Homeಕರೋನಾ ತಲ್ಲಣಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

ಫ್ಯಾಕ್ಟ್ ಚೆಕ್: ಸಸ್ಯಹಾರಿಗಳಿಗೆ ಕೊರೊನಾ ಬರುವುದಿಲ್ಲ ಎಂಬುದು ನಿಜವೇ?

- Advertisement -
- Advertisement -

ವಿಶ್ವದ ಒಬ್ಬ ಸಸ್ಯಹಾರಿ ಕೂಡಾ ಕೊರೊನಾ ವೈರಸ್‌ನಿಂದ ಬಳಲುತ್ತಿಲ್ಲ. ಮಾಂಸಹಾರದ ಫ್ರೋಟೀನಿನಿಂದ ವೈರಸ್ ಬದುಕುಳಿಯುತ್ತದೆ, ಇದರಿಂದಾಗಿ ಮಾಂಸಾಹಾರಿಗಳಿಗೆ ಕೊರೊನಾ ಸೋಂಕಿನ ಅಪಾಯವಿದೆ ಎಂಬ ಸಂದೇಶವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.

ವೈರಲ್‌ ಆಗುತ್ತಿರುವ ಸಂದೇಶವನ್ನು ‘ವಿಶ್ವ ಆರೋಗ್ಯ ಸಂಸ್ಥೆ’ಯ ‘ಗೌಡೆನ್ ಗಲಿಯ’ ಅವರು ಕೂಡಾ ದೃಢಪಡಿಸಿದ್ದಾರೆ ಎಂಬ ಬರಹವಿರುವ ಚಿತ್ರಗಳು ಟ್ವಿಟ್ಟರ್ ಹಾಗೂ ಫೇಸ್ ಬುಕ್ ಸೇರಿದಂತೆ ಜಾಲತಾಣದಾದ್ಯಂತ ಹರಡುತ್ತಿದೆ.

 

ಸಸ್ಯಾಹಾರದಿಂದ ಕೊರೊನಾ ಬರುವುದಿಲ್ಲ ನಿಜವೇ?: ಫ್ಯಾಕ್ಟ್-ಚೆಕ್

ಈ ಬಗ್ಗೆ ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ನಡೆಸಿದ್ದು, ವಿಶ್ವ ಆರೋಗ್ಯ ಸಂಸ್ಥೆ ಈ ರೀತಿಯಾಗಿ ಹೇಳಿಕೆ ನೀಡಿಲ್ಲ ಎಂದು ಅದು ದೃಢಪಡಿಸಿದೆ.

ಅಲ್ಲದೆ ಆಲ್ಟ್ ನ್ಯೂಸ್‌ಗೆ WHO ದ ಕಚೇರಿಯಿಂದ ಈ ಬಗ್ಗೆ ಪ್ರತಿಕ್ರಿಯೆ ನೀಡಿ “WHO ಅಂತಹ ಯಾವುದೇ ಆಹಾರವನ್ನು ಅನುಮೋದಿಸಿ ಅಥವಾ ಖಂಡಿಸಿ ಹೇಳಿಕೆಯನ್ನು ನೀಡಿಲ್ಲ” ಎಂದು ಹೇಳಿದೆ. ಹೀಗಾಗಿ ಈ ಪ್ರತಿಪಾದನೆ ಸುಳ್ಳಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಭಾರತದ ಪ್ರತಿನಿಧಿ ಸುಪ್ರಿಯಾ ಬೆಜ್ಬಾರುವಾ ಅವರು, ವೈರಲ್‌ ಆಗುತ್ತಿರುವ ಸಂದೇಶವನ್ನು ಖಂಡಿಸಿರುವುದನ್ನು ಅಂತರಾಷ್ಟ್ರೀಯ ಪತ್ರಿಕೆ ಎಪಿಎಫ್ ವರದಿ ಮಾಡಿದೆ.

ಇದರ ಬದಲಾಗಿ ವಿಶ್ವ ಆರೋಗ್ಯ ಸಂಸ್ಥೆ ತನ್ನ ವೆಬ್‌ಸೈಟ್‌ನಲ್ಲಿ ಪೌಷ್ಠಿಕಾಂಶದ ಸಲಹೆ ನೀಡುತ್ತಾ, ಕೊರೊನಾ ಸಾಂಕ್ರಮಿಕ ಸಮಯದಲ್ಲಿ ವಯಸ್ಕರಿಗೆ ಮಾಂಸ ಸೇವಿಸುವಂತೆ ಶಿಫಾರಸ್ಸು ಮಾಡುತ್ತದೆ.

ಗೌಡೆನ್ ಗಲಿಯಾ ಅವರ ಹೇಳಿಕೆ

ಗ್ರಾಫಿಕ್‌ನಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಚೀನಾ ಪ್ರತಿನಿಧಿ ಗೌಡೆನ್ ಗಲಿಯಾ ಅವರ ಹೇಳಿಕೆಯು ನಿಜವಾಗಿದ್ದರೂ, ಅದನ್ನು ಬೇರೆ ಸಂದರ್ಭದಿಂದ ಆಯ್ಕೆ ಮಾಡಿದ್ದಾರೆ. ಚೀನಾದ ವುಹಾನ್‌ನಲ್ಲಿನ ಸಮುದ್ರಹಾರ ಮಾರುಕಟ್ಟೆಯಲ್ಲಿ ಪತ್ತೆಯಾದ ಕೊರೊನಾ ವೈರಸ್ ಕುರಿತಾದ ಸಿಎನ್‌ಎನ್ ವರದಿಯಲ್ಲಿ ಗ್ಯಾಲಿಯಾ ಹೇಳಿಕೆಗಳು ಕಾಣಿಸಿಕೊಂಡಿವೆ.

“ಸಿಎನ್ಎನ್ ಈ ವೀಡಿಯೊವನ್ನು ಮಾರುಕಟ್ಟೆಯೊಳಗೆ ಚಿತ್ರೀಕರಿಸಲಾಗಿದೆ, ಇಲ್ಲಿ ಸಮುದ್ರಾಹಾರಕ್ಕಿಂತ ಹೆಚ್ಚು ಬೇರೆಯದನ್ನೇ ಮಾರಾಟ ಮಾಡಲಾಗುತ್ತಿದೆ ಎಂದು ತೋರಿಸುತ್ತದೆ. ಪಕ್ಷಿಗಳು, ಹಾವುಗಳು, ರಕೂನ್ ನಾಯಿಗಳು ಸೇರಿದಂತೆ ಇತರ ಜೀವಂತ ಕಾಡು ಪ್ರಾಣಿಗಳನ್ನು ಮಾರಾಟ ಮಾಡುತ್ತಿವೆ ಎಂದು ಸೂಚಿಸುತ್ತದೆ. ವೈರಸ್ ಪ್ರಾಣಿಗಳಿಂದ ಮನುಷ್ಯರಿಗೆ ಹರಡಿರಬಹುದು ಎಂಬ ಆತಂಕವನ್ನು ಹುಟ್ಟುಹಾಕಿದೆ” ಎಂದು ವರದಿ ಹೇಳುತ್ತದೆ.

ನಂತರ ವೀಡಿಯೊದಲ್ಲಿ 3:40 ನಿಮಿಷಗಳಲ್ಲಿ, ಗಲಿಯಾ, “ಪ್ರಾಣಿ ಪ್ರಪಂಚದೊಂದಿಗಿನ ನಮ್ಮ ಇಂಟರ್ಫೇಸ್‌ನಲ್ಲಿ, ಯಾವಾಗಲೂ ಸ್ಪಿಲ್‌ಓವರ್‌ನ ಅಪಾಯವಿರುತ್ತದೆ ಮತ್ತು ಜನರು ಮಾಂಸವನ್ನು ತಿನ್ನುವವರೆಗೂ ಸೋಂಕಿನ ಅಪಾಯವಿದೆ” ಎಂದು ಹೇಳಿದರು.

ಹೀಗಾಗಿ, ಗಲಿಯಾ ಮಾಂಸ ಸೇವನೆಯ ವಿರುದ್ಧ ಸಲಹೆ ನೀಡುವುದಿಲ್ಲ ಆದರೆ ಅವರ ಹೇಳಿಕೆಯು ವಿಲಕ್ಷಣ ಮಾಂಸಹಾರದ ಕುರಿತಾಗಿದೆ. ಆದ್ದರಿಂದ, ಯಾವುದೇ ಸಸ್ಯಾಹಾರಿಗಳಿಗೆ ಕೊರೊನಾ ವೈರಸ್ ಬರುವುದಿಲ್ಲ ಎಂಬ ಹೇಳಿಕೆ ತಪ್ಪಾಗಿದೆ.


ಓದಿ: ಕೊರೊನಾ ವೈರಸ್ ಎಂದಿಗೂ ಹೋಗದಿರಬಹುದು: ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ


 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...