಿಯೋದಲ್ಲಿರುವ ಆರೋಪ ಸುಳ್ಳು ಎಂದು ಖಚಿತಪಡಿಸಬಹುದು. ಏಕೆಂದರೆ, ಚುನಾವಣಾ ಆಯೋಗ ಚುನಾವಣಾ ಪ್ರಕ್ರಿಯೆಯ ಅಧಿಕೃತ ಸಂಸ್ಥೆಯಾಗಿದೆ.

ಇದನ್ನೂ ಓದಿ : Fact Check : ಮೈಸೂರಿನಲ್ಲಿ ಶತಮಾನಗಳ ಹಳೆಯ ನಂದಿ ವಿಗ್ರಹ ಪತ್ತೆ ಎಂದು ಹಳೆಯ ಫೊಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...