Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಸರ್ಕಾರದ ವಿರುದ್ದ ಪ್ರತಿಭಟನೆ ಭುಗಿಲೆದ್ದು, ಹಿಂಸಾಚಾರ ಉಂಟಾಗಿ ರಾಜಕೀಯ ಅರಾಜಕತೆ ಸೃಷ್ಟಿಯಾದ ಬಳಿಕ, ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಹುಸಂಖ್ಯಾತ ಮುಸ್ಲಿಮರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಹರಿದಾಡುತ್ತಿದೆ.

ಬೆಂಗಳೂರಿನ ಮಹಿಳೆಯೊಬ್ಬರ ಮೇಲೆ ದೌರ್ಜನ್ಯವೆಸಗಿದ ವಿಡಿಯೋವೊಂದನ್ನು ಬಾಂಗ್ಲಾದೇಶದಲ್ಲಿ ಮುಸ್ಲಿಮರಿಂದ ಹಿಂದೂ ಮಹಿಳೆಯ ಅತ್ಯಾಚಾರ ಎಂದು ಹಂಚಿಕೊಳ್ಳಲಾಗಿತ್ತು. ಈ ನಡುವೆ ಬಾಂಗ್ಲಾದ ಕ್ರಿಕೆಟರ್ ಲಿಟನ್ ದಾಸ್ ಕುಮಾರ್ ಅವರ ಮನೆಗೆ ಮುಸ್ಲಿಮರು ಬೆಂಕಿ ಹಚ್ಚಿದ್ದಾರೆ ಎಂದು ಫೋಟೋವೊಂದು ವೈರಲ್ ಆಗಿದೆ.

ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಸದಾ ಸುಳ್ಳು, ಕೋಮುವೈಷಮ್ಯದ ಸುದ್ದಿಗಳನ್ನು ಹರಡುವ ಬಲಪಂಥೀಯ ಎಕ್ಸ್ ಬಳಕೆದಾರರಾದ ಸುನಂದಾ ರಾಯ್ (saffronSunanda)”ಇವರು ಲಿಟನ್ ದಾಸ್ ಬಾಂಗ್ಲಾದೇಶದ ಕ್ರಿಕೆಟ್ ಆಟಗಾರ. ಇವರು ಬಾಂಗ್ಲಾದೇಶದ ನ್ಯಾಷನಲ್ ಹೀರೋ. ಇವರ ಮನೆಗೆ ಇಸ್ಲಾಮಿಸ್ಟ್‌ಗಳು ಬೆಂಕಿ ಹಚ್ಚಿದ್ದಾರೆ. ಇದು ಬಾಂಗ್ಲಾದೇಶದ ಒಬ್ಬ ಗಣ್ಯ ಹಿಂದೂವಿನ ಸ್ಥಿತಿ. ಸಾಮಾನ್ಯ ಹಿಂದೂಗಳ ಸ್ಥಿತಿಯನ್ನು ಊಹಿಸಿಕೊಳ್ಳಿ” ಎಂದು ಬರೆದುಕೊಂಡಿದ್ದಾರೆ.

ಹಿಂದುತ್ವ ನೈಟ್ (HPhobiaWatch) ಎಂಬ ಮತ್ತೊಂದು ಎಕ್ಸ್‌ ಖಾತೆಯನ್ನೂ ವೈರಲ್ ಫೋಟೋ ಹಂಚಿಕೊಂಡು “ಬಾಂಗ್ಲಾದೇಶದ ಹಿಂದೂ ಕ್ರಿಕೆಟರ್ ಲಿಟನ್ ದಾಸ್ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಪ್ರತಿಪಾದನೆಗಳೊಂದಿಗೆ ಇನ್ನೂ ಅನೇಕರು ವೈರಲ್ ಫೋಟೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿ ಇಲ್ಲಿ ಇಲ್ಲಿ ನೋಡಬಹುದು.

ಫ್ಯಾಕ್ಟ್‌ಚೆಕ್ : ಲಿಟನ್ ದಾಸ್ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹಂಚಿಕೊಂಡಿರುವ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಆ ಮನೆ ಲಿಟನ್ ದಾಸ್ ಅವರದ್ದಲ್ಲ, ಮಾಜಿ ಕ್ರಿಕೆಟಿಗ ಮಶ್ರಫೆ ಮೊರ್ತಜಾ ಅವರದ್ದು ಎಂದು ಗೊತ್ತಾಗಿದೆ.

ಈ ಕುರಿತು ನಾವು ಮಾಹಿತಿ ಹುಡುಕಿದಾಗ ‘ದಿ ಬ್ಯುಸಿನೆಸ್ ಸ್ಟ್ಯಾಂಡರ್ಡ್‌‘ ಆಗಸ್ಟ್ 5, 2024ರಂದು ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ನರೈಲ್ -2 ಕ್ಷೇತ್ರದ ಶಾಸಕ ಮಶ್ರಫೆ ಬಿನ್ ಮೊರ್ತಾಜಾ ಅವರ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಲಾಗಿದೆ. ಜಿಲ್ಲಾ ಪರಿಷತ್ ಚೇರ್ಮನ್ ಅಡ್ವೊಕೇಟ್ ಸುಭಾಷ್ ಚಂದ್ರ ಬೋಸ್, ಜಿಲ್ಲಾ ಅವಾಮಿ ಲೀಗ್ ಪ್ರಧಾನ ಕಾರ್ಯದರ್ಶಿ ನಿಜಾಮ್ ಉದ್ದೀನ್ ಖಾನ್ ನಿಲು ಮತ್ತು ಜಿಲ್ಲಾ ಅವಾಮಿ ಲೀಗ್ ಕಚೇರಿಗೂ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾಗಿದೆ.

ಬಾಂಗ್ಲಾದೇಶದ ಢಾಕಾ ಟ್ರಿಬ್ಯೂನ್ ಎಂಬ ಮತ್ತೊಂದು ಸುದ್ದಿ ವೆಬ್ ಸೈಟ್ ಆಗಸ್ಟ್ 4, 2024ರಂದು ಪ್ರಕಟಿಸಿದ ಸುದ್ದಿಯಲ್ಲಿ ಮಶ್ರಫೆ ಅವರ ನರೈಲ್‌ನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಹೇಳಿದೆ. ಈ ಸುದ್ದಿಗೆ ಲಿಟನ್ ದಾಸ್ ಅವರದ್ದು ಎಂದು ವೈರಲ್ ಆಗಿರುವ ಫೋಟೋವನ್ನೇ ಬಳಸಿಕೊಂಡಿದೆ.

ಮಶ್ರಫೆ ಮೊರ್ತಜಾ ಅವರ ಮನೆಗೆ ಬೆಂಕಿ ಹಚ್ಚಲಾಗಿದೆ ಎಂದು ಭಾರತದ ಅನೇಕ ಮಾಧ್ಯಮಗಳೂ ವರದಿ ಮಾಡಿತ್ತು. ಅದರ ಲಿಂಕ್ ಇಲ್ಲಿದೆ.

ಮಾಜಿ ಕ್ರಿಕೆಟಿಗ ಮೊರ್ತಜಾ ಅವರು, ಬಾಂಗ್ಲಾದೇಶದ ರಾಷ್ಟ್ರೀಯ ಕ್ರಿಕೆಟ್ ತಂಡದ ನಾಯಕರೂ ಆಗಿದ್ದರು. ಅವರು 2018 ರಲ್ಲಿ ಅವಾಮಿ ಲೀಗ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಗಸ್ಟ್ 5, 2024ರವರೆಗೆ ಅವರು ನರೈಲ್ -2 ಜಿಲ್ಲೆಯಿಂದ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅವಾಮಿ ಲೀಗ್ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ನೇತೃತ್ವದಲ್ಲಿ ಪ್ರಮುಖ ರಾಜಕೀಯ ಪಕ್ಷವಾಗಿದೆ. ಈ ಪಕ್ಷವನ್ನು ಅವರ ತಂದೆ ದಿವಂಗತ ಶೇಖ್ ಮುಜಿಬುರ್ ರೆಹಮಾನ್ ಸ್ಥಾಪಿಸಿದ್ದಾರೆ.

ಒಟ್ಟಿನಲ್ಲಿ, ಬಾಂಗ್ಲಾದ ಪ್ರತಿಭಟನಾಕಾರರು ಬೆಂಕಿ ಹಚ್ಚಿರು ಮನೆ ಲಿಟನ್ ದಾಸ್ ಅವರದ್ದಲ್ಲ. ಅದು ಮಾಜಿ ಕ್ರಿಕೆಟಿಗ, ಸಂಸದ ಮಶ್ರಫೆ ಅವರದ್ದಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣಗಳ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದಾಳಿ ಎಂದು ಸಂಬಂಧವಿಲ್ಲದ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...