Homeಫ್ಯಾಕ್ಟ್‌ಚೆಕ್Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ?

- Advertisement -
- Advertisement -

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ನೇತೃತ್ವದ ತಮಿಳುನಾಡಿನ ಡಿಎಂಕೆ ಸರ್ಕಾರ ಪುರಾತನ ಹಿಂದೂ ದೇವಸ್ಥಾನವೊಂದನ್ನು ಕೆಡವಿದೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಬಲಪಂಥೀಯ ‘Tathvam-asi’ಎಂಬ ಎಕ್ಸ್‌ ಖಾತೆಯಲ್ಲಿ “ಇನ್ನು ಕಾಯಲು ಸಾಧ್ಯವಿಲ್ಲ, ಎಂ.ಕೆ ಸ್ಟಾಲಿನ್ ಮತ್ತು ಉದಯನಿಧಿ ಸ್ಟಾಲಿನ್ ನಮ್ಮ ಹಿಂದೂ ದೇವಾಲಯಗಳ ಮೇಲೆ ನಡೆಸುತ್ತಿರುವ ದಾಳಿಗೆ ಪರಿಣಾಮ ಎದುರಿಸಲಿದ್ದಾರೆ. ಕರ್ಮ ಅವರನ್ನು ಸುಮ್ಮನೆ ಬಿಡುವುದಿಲ್ಲ. ಅವರಿಗೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗಬೇಕು” ಎಂದು ಬರೆದುಕೊಳ್ಳಲಾಗಿದೆ.

‘Boiled Anda’ ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಇದೇ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಸ್ಟಾಲಿನ್ ಕುಟುಂಬಕ್ಕೆ ಮತ ಹಾಕಿದ ಹಿಂದೂಗಳಿಗೆ ನಾಚಿಕೆಯಾಗ್ಬೇಕು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್ ಚೆಕ್‌ : ಮೇಲಿನ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾನುಗೌರಿ.ಕಾಂ ಮೊದಲು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಸುದ್ದಿಯ ವಿಡಿಯೋ ಹುಡುಕಿದೆ. ಈ ವೇಳೆ ಜನವರಿ 22,2024ರಂದು ಇನ್‌ಶಾರ್ಟ್‌ ಶಾರ್ಟ್‌ ನ್ಯೂಸ್‌ ವೆಬ್‌ಸೈಟ್‌ ಈ ಬಗ್ಗೆ ಸುದ್ದಿ ಮಾಡಿರುವುದು ದೊರೆತಿದೆ. ಆ ಸುದ್ದಿಯಲ್ಲಿ “ತಮಿಳುನಾಡಿನಲ್ಲಿ ಖಾಸಗಿ ದೇವಸ್ಥಾನ ಕಡೆವಿರುವುದನ್ನು ತಪ್ಪಾಗಿ ವರದಿ ಮಾಡಲಾಗಿದೆ” ಎಂದು ಶೀರ್ಷಿಕೆ ಕೊಡಲಾಗಿದೆ.

“ಖಾಸಗಿ ಒಡೆತನದ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ಹಳೆಯ ದೇವಸ್ಥಾನವನ್ನು ಹೊಸದಾಗಿ ನಿರ್ಮಿಸುವ ಸಲುವಾಗಿ ದೇವಸ್ಥಾನದ ಟ್ರಸ್ಟ್‌ ಕೆಡವಿದೆ. ಅದನ್ನು ತಪ್ಪಾಗಿ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದ್ದಾಗಿ ಸುದ್ದಿ ಹಬ್ಬಲಾಗಿದೆ” ಎಂದು ಇನ್‌ಶಾರ್ಟ್‌ ವರದಿ ತಿಳಿಸಿದೆ.

ಸುದ್ದಿ ಲಿಂಕ್ ಇಲ್ಲಿದೆ

ನಾವು ಇನ್ನಷ್ಟು ಪರಿಶೀಲನೆ ನಡೆಸಿದಾಗ ‘Tathvam-asi’ಎಕ್ಸ್‌ ಖಾತೆಯ ಪೋಸ್ಟ್‌ಗೆ ತಮಿಳುನಾಡು ಸರ್ಕಾರದ ಅಧಿಕೃತ ಸುಳ್ಳು ಸುದ್ದಿ ಪತ್ತೆ ಘಟಕ (ಫ್ಯಾಕ್ಟ್ ಚೆಕ್‌ ತಂಡ) ದ ‘TN Fact Check’ಎಂಬ ಎಕ್ಸ್‌ ಖಾತೆ ಪ್ರತಿಕ್ರಿಯೆ ಕೊಟ್ಟಿರುವುದು ಕಂಡು ಬಂದಿದೆ. ಅದರಲ್ಲಿ, ಈ ದೇವಾಲಯವು HR&CE (Hindu Religious and Charitable Endowments Department) ನಿಯಂತ್ರಣದಲ್ಲಿಲ್ಲ. ಇದು ಅವರ ಸ್ವಂತ ಆಡಳಿತದ ಖಾಸಗಿ ದೇವಾಲಯವಾಗಿದೆ. ಈ ದೇವಾಲಯವನ್ನು ತಮಿಳುನಾಡು ಸರ್ಕಾರ ಕೆಡವಲಿಲ್ಲ. ಖಾಸಗಿ ಆಡಳಿತವೇ ದೇವಾಲಯವನ್ನು ಕೆಡವಿದೆ” ಎಂದು ಸ್ಪಷ್ಟಪಡಿಸಿದೆ.

ಖಾಸಗಿ ಆಡಳಿತವು 1882 ರಲ್ಲಿ ನಿರ್ಮಿಸಿದ್ದ ಹಳೆಯ ಕಟ್ಟಡದ ಸ್ಥಳದಲ್ಲಿಯೇ ಹೊಸ ದೇವಾಲಯವನ್ನು ನಿರ್ಮಿಸಲು ಮುಂದಾಗಿದೆ. 8ನೇ ಡಿಸೆಂಬರ್ 2023ರಂದು ದೇವಸ್ಥಾನ ಕೆಡವಲು ಪ್ರಾರಂಭಿಸಲಾಗಿತ್ತು. ಅದಕ್ಕೂ ಮೊದಲು ದೇವಾಲಯ ಸಮಿತಿಯು ‘ಬಾಲಯಂ’ ಧಾರ್ಮಿಕ ಆಚರಣೆ ನಡೆಸಿದೆ ಎಂದು ತಿಳಿಸಿದೆ.

ತಮಿಳುನಾಡು ಸರ್ಕಾರವು ಹಿಂದೂ ದೇವಾಲಯಗಳನ್ನು ಕೆಡವುತ್ತಿದೆ ಎಂದು ಹೇಳುವ ಈ ವದಂತಿಗಳು ಮತ್ತು ಸುಳ್ಳು ಸುದ್ದಿಗಳನ್ನು ನಂಬಬೇಡಿ ಎಂದು ನಾವು ಸಾರ್ವಜನಿಕರಲ್ಲಿ ವಿನಂತಿಸುತ್ತೇವೆ. ನಮ್ಮ Fact Check Unit (FCU)ಈ ಬಗ್ಗೆ ಪರಿಶೀಲನೆ ನಡೆಸಿದೆ ಎಂದು ಹೇಳಿದೆ.

ಇಂಗ್ಲಿಷ್ ಫ್ಯಾಕ್ಟ್ ಚೆಕ್ ವೆಬ್‌ಸೈಟ್‌ ಬೂಮ್ ಈ ಕುರಿತು ಮಾಹಿತಿ ಕಲೆ ಹಾಕಿದೆ. ಅದು ಕೆಡವಲ್ಪಟ್ಟ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನದ ಟ್ರಸ್ಟಿ ಕೆ. ಸೆಂಥಿಲ್ ಕುಮಾರ್ ಅವರ ಪುತ್ರ ರಂಜಿತ್ ಕುಮಾರ್ ಅವರಿಂದ ಮಾಹಿತಿ ಕೇಳಿದೆ. ಈ ವೇಳೆ ರಂಜಿತ್ ಕುಮಾರ್ ಅವರು, “ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ 140 ವರ್ಷ ಹಳೆಯದು. ಅದು ನಮ್ಮ ಖಾಸಗಿ ದೇವಸ್ಥಾನ. ಹೊಸ ದೇವಸ್ಥಾನ ನಿರ್ಮಿಸುವ ಸಲುವಾಗಿ ಜನವರಿ 2, 2024ರಂದು ಹಳೆಯ ಕಟ್ಟಡ ಕೆಡವಿದ್ದೇವೆ. ಅದಕ್ಕೂ ಮುನ್ನ ‘ಬಾಲಯಂ’ ಆಚರಣೆ ಮಾಡಿದ್ದೇವೆ. ಹಳೆಯ ಕಟ್ಟಡ ಕೆಡವಿದ ಜಾಗದಲ್ಲೇ ದೇವಸ್ಥಾನ ನಿರ್ಮಾಣ ಕಾರ್ಯ ಶೀಘ್ರದಲ್ಲೇ ಪ್ರಾರಂಭಗೊಳ್ಳಲಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ವೈರಲ್ ವಿಡಿಯೋದಲ್ಲಿರುವುದು ತಮಿಳುನಾಡಿನ ಕಾಂಚಿಪುರಂನ ಶ್ರೀ ನಲ್ಲಕಂಬ ವಿನಾಯಗರ್ ದೇವಸ್ಥಾನ. ಈ ಖಾಸಗಿ ದೇವಸ್ಥಾನವನ್ನು ಹೊಸದಾಗಿ ನಿರ್ಮಾಣ ಮಾಡುವ ಸಲುವಾಗಿ ಅದರ ಆಡಳಿತ ಮಂಡಳಿಯೇ ಕೆಡವಿದೆ ಎಂದು ತಿಳಿದು ಬಂದಿದೆ. ತಮಿಳುನಾಡಿನ ಡಿಎಂಕೆ ಸರ್ಕಾರ ಹಿಂದೂ ದೇವಸ್ಥಾನ ಕೆಡವಿದೆ ಎಂಬುವುದು ಸುಳ್ಳು ಎಂದು ಖಚಿತವಾಗಿದೆ.

ಇದನ್ನೂ ಓದಿ : Fact Check: ತಮಿಳುನಾಡು ಸರ್ಕಾರ ಹಿಂದೂ ದೇವಸ್ಥಾನ ಧ್ವಂಸಗೊಳಿಸಿದ್ದು ನಿಜಾನಾ? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...