Homeಫ್ಯಾಕ್ಟ್‌ಚೆಕ್FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ...

FACT CHECK : ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಕೇಂದ್ರ ಶಿಕ್ಷಣ ಸಚಿವರ ಹೇಳಿಕೆ ನಿಜವೇ? ಇಲ್ಲಿದೆ ಸತ್ಯಾಸತ್ಯತೆ

- Advertisement -
- Advertisement -

ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ಕಳೆದ ಏಳು ವರ್ಷಗಳಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿದ್ದರು.

ಜುಲೈ 22ರಂದು ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನ್ “ಗೌರವಾನ್ವಿತ ಸದಸ್ಯರು ಕಳೆದ 7 ವರ್ಷಗಳಲ್ಲಿ 70 ಬಾರಿ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವ ಕುರಿತು ಪ್ರಶ್ನೆ ಎತ್ತಿದ್ದಾರೆ. ಸರ್, ಸಂಪೂರ್ಣ ಜವಾಬ್ದಾರಿಯೊಂದಿಗೆ ನಾನು ಸದನಕ್ಕೆ ಹೇಳುತ್ತಿದ್ದೇನೆ, ಕಳೆದ 7 ವರ್ಷಗಳಲ್ಲಿ ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದಕ್ಕೆ ಪುರಾವೆಗಳಿಲ್ಲ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿದೆ. ತೀರ್ಪು ಬಂದ ಮೇಲೆ ಈ ಬಗ್ಗೆ ಗೊತ್ತಾಗಲಿದೆ” ಎಂದಿದ್ದರು.

ವಿಡಿಯೋ ಲಿಂಕ್ ಇಲ್ಲಿದೆ (8:50 ನಿಮಿಷದಿಂದ ಸಚಿವರ ಹೇಳಿಕೆಯಿದೆ)

ರಾಜಸ್ಥಾನದ ಚುರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಹುಲ್ ಕಸ್ವಾನ್ ಅವರು ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಕೇಳಿದ ಪ್ರಶ್ನೆಗೆ ಧರ್ಮೇಂದ್ರ ಪ್ರಧಾನ್ ಮೇಲಿನಂತೆ ಪ್ರತಿಕ್ರಿಯಿಸಿದ್ದರು.

ಹಾಗಾದರೆ, ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದಂತೆ ಕಳೆದ 7 ವರ್ಷಗಳಲ್ಲಿ ಯಾವುದೇ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲವೇ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ಪ್ರಮುಖ ಪ್ರಶ್ನೆ ಪತ್ರಿಕೆಗಳ ಸೋರಿಕೆಯ ಕುರಿತು ಮಾಹಿತಿ ಕೆಳಗಿದೆ.

ಯುಜಿಸಿ-ನೆಟ್ 2024 ಪ್ರಶ್ನೆ ಪತ್ರಿಕೆ ಸೋರಿಕೆ : ವರದಿಗಳ ಪ್ರಕಾರ, ಜೂನ್ 2024ರಲ್ಲಿ ಯುಜಿಸಿ-ನೆಟ್ (ವಿಶ್ವವಿದ್ಯಾಲಯ ಅನುದಾನ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ) ಪರೀಕ್ಷೆಗಳು ನಡೆದ ಮರು ದಿನ ಅದನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಸುಳಿವು ಸಿಕ್ಕ ಹಿನ್ನೆಲೆ ರದ್ದುಗೊಳಿಸಿರುವುದಾಗಿ ಸ್ವತಃ ಸಚಿವರೇ ತಿಳಿಸಿದ್ದರು.

ಜೂನ್ 20 ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಸಚಿವ ಪ್ರಧಾನ್ “ಯುಜಿಸಿ ಅಧ್ಯಕ್ಷರು ಡಾರ್ಕ್ ನೆಟ್‌ನಲ್ಲಿ ಕೆಲವು ಪ್ರಶ್ನೆಗಳು ಸೋರಿಕೆಯಾದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್‌ಟಿಎ) ಸಿದ್ಧಪಡಿಸಿರುವ ಮೂಲ ಪ್ರಶ್ನೆ ಪತ್ರಿಕೆಗೆ ಹೊಂದಿಕೆಯಾಗುತ್ತಿವೆ ಎಂದು ಅವರು ಉಲ್ಲೇಖಿಸಿದ್ದರು.

ಸೋರಿಕೆಯಾಗಿರುವ ಪ್ರಶ್ನೆಗಳು ಮತ್ತು ಮೂಲ ಪತ್ರಿಕೆಯ ಪ್ರಶ್ನೆಗಳು ಒಂದೇ ಎಂದು ಖಚಿತವಾದ ಹಿನ್ನೆಲೆ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ದ ತನಿಖೆಗೆ ವಹಿಸಲಾಗಿದೆ ಎಂದಿದ್ದರು.

ರದ್ದುಗೊಂಡಿರುವ ಯುಜಿಸಿ-ನೆಟ್ ಮರು ಪರೀಕ್ಷೆಗೆ ಈ ವರ್ಷದ ಆಗಸ್ಟ್ 21 ಮತ್ತು ಸೆಪ್ಟೆಂಬರ್ 4 ರ ನಡುವೆ ದಿನಾಂಕ ನಿಗದಿಪಡಿಸಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ 

ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ ವಿಷಯಗಳು ಮತ್ತು ಪ್ರಕರಣವನ್ನು ಸಿಬಿಐಗೆ ವಹಿಸಿರುವುದು ಯುಜಿಸಿ-ನೆಟ್ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದನ್ನು ಖಚಿತಪಡಿಸಿದೆ.

ಯುಜಿಸಿ-ನೆಟ್ ಹಿಂದಿ ಪ್ರಶ್ನೆ ಪತ್ರಿಕೆ 2021: ಡಿಸೆಂಬರ್ 26, 2021ರಂದು ನಡೆದ ಯುಜಿಸಿ-ನೆಟ್ ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಹರಿಯಾಣ ಪೊಲೀಸರ ತಂಡವು ಈ ಪ್ರಕರಣ ಸಂಬಂಧ ಸಿಆರ್‌ಪಿಎಫ್‌ ಕಾನ್‌ಸ್ಟೇಬಲ್ ಒಬ್ಬರನ್ನು ಬಂಧಿಸಲು ಪ್ರಯತ್ನಿಸುತ್ತಿದೆ ಎಂದು ಡಿಸೆಂಬರ್ 30, 2021ರಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಪ್ರಕರಣದ ಬೆಳವಣಿಗೆಗಳ ಬಗ್ಗೆ ತನಿಖಾ ತಂಡಕ್ಕೆ ತಿಳಿಸುವಂತೆ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರತಿಯನ್ನು ಯುಜಿಸಿಗೆ ಕಳುಹಿಸಲಾಗಿತ್ತು.

ಡಿಸೆಂಬರ್ 30, 2022ರಂದು ಇಂಡಿಯನ್ ಎಕ್ಸ್‌ಪ್ರೆಸ್ ತನ್ನ ವರದಿಯಲ್ಲಿ, ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಪಂಜಾಬ್‌ನ ಜಿಂದ್ ಮತ್ತು ಭಿವಾನಿ ಜಿಲ್ಲೆಗಳ ಸುಮಾರು ಒಂಬತ್ತು ಜನರನ್ನು ಬಂಧಿಸಲಾಗಿದೆ ಎಂದು ಹೇಳಿತ್ತು.

ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ ಪರೀಕ್ಷೆ ನಡೆಯುವ ಸುಮಾರು ಆರು ಗಂಟೆಗಳ ಮೊದಲು ಪ್ರಶ್ನೆ ಪತ್ರಿಕೆಯನ್ನು ವಾಟ್ಸಾಪ್‌ನಲ್ಲಿ ಕಳುಹಿಸಿದ್ದ ಎಂದು ಬಂಧಿತ ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

“ಹಿಂದಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ 150 ಪ್ರಶ್ನೆಗಳನ್ನು ಮುಂಚಿತವಾಗಿ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ” ಎಂದು ಆರೋಪಿಗಳು ಹೇಳಿಕೊಂಡಿದ್ದಾರೆ. ಈ ಪ್ರಶ್ನೆಗಳನ್ನು ಅವರ ಸೆಲ್‌ಫೋನ್‌ನಲ್ಲಿಯೂ ನಾವು ಕಂಡುಕೊಂಡಿದ್ದೇವೆ. ಆದರೆ ಇನ್ನೂ ನಾವು ಅದನ್ನು ಯುಜಿಸಿ ಅಧಿಕಾರಿಗಳಿಂದ ಪರಿಶೀಲಿಸಲು ಬಯಸುತ್ತೇವೆ” ಎಂದು ಅದು ಅಧಿಕಾರಿಯೊಬ್ಬರನ್ನು ಹೇಳಿದ್ದಾಗಿ ವರದಿಯಲ್ಲಿ ತಿಳಿಸಲಾಗಿತ್ತು.

ನೀಟ್ 2021 ಪ್ರಶ್ನೆ ಪತ್ರಿಕೆ ಸೋರಿಕೆ : ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ರಾಜಸ್ಥಾನದ ಸಿಕಾರ್‌ನಲ್ಲಿ ವ್ಯಕ್ತಿಯೊಬ್ಬ ಪ್ರಶ್ನೆ ಪತ್ರಿಕೆಯ ಫೋಟೋ ಸೆರೆಹಿಡಿದು ಇತರರಿಗೆ ಕಳುಹಿಸಿದ ನಂತರ ಅದು ಸೋರಿಕೆಯಾಗಿತ್ತು.

ಈ ಸಂಬಂಧ ಜೈಪುರ ಪೊಲೀಸರು ರಾಜಸ್ಥಾನದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (RIET) ನಲ್ಲಿರುವ ಪರೀಕ್ಷಾ ಕೇಂದ್ರದಿಂದ ಬಾಲಕಿ ಸೇರಿದಂತೆ ಸುಮಾರು ಎಂಟು ಜನರನ್ನು ಬಂಧಿಸಿದ್ದರು.

ಆರೋಪಿ ದಿನೇಶ್ವರಿ ಕುಮಾರ್, ಆಕೆಯ ಚಿಕ್ಕಪ್ಪ, ಪರೀಕ್ಷಾ ನಿರೀಕ್ಷಕ ರಾಮ್ ಸಿಂಗ್ ಮತ್ತು ಪರೀಕ್ಷಾ ಕೇಂದ್ರದ ಆಡಳಿತ ಘಟಕದ ಉಸ್ತುವಾರಿ ಮುಖೇಶ್ ಅವರನ್ನು ಬಂಧಿಸಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ತಿಳಿಸಿತ್ತು.

ರಾಮ್ ಸಿಂಗ್ ಮತ್ತು ಮುಖೇಶ್ ಅವರು ಜೈಪುರದ ಚಿತ್ರಕೂಟ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳಿಗೆ ಪ್ರಶ್ನೆ ಪತ್ರಿಕೆಯ ಫೋಟೋಗಳನ್ನು ಕಳುಹಿಸಿದ್ದರು. ನಂತರ ಅವರು ಅದನ್ನು ಸಿಕಾರ್‌ನಲ್ಲಿರುವ ಇತರರಿಗೆ ರವಾನಿಸಿದ್ದರು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇತರ ಪರೀಕ್ಷಾ ಅಕ್ರಮಗಳು : ಸೆಪ್ಟೆಂಬರ್ 2021ರಲ್ಲಿ, ಹರಿಯಾಣದ ಸೋನೆಪತ್‌ನಲ್ಲಿರುವ ಕೇಂದ್ರದಿಂದ ರಿಮೋಟ್ ಪ್ರವೇಶದ ಮೂಲಕ ಅಭ್ಯರ್ಥಿಗಳ ಪ್ರಶ್ನೆ ಪತ್ರಿಕೆಯನ್ನು ಪರಿಹರಿಸಿದ್ದಕ್ಕಾಗಿ ಅಫಿನಿಟಿ ಎಜುಕೇಶನ್ ಪ್ರೈವೇಟ್ ಲಿಮಿಟೆಡ್, ಅದರ ನಿರ್ದೇಶಕರು, ಉದ್ಯೋಗಿಗಳು ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.

ಪರೀಕ್ಷೆ ನಡೆಸಿದ ಸಾಫ್ಟ್‌ವೇರ್ ಅನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ಅಕ್ಟೋಬರ್ 2022 ರಲ್ಲಿ ಮಿಖಾಯಿಲ್ ಶಾರ್ಗಿನ್ ಎಂಬ ರಷ್ಯಾದ ಹ್ಯಾಕರ್ ಅನ್ನು ಸಿಬಿಐ ಬಂಧಿಸಿತ್ತು.

2021ರ ಜೆಇಇ ಮುಖ್ಯ ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಆಗಿದ್ದ ವಿನಯ್ ದಹಿಯಾ ಅವರನ್ನು ಮಾರ್ಚ್ 2023 ರಲ್ಲಿ ಸಿಬಿಐ ಬಂಧಿಸಿತ್ತು.

ನಾವು ಮೇಲೆ ಉಲ್ಲೇಖಿಸಿ ಕೆಲ ಪ್ರಕರಣಗಳು ಕಳೆದ ಕೆಲ ವರ್ಷಗಳಲ್ಲಿ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ ಎಂಬುವುದನ್ನು ಪುಷ್ಠೀಕರಿಸುತ್ತದೆ. ಹಾಗಾಗಿ, ಯಾವುದೇ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿಲ್ಲ ಎಂಬ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹೇಳಿಕೆ ಸುಳ್ಳು

ನೀಟ್ -ಯುಜಿ 2024 ಪ್ರಶ್ನೆ ಪತ್ರಿಕೆಯೂ ಸೋರಿಕೆಯಾಗಿದೆ. ಹಾಗಾಗಿ ಮರು ಪರೀಕ್ಷೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು. ಈ ಸಂಬಂಧ ಜುಲೈ 23, 2024ರಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, “ನೀಟ್-ಯುಜಿ ಮರು ಪರೀಕ್ಷೆ ಇಲ್ಲ, ಪರೀಕ್ಷಾ ಪಾವಿತ್ರ್ಯ ಉಲ್ಲಂಘಿಸಲಾಗಿದೆ ಎಂದು ತೀರ್ಮಾನಿಸಲು ಸಾಧ್ಯವಿಲ್ಲ” ಎಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂ ದೇವಾಲಯ ಕೆಡವಿದ್ದಾರೆ ಎಂದು ಸುಳ್ಳು ವಿಡಿಯೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...