Homeಫ್ಯಾಕ್ಟ್‌ಚೆಕ್FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು...

FACT CHECK : ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷದಲ್ಲಿ 60,000 ಶಿಶುಗಳು ಜನಿಸಿವೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದ ರೋಹಿಂಗ್ಯಾ ಶಿಬಿರಗಳಲ್ಲಿ ಒಂದು ವರ್ಷಕ್ಕೆ ಸುಮಾರು 60,000 ಶಿಶುಗಳು ಜನಿಸಿವೆ. ದೇಶದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ” ಎಂಬ ಪೋಸ್ಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿವೆ.

ಫ್ಯಾಕ್ಟ್‌ಚೆಕ್ : ವೈರಲ್ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಕೀವರ್ಡ್ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಫೆಬ್ರವರಿ 28,2018ರಲ್ಲಿ ಇಂಡಿಯಾ ಟಿವಿ ವೆಬ್‌ ಸೈಟ್‌ನಲ್ಲಿ ಪ್ರಕಟಗೊಂಡ ವರದಿಯೊಂದು ಲಭ್ಯವಾಗಿದೆ.

ವರದಿಯಲ್ಲಿ “ಬಾಂಗ್ಲಾದೇಶದ ರೋಹಿಂಗ್ಯಾ ನಿರಾಶ್ರಿತರ ಶಿಬಿರಗಳಲ್ಲಿನ ಶೋಚನೀಯ ಪರಿಸ್ಥಿತಿಗಳನ್ನು ಚರ್ಚಿಸಿದ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಹೆಚ್‌ಒ) ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ. ಪೂನಂ ಖೇತ್ರಪಾಲ್ ಅವರು, ಮ್ಯಾನ್ಮಾರ್‌ನಿಂದ ಪಲಾಯನ ಮಾಡಿರುವ ರೋಹಿಂಗ್ಯಾಗಳ ಪರಿಸ್ಥಿತಿಯನ್ನು ಭಯಾನಕ ಎಂದು ವಿವರಿಸಿದ್ದಾರೆ. ಮುಂದಿನ ವರ್ಷದಲ್ಲಿ ಈ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಅವರು ಅಂದಾಜಿಸಿದ್ದಾರೆ” ಎಂದು ಉಲ್ಲೇಖಿಸಲಾಗಿದೆ.

ಡಾ. ಖೇತ್ರಪಾಲ್ ಅವರು ಬಾಂಗ್ಲಾ ದೇಶದ ರೋಹಿಂಗ್ಯಾ ಶಿಬಿರಗಳನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆಯೇ ಹೊರತು ಭಾರತದ್ದಲ್ಲ ಎಂಬುವುದು ವರದಿಯಿಂದ ತಿಳಿದು ಬಂದಿದೆ. ಡಾ. ಖೇತ್ರಪಾಲ್ ಅವರ ಈ ಹೇಳಿಕೆಯನ್ನೇ ತಪ್ಪಾಗಿ ಅರ್ಥೈಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರಬಹುದು.

ಯುಎನ್‌ಹೆಚ್‌ಸಿಆರ್‌ನ ಅಧಿಕೃತ ಅಂಕಿ ಅಂಶಗಳು ರೋಹಿಂಗ್ಯಾ ಶಿಬಿರಗಳಲ್ಲಿನ ಪರಿಸ್ಥಿತಿಗಳು ಆತಂಕಕಾರಿಯಾಗಿದೆ ಎಂದಿತ್ತು. ಬಾಂಗ್ಲಾದೇಶದ ನಿರಾಶ್ರಿತರ ಶಿಬಿರಗಳಲ್ಲಿ ಪ್ರತಿದಿನ 60ಕ್ಕೂ ಹೆಚ್ಚು ರೋಹಿಂಗ್ಯಾ ಶಿಶುಗಳು ಜನಿಸುತ್ತಿವೆ ಎಂದು ಯುಎನ್‌ಹೆಚ್‌ಸಿಆರ್‌ 2018ರಲ್ಲಿ ವರದಿ ಮಾಡಿತ್ತು.

ಭಾರತದಲ್ಲಿ ರೋಹಿಂಗ್ಯಾಗಳ ಪರಿಸ್ಥಿತಿ ಹೇಗಿದೆ?

ಎನ್‌ಹೆಚ್‌ಸಿಆರ್‌ ಪ್ರಕಾರ, 31 ಜನವರಿ 2022ರಂತೆ, 46,000 ಕ್ಕೂ ಹೆಚ್ಚು ನಿರಾಶ್ರಿತರು ಮತ್ತು ಮುಖ್ಯವಾಗಿ ಮ್ಯಾನ್ಮಾರ್ ಮತ್ತು ಅಫ್ಘಾನಿಸ್ತಾನದಿಂದ ಆಶ್ರಯ ಹುಡುಕಿಕೊಂಡು ಬಂದವರು ಭಾರತದಲ್ಲಿ ನೋಂದಾಯಿಸಲ್ಪಟ್ಟಿದ್ದಾರೆ. ಆದರೆ, ಭಾರತದಲ್ಲಿನ ರೋಹಿಂಗ್ಯಾ ಶಿಬಿರಗಳಲ್ಲಿ ಎಷ್ಟು ಹೆರಿಗೆಗಳು ನಡೆಯುತ್ತಿವೆ ಎಂಬುವುದರ ಕುರಿತು ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ದೇಶದಲ್ಲಿ ವಾಸಿಸುತ್ತಿರುವ ರೋಹಿಂಗ್ಯಾಗಳ ಸಂಖ್ಯೆಯ ಬಗ್ಗೆ ನಿಖರವಾದ ಅಂಕಿ ಅಂಶಗಳಿಲ್ಲ ಎಂದು ಭಾರತ ಸರ್ಕಾರ ಹಲವಾರು ಸಂದರ್ಭಗಳಲ್ಲಿ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ಮ್ಯಾನ್ಮಾರ್‌ನಿಂದ ಸುಮಾರು 40,000 ರೋಹಿಂಗ್ಯಾಗಳು ಅಕ್ರಮವಾಗಿ ಭಾರತವನ್ನು ಪ್ರವೇಶಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ತಿಳಿದು ಬಂದಂತೆ, ಒಂದು ವರ್ಷಕ್ಕೆ 60 ಸಾವಿರ ರೋಹಿಂಗ್ಯಾ ಶಿಶುಗಳ ಜನಿಸಿವೆ ಎಂಬ ವರದಿ ಭಾರತಕ್ಕೆ ಸಂಬಂಧಿಸಿದ್ದಲ್ಲ. ಬಾಂಗ್ಲಾದೇಶದ ರೋಹಿಂಗ್ಯಾ ಶಿಬಿರಗಳ ಕುರಿತಾಗಿದೆ. ಅಲ್ಲಿಯೂ ಮುಂದಿನ ವರ್ಷದಲ್ಲಿ ನಿರಾಶ್ರಿತರ ಶಿಬಿರಗಳಲ್ಲಿ 60,000 ಶಿಶುಗಳು ಜನಿಸಬಹುದು ಎಂದು ಡಾ. ಪೂನಂ ಖೇತ್ರಪಾಲ್ 2018ರಲ್ಲಿ ಅಂದಾಜಿಸಿದ್ದರು. ಅಷ್ಟು ಶಿಶುಗಳ ಜನಿಸಿವೆಯೇ? ಎಂಬುವುದು ಖಚಿತವಾಗಿಲ್ಲ.

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...