Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ...

FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಕೇರಳದ ಚರ್ಚ್ ಒಂದರ ಮೇಲೆ ಇತ್ತೀಚೆಗೆ ಇಡಿ ದಾಳಿ ನಡೆಸಿದ ವೇಳೆ 7,000 ಕೋಟಿ ರೂಪಾಯಿ ಮೌಲ್ಯದ ಕಪ್ಪುಹಣ ಪತ್ತೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿದ್ದು, 500 ರೂಪಾಯಿ ನೋಟುಗಳ ದೊಡ್ಡ ರಾಶಿ ಮತ್ತು ಪಾದ್ರಿಯೊಬ್ಬರ ಫೋಟೋವನ್ನು ಹಂಚಿಕೊಳ್ಳಲಾಗ್ತಿದೆ.

“ಇಡಿ ಕೇರಳದ ಲಿನಿ ಬೆಲರೂಸಿಯನ್ ಎಂಬ ಚರ್ಚ್‌ನಿಂದ 7000 ಕೋಟಿ ರೂಪಾಯಿ ಮೌಲ್ಯದ ಕಪ್ಪು ಹಣವನ್ನು ವಶಪಡಿಸಿಕೊಂಡಿದೆ. ಇದನ್ನು ಯೋಹಾನನ್ ಎಂಬ ಬಿಷಪ್ ನಡೆಸುತ್ತಾರೆ. ಇದುವರೆ ಈ ವಿಷಯ ಎಲ್ಲಿಯೂ ಸುದ್ದಿಯಾಗಿಲ್ಲ. ಯಾವುದಾದರು ಹಿಂದೂ ಸ್ವಾಮಿ ಬಳಿ 700 ಕೋಟಿಯ ಬಿಡಿ, 7 ಕೋಟಿ ರೂ. ಸಿಕ್ಕಿದ್ದರೆ ಸುದ್ದಿ ವಾಹಿನಿಗಳು 48 ಗಂಟೆಗಳ ಕಾಲ ಬೆತ್ತಲೆಯಾಗಿ ಕುಣಿಯಲು ಪ್ರಾರಂಭಿಸುತ್ತಿದ್ದವು” ಎಂದು ಸಾಮಾಜಿಕ ಜಾಲತಾಣದ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಪೋಟೋ ಮತ್ತು ಬರಹದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಈ ಕುರಿತು ಮಾಹಿತಿ ಹುಡುಕಿದಾಗ ನವೆಂಬರ್ 7, 2020ರಂದು ಲೈವ್ ಹಿಂದುಸ್ತಾನ್ ಸುದ್ದಿ ವೆಬ್‌ಸೈಟ್‌ ಪ್ರಕಟಿಸಿದ ಸುದ್ದಿ ಲಭ್ಯವಾಗಿದೆ.

ಈ ಸುದ್ದಿಯಲ್ಲಿ ನವೆಂಬರ್ 5, 2020 ರಂದು ಆದಾಯ ತೆರಿಗೆ ಇಲಾಖೆ ಕೇರಳದ ತಿರುವಲ್ಲಾದಲ್ಲಿರುವ ಬಿಲೀವರ್ಸ್ ಈಸ್ಟರ್ನ್ ಚರ್ಚ್‌ಗೆ ಸಂಬಂಧಿಸಿದ ಕಚೇರಿಗಳ ಮೇಲೆ ದಾಳಿ ನಡೆಸಿದೆ. ಕೇರಳ ಈ ಚರ್ಚ್ ಮೆಟ್ರೋಪಾಲಿಟನ್ ಬಿಷಪ್ ಕೆ.ಪಿ ಯೋಹಾನನ್ ಅವರ ನೇತೃತ್ವದಲ್ಲಿ ನಡೆಯುತ್ತದೆ. ಐಟಿ ಇಲಾಖೆಯು ಚರ್ಚ್‌ನಿಂದ 5 ಕೋಟಿ ರೂಪಾಯಿ ಮೌಲ್ಯದ ಕರೆನ್ಸಿ ನೋಟುಗಳು ಮತ್ತು ಬೆಲೆ ಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ತಿಳಿಸಲಾಗಿತ್ತು.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ ನವೆಂಬರ್ 6, 2020ರಂದು ಹಣಕಾಸು ಇಲಾಖೆಯ ಪರವಾಗಿ ಪ್ರೆಸ್ ಇನ್ಫರ್‌ಮೇಶನ್ ಬ್ಯೂರೋ (ಪಿಐಬಿ) ಪ್ರಕಟಿಸಿದ್ದ ಮಾಹಿತಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ “ಆದಾಯ ತೆರಿಗೆ ಇಲಾಖೆಯು ನವೆಂಬರ್ 5, 2020ರಂದು ಕೇರಳದ ತಿರುವಲ್ಲಾದ ಪ್ರಸಿದ್ಧ ಸುವಾರ್ತಾಬೋಧಕ ಟ್ರಸ್ಟ್ ಮತ್ತು ಅದರ ಸಂಸ್ಥೆಗಳಲ್ಲಿ ಆದಾಯ ತೆರಿಗೆ ಕಾಯ್ದೆ, 1961ರ ಅಡಿ ಶೋಧ ನಡೆಸಿದೆ. ಇ ಧಾರ್ಮಿಕ ಟ್ರಸ್ಟ್ ಶಾಲಾ, ಕಾಲೇಜುಗಳು, ವೈದ್ಯಕೀಯ ಶಿಕ್ಷಣ ಸಂಸ್ಥೆಗಳು ಮತ್ತು ಮತ್ತು ಕೇರಳದಲ್ಲಿ ಆಸ್ಪತ್ರೆಗಳನ್ನು ನಡೆಸುತ್ತಿವೆ. ಐಟಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಕರ್ನಾಟಕ, ಚಂಡೀಗಢ, ಪಂಜಾಬ್ ಮತ್ತು ತೆಲಂಗಾಣದಲ್ಲಿರುವ ಸಂಸ್ಥೆಯ 66 ಸ್ಥಳಗಳಲ್ಲಿ ಪರಿಶೀಲನೆ ನಡೆಸಿದೆ. ಈ ವೇಳೆ ದೆಹಲಿಯ ಪ್ರಾರ್ಥನಾ ಸ್ಥಳದಲ್ಲಿ 3.85 ಕೋಟಿ ರೂ. ಸೇರಿದಂತೆ ಅಂದಾಜು 6 ಕೋಟಿಯಷ್ಟು ದಾಖಲೆಯಿಲ್ಲದ ಹಣ ಪತ್ತೆಯಾಗಿದೆ ಎಂದು ತಿಳಿಸಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ ಇತ್ತೀಚೆಗೆ ಕೇರಳದ ಚರ್ಚ್‌ ಮೇಲೆ ಇಡಿ ದಾಳಿ ನಡೆಸಿರುವುದು ಮತ್ತು ಬರೋಬ್ಬರಿ 7 ಸಾವಿರ ಕೋಟಿ ರೂಪಾಯಿ ಪತ್ತೆಯಾಗಿರುವ ಕುರಿತು ಮಾಹಿತಿ ಲಭ್ಯವಾಗಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ಸುಳ್ಳು ಎಂಬುವುದು ಖಚಿತವಾಗಿದೆ.

ಇದನ್ನೂ ಓದಿ : FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...