Homeಫ್ಯಾಕ್ಟ್‌ಚೆಕ್FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ...

FACT CHECK : ಮನೆಯಿಂದ 60 ಕಿ.ಮೀ. ದೂರದೊಳಗೆ ಟೋಲ್‌ ಬೂತ್ ಇದ್ದರೆ ಟೋಲ್ ಶುಲ್ಕ ಕಟ್ಟುವಂತಿಲ್ಲ ಎಂಬುವುದು ನಿಜಾನಾ?

- Advertisement -
- Advertisement -

“ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಬೂತ್ ಇದ್ದರೂ ನೀವು ಟೋಲ್‌ ಶುಲ್ಕ ಕಟ್ಟುವಂತಿಲ್ಲ” ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ ಎಂಬ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ವಾಟ್ಸಾಪ್ ನಲ್ಲಿ ಕಂಡು ಬಂದ ಮೆಸೇಜ್‌ನಲ್ಲಿ “ನಿಮ್ಮ ಮನೆಯಿಂದ 60 ಕಿಮೀ ದೂರದೊಳಗೆ ಯಾವುದೇ ಟೋಲ್ ಬೂತ್ ಇದ್ದರೂ ಆ ಬೂತಲ್ಲಿ ಟೋಲ್ ಫೀ ಕಟ್ಟುವಂತಿಲ್ಲ. ಅದಕ್ಕೆ ನಿಮ್ಮ ಆಧಾರ್ ಕಾರ್ಡ್ ಮೂಲಕ ಪಾಸ್ ಮಾಡಿಸಿಕೊಳ್ಳತಕ್ಕದ್ದು. ಇದನ್ನು ಹೆಚ್ಚು ಫಾರ್ವರ್ಡ್ ಮಾಡಿ ಜನರಿಗೆ ತಿಳಿಸುವ ಕೆಲಸ ಮಾಡಿ. ಇದು ಕೇಂದ್ರ ಸರಕಾರದ ಆಜ್ಞೆ” ಎಂದು ಬರೆಯಲಾಗಿದೆ. ಜೊತೆಗೆ ವಿಡಿಯೋ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ನಿತಿನ್ ಗಡ್ಕರಿ ಹೇಳಿಕೆಯ ಪೂರ್ಣ ವಿಡಿಯೋ ಲಭ್ಯವಾಗಿದೆ. ಅದರಲ್ಲಿ 0.36 ಸೆಕೆಂಡಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿಯವರು ಲೋಕಸಭೆಯಲ್ಲಿ ನೀಡಿರುವ ಹೇಳಿಕೆ ಹೀಗಿದೆ “ಸ್ಥಳೀಯ ಜನರು ಅವರ ಆಧಾರ್ ಕಾರ್ಡ್ ತೋರಿಸಿದರೆ ಪಾಸ್ ನೀಡಲಾಗುವುದು. ಎರಡನೆಯ ವಿಷಯವೆಂದರೆ 60 ಕಿಮೀ ದೂರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಜಾಗಳು ಇರುವಂತಿಲ್ಲ, ಒಂದು ವೇಳೆ ಇದ್ದರೆ ಅದು ಕಾನೂನು ಬಾಹಿರವಾಗಿದೆ ಮತ್ತು ಅದನ್ನು ಪರಿಶೀಲಿಸಿ ಮೂರು ತಿಂಗಳೊಳಗೆ ತೆಗೆದುಹಾಕಲಾಗುವುದು.”

ಈ ಕುರಿತು ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ “ಮಾರ್ಚ್ 22, 2022ರಂದು ಡೆಕ್ಕನ್ ಹೆರಾಲ್ಡ್ ಪ್ರಕಟಿಸಿದ ವರದಿ ಲಭ್ಯವಾಗಿದೆ. ವರದಿಯಲ್ಲಿ “ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪರಸ್ಪರ 60 ಕಿಲೋಮೀಟರ್ ಅಂತರದಲ್ಲಿರುವ ಎಲ್ಲಾ ಟೋಲ್ ಪ್ಲಾಝಾಗಳನ್ನು ಮುಂದಿನ ಮೂರು ತಿಂಗಳಲ್ಲಿ ತೆಗೆದು ಹಾಕಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಗಳವಾರ ಘೋಷಿಸಿದ್ದಾರೆ” ಎಂದಿದೆ.

ಇದೇ ವರದಿಯಲ್ಲಿ “ಹೆದ್ದಾರಿಗಳಲ್ಲಿ ಸುಗಮ ಸಂಚಾರಕ್ಕಾಗಿ ಟೋಲ್ ಪ್ಲಾಜಾಗಳ ಬಳಿ ಇರುವ ಸ್ಥಳೀಯ ನಿವಾಸಿಗಳಿಗೆ ಅವರ ಆಧಾರ್ ಕಾರ್ಡ್ ವಿಳಾಸವನ್ನು ಆಧರಿಸಿ ಸರ್ಕಾರ ಉಚಿತ ಪಾಸ್‌ಗಳನ್ನು ನೀಡುತ್ತದೆ ಎಂದು ಗಡ್ಕರಿ ಹೇಳಿದರು. ಲೋಕಸಭೆಯಲ್ಲಿ ಮುಂದಿನ ಹಣಕಾಸು ವರ್ಷಕ್ಕೆ ಬಜೆಟ್‌ನಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳ ಹಂಚಿಕೆ ಕುರಿತ ಚರ್ಚೆಗೆ ಉತ್ತರಿಸಿದರು” ಎಂದು ಹೇಳಲಾಗಿದೆ.

ಮಾರ್ಚ್ 22, 2023ರಂದು ಪ್ರಕಟಗೊಂಡ ದಿ ಹಿಂದೂ ವರದಿಯಲ್ಲಿ, “ರಾಷ್ಟ್ರೀಯ ಹೆದ್ದಾರಿಗಳಲ್ಲಿ 60 ಕಿ.ಮೀ ದೂರಕ್ಕೆ ಒಂದೇ ಟೋಲ್ ಪ್ಲಾಝಾ ಇರಲಿದ್ದು, ಒಂದಕ್ಕಿಂತ ಹೆಚ್ಚು ಟೋಲ್ ಪ್ಲಾಝಾಗಳಿದ್ದರೆ ಮುಂದಿನ ಮೂರು ತಿಂಗಳಲ್ಲಿ ಅಂತವುಗಳನ್ನು ಮುಚ್ಚಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಂಗಳವಾರ ಲೋಕಸಭೆಯಲ್ಲಿ ಘೋಷಿಸಿದ್ದಾರೆ” ಎಂದಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಸಚಿವ ನಿತಿನ್‌ ಗಡ್ಕರಿಯವರು ಟೋಲ್‌ ಪ್ಲಾಝಾ ವ್ಯಾಪ್ತಿಯ ಸ್ಥಳೀಯರಿಗೆ ಆಧಾರ್ ಮೂಲಕ ಉಚಿತ ಪಾಸ್ ಮತ್ತು 60 ಕಿ.ಮೀ. ಅಂತರದಲ್ಲಿ ಒಂದಕ್ಕಿಂತ ಹೆಚ್ಚು ಟೋಲ್ ಗಳು ಇರುವಂತಿಲ್ಲ ಎಂದು ಹೇಳಿದ್ದಾರೆ. ಇದು ವೈರಲ್‌ ಹೇಳಿಕೆಯೊಂದಿಗೆ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಸ್ಪಷ್ಟವಾಗಿದೆ. ಆದರೆ, ವಿಡಿಯೋ ಜೊತೆಗೆ ಹಂಚಿಕೊಳ್ಳಲಾದ ಹೇಳಿಕೆಯಲ್ಲಿ ನಿಮ್ಮ ಮನೆಯಿಂದ 60 ಕಿ.ಮೀ. ದೂರದೊಳಗೆ ಯಾವುದೇ ಟೋಲ್‌ ಗೇಟ್ ಇದ್ದರೂ ಟೋಲ್‌ ಫೀ ಕಟ್ಟುವಂತಿಲ್ಲ ಎಂದು ಹೇಳಿರುವುದು ಸುಳ್ಳು ಪ್ರತಿಪಾದನೆಯಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಮುಂಬೈನಲ್ಲಿ ಬಾರ್ಬರ್ ಜಿಹಾದ್ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...