Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ” ಎಂದು ಆರೋಪಿಸಿ ವಿಡಿಯೋವೊಂದು ವೈರಲ್ ಆಗಿದೆ.

Vp Murugeshan(@MurugeshanVp) ಎಂಬ ಎಕ್ಸ್ ಖಾತೆಯಲ್ಲಿ ಜುಲೈ 23, 2024 ರಂದು ವಿಡಿಯೋ ಹಂಚಿಕೊಂಡು “ಇದು ಮಣಿಪುರ ಅಲ್ಲ, ಇದು ಪಶ್ಚಿಮ ಬಂಗಾಳ ಮತ್ತು ಮಮತಾ ಅವರ ಹಿಂದೂ ಹುಡುಗಿಯ ಮೇಲೆ ಮುಸ್ಲಿಮರು ಹೇಗೆ ಅಮಾನುಷವಾಗಿ ಹಲ್ಲೆ ಮಾಡಿದರು ಎಂಬುವುದನ್ನು ದಯವಿಟ್ಟು ನೋಡಿ” ಎಂದು ಬರೆದುಕೊಂಡಿದ್ದರು.

ಜುಲೈ 15ರಂದು ಇದೇ ವಿಡಿಯೋವನ್ನು ಜನ ಸಂವಾದ್ 24X7 ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡು” “ಪೊಲೀಸರ ಮಂದೆಯೇ ಸ್ಥಳೀಯರು ಮಹಿಳೆಯೊಬ್ಬರಿಗೆ ಥಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವೇ?” ಎಂದು ಬರೆದುಕೊಳ್ಳಲಾಗಿತ್ತು.

ಇವಿಷ್ಟೇ ಅಲ್ಲದೆ, ಇತರ ಅನೇಕರು ವಿವಿಧ ಪ್ರತಿಪಾದನೆಗಳೊಂದಿಗೆ ಈ ವಿಡಿಯೋ ಹಂಚಿಕೊಂಡಿದ್ದರು. ವಿಡಿಯೋಗೆ ಕೋಮು ಬಣ್ಣ ಬಳಿದಿರುವುದರಿಂದ ನಾವು ಅದರ ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ.

ಫ್ಯಾಕ್ಟ್‌ಚೆಕ್ : ವಿಡಿಯೋದಲ್ಲಿರುವ ಪೊಲೀಸ್ ವಾಹನದ ಮೇಲೆ ‘ಬರಾಸತ್ ಪೊಲೀಸ್’ ಎಂಬ ಹೆಸರು ಕಾಣಿಸಿದ್ದರಿಂದ ನಾವು ಆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಮೇಲೆ ಗುಂಪು ಹಲ್ಲೆ ನಡೆದಿರುವ ಯಾವುದಾದರು ಘಟನೆ ನಡೆದಿದೆಯೇ? ಎಂದು ಸುದ್ದಿ ಹುಡುಕಿದ್ದೇವೆ. ಈ ವೇಳೆ ‘ಮಕ್ಕಳ ಕಳ್ಳಿ’ ಎಂಬ ಶಂಕೆಯಿಂದ ಮಹಿಳೆಯೊಬ್ಬರ ಮೇಲೆ ಜನರು ಹಲ್ಲೆ ನಡೆಸಿರುವ ಘಟನೆ ಕುರಿತು ಜೂನ್ 2024ರಲ್ಲಿ ಅನೇಕ ಬಂಗಾಳಿ ಮಾಧ್ಯಮಗಳು ಮಾಡಿರುವ ವರದಿಗಳು ದೊರೆತಿವೆ.

ಜೂನ್ 19, 2024ರಂದು ಕೊಲ್ಕತ್ತಾ ಟಿವಿ ಮಾಡಿರುವ ವರದಿಯ ವಿಡಿಯೋ ಕೆಳಗಿದೆ..

ನಾವು ಘಟನೆ ಕುರಿತು ಇನ್ನಷ್ಟು ಮಾಹಿತಿ ಹುಡುಕಿದಾಗ ಇಂಗ್ಲಿಷ್‌ನ ಬೂಮ್ ಸುದ್ದಿ ವೆಬ್‌ಸೈಟ್‌ ಈ ಕುರಿತು ಮಾಡಿರುವ ಫ್ಯಾಕ್ಟ್‌ಚೆಕ್ ಸುದ್ದಿ ದೊರೆತಿದೆ.

ಸುದ್ದಿಯಲ್ಲಿ “ನಾವು ಬರಾಸತ್ ಪೊಲೀಸ್ ಅಧೀಕ್ಷರಾದ ಪ್ರತೀಕ್ಷಾ ಜರ್ಖಾರಿಯಾ ಅವರಿಗೆ ಕರೆ ಮಾಡಿ ಮಹಿಳೆ ಮೇಲಿನ ಹಲ್ಲೆ ಕುರಿತು ವಿಚಾರಿಸಿದ್ದೇವೆ. ಈ ವೇಳೆ ಅವರು ಹಿಂದೂ ಹುಡುಗಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬ ಸುದ್ದಿಯನ್ನು ಅಲ್ಲಗಳೆದಿದ್ದು, ಮಕ್ಕಳ ಕಳ್ಳಿ ಎಂಬ ಶಂಕೆಯ ಮೇಲೆ ಮಹಿಳೆಗೆ ಸ್ಥಳೀಯರು ಥಳಿಸಿದ್ದಾರೆ. ಹಲ್ಲೆಗೊಳಗಾದವರು ಮುಸ್ಲಿಂ ಮಹಿಳೆ. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮ ಇಲ್ಲ” ಎಂದು ತಿಳಿಸಿದ್ದಾಗಿ ಬೂಮ್ ಹೇಳಿದೆ.

‘ಮಕ್ಕಳ ಕಳ್ಳರು’ ಎಂಬ ವದಂತಿ ಹಿನ್ನೆಲೆ ಸ್ಥಳೀಯರು ಥಳಿಸಿರುವ ಎರಡು ಗುಂಪು ಹಲ್ಲೆ ಪ್ರಕರಣಗಳು ಜೂನ್ 19ರಂದು ಬರಾಸತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೊದಲ ಘಟನೆ ಬೆಳಿಗ್ಗೆ 10:30ರ ಸುಮಾರಿಗೆ 23ನೇ ವಾರ್ಡ್‌ನ ಅಶ್ವಿನಿಪಲ್ಲಿಯ ಮೊಲ್ಲಾಪರದಲ್ಲಿ ನಡೆದಿದೆ. ಇಲ್ಲಿ ವ್ಯಕ್ತಿಯೊಬ್ಬರಿಗೆ ಮಕ್ಕಳ ಕಳ್ಳ ಎಂಬ ಶಂಕೆಯ ಮೇರೆಗೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಎರಡನೇ ಘಟನೆ ವಾರ್ಡ್‌ ಸಂಖ್ಯೆ 29 ಸೆಂಟ್ರಲ್ ಮೋಡರ್ನ್‌ ಶಾಲೆಯ ಎದುರುಗಡೆ ನಡೆದಿದೆ. ಪೋಷಕರು ತಮ್ಮ ಮಕ್ಕಳನ್ನು ಕರೆದೊಯ್ಯಲು ಶಾಲೆಯ ಬಳಿಗೆ ಬಂದಾಗ ಮಹಿಳೆ ಮತ್ತು ಪುರುಷನನ್ನು ಮಕ್ಕಳ ಕಳ್ಳರು ಎಂದು ಶಂಕಿಸಿ ಹಲ್ಲೆ ನಡೆಸಿದ್ದಾರೆ. ವೈರಲ್ ಆಗಿರುವ ಮಹಿಳೆಗೆ ಥಳಿಸಿರುವ ವಿಡಿಯೋ ಎರಡನೇ ಘಟನೆಯದ್ದು ಎಂದು ಎಸ್‌ಪಿ ಪ್ರತೀಕ್ಷಾ ಜರ್ಖಾರಿಯಾ ತಿಳಿಸಿದ್ದಾಗಿ ಬೂಮ್ ವಿವರಿಸಿದೆ.

ಮೆಹರಬಾನು ಬಿಬಿ ಅಲಿಯಾಸ್ ನೆಹ್ರಾ ಬಾನು ಎಂಬ ಅಮಾಯಕ ಮಹಿಳೆಗೆ ಸ್ಥಳೀಯರು ಗುಂಪು ಹಲ್ಲೆ ನಡೆಸಿದ್ದು, ಪೊಲೀಸರು ಆಕೆಯನ್ನು ರಕ್ಷಿಸಲು ಪ್ರಯ್ನಿಸಿದರೂ ಸಾಧ್ಯವಾಗಿಲ್ಲ. ಇವಿಷ್ಟು ಅಲ್ಲದೆ ಈ ಘಟನೆಯಲ್ಲಿ ಯಾವುದೇ ಕೋಮು ವಿಷಯಗಳು ಇಲ್ಲ ಎಂದು ಎಸ್ಪಿ ಹೇಳಿರುವುದಾಗಿ ಬೂಮ್ ತಿಳಿಸಿದೆ.

ಒಟ್ಟಿನಲ್ಲಿ ಮುಸ್ಲಿಮರು ಹಿಂದೂ ಹುಡುಗಿಗೆ ಥಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದ ಸುದ್ದಿಯು ಸುಳ್ಳಾಗಿದ್ದು, ಕೋಮು ವೈಷಮ್ಯ ಹರಡುವ ಉದ್ದೇಶ ಹೊಂದಿದೆ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಮುಸ್ಲಿಂ ಪ್ರೇಮಿಯಿಂದ ಹಿಂದೂ ಯುವತಿಯ ಅತ್ಯಾಚಾರ, ಕೊಲೆ ಎಂದು ಸಂಬಂಧವಿಲ್ಲದ ಫೋಟೋ ಹಂಚಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...