Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಅಂಗಡಿಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

FACT CHECK : ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಅಂಗಡಿಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಅಂಗಡಿಯೊಂದು ಹೊತ್ತಿ ಉರಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವಿಡಿಯೋ ಹಂಚಿಕೊಂಡಿರುವ ಅನೇಕರು “ಬಾಂಗ್ಲಾದೇಶದಲ್ಲಿ ಹಿಂದೂ ಕುಟುಂಬದ ಅಂಗಡಿಯನ್ನು ಸುಟ್ಟು ಹಾಕಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಕೋಮುದ್ವೇಷ ಪೂರಿತ ಮತ್ತು ಸುಳ್ಳು ಸುದ್ದಿಗಳನ್ನು ಹಂಚಿಕೊಳ್ಳುವ ‘ಸುದರ್ಶನ್‌ ನ್ಯೂಸ್‘ ತನ್ನ ಎಕ್ಸ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿ. ಲಕ್ಷ್ಮೀಪುರದಲ್ಲಿ ಹಿಂದೂ ವ್ಯಕ್ತಿ ರಾಜನ್ ಚಂದ್ರ ಅವರ ಅಂಗಡಿ ಸುಟ್ಟು ಬೂದಿಯಾಗಿದೆ. ರಾಜನ್ ಚಂದ್ರ ಮತ್ತು ಅವರ ಕುಟುಂಬದವರು ನೋವು ತೋಡಿಕೊಂಡಿದ್ದಾರೆ. ಅವರ ಏಕೈಕ ಜೀವನೋಪಾಯದ ಮೂಲವಾದ ಅಂಗಡಿ ಸುಟ್ಟು ಹೋಗಿದೆ” ಎಂದು ಬರೆದುಕೊಂಡಿದೆ.

ಇನ್ನೂ ಅನೇಕರು ಇದೇ ರೀತಿಯ ಬರಹಗಳೊಂದಿಗೆ ವಿಡಿಯೋ ಹಂಚಿಕೊಂಡಿದ್ದಾರೆ. ಹಾಗಾದರೆ, ಈ ವಿಡಿಯೋ ಬಾಂಗ್ಲಾದಲ್ಲಿ ಹಿಂದೂ ವ್ಯಕ್ತಿಯ ಅಂಗಡಿ ಸುಟ್ಟು ಹಾಕಿದ್ದಕ್ಕೆ ಸಂಬಂಧಿಸಿದ್ದಾ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ವಿಡಿಯೋ ಸ್ಕ್ರೀನ್ ಶಾಟ್‌ ಅನ್ನು ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ bd-bulletin.com ಎಂಬ ಸುದ್ದಿವೆಬ್‌ಸೈಟ್‌ನಲ್ಲಿ ವಿಡಿಯೋ ಸಂಬಂಧಿತ ವರದಿ ಪ್ರಕಟಿಸಿರುವುದು ಕಂಡು ಬಂದಿದೆ.

ವರದಿಯಲ್ಲಿ ಹೇಳಿದಂತೆ, ಬಾಂಗ್ಲಾದೇಶದ ಲಕ್ಷ್ಮೀಪುರದ ಮಜುಚೌಧುರಿಹತ್‌ನ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಸುಮಾರು 15 ಅಂಗಡಿಗಳು ಸುಟ್ಟು ಹೋದ ವಿಡಿಯೋ ಇದಾಗಿದೆ.

ಜನರು ಫಜ್ರ್ ನಮಾಝ್ (ಬೆಳಗ್ಗಿನ ಪ್ರಾರ್ಥನೆ) ಮುಗಿಸಿ ಹೊರ ಬರುತ್ತಿದ್ದಾಗ ಮಜುಚೌಧುರಿಹತ್‌ ಮಾರುಕಟ್ಟೆಯ ದಕ್ಷಿಣ ಭಾಗದಲ್ಲಿ ಬೆಂಕಿ ಅನಾಹುತ ಸಂಭವಿಸಿ ಅಂಗಡಿಗಳು ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ. ತಕ್ಷಣ ಅವರು ಅಗ್ನಿಶಾಮದಳಕ್ಕೆ ಕರೆ ಮಾಡಿದ್ದಾರೆ. ಆದರೆ, ಅದು ಒಂದು ಗಂಟೆ ತಡವಾಗಿ ಆಗಮಿಸಿದ್ದರಿಂದ ಹೆಚ್ಚಿನ ಹಾನಿ ಸಂಭವಿಸಿದೆ. ಅಗ್ನಿ ಅನಾಹುತಕ್ಕೆ ಕಾರಣ ಏನೆಂದು ತನಿಖೆ ನಡೆಯುತ್ತಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

songbadprokash.com ಎಂಬ ಮತ್ತೊಂದು ಬಾಂಗ್ಲಾದೇಶದ ಸುದ್ದಿ ವೆಬ್‌ಸೈಟ್‌ನಲ್ಲೂ ಜುಲೈ 11, 2024ರಂದು ಈ ಘಟನೆಯ ಕುರಿತು ವರದಿ ಪ್ರಕಟಗೊಂಡಿದೆ. ಈ ವರದಿಯಲ್ಲೂ “ಲಕ್ಷ್ಮೀಪುರದ ಮಜುಚೌಧುರಿಹತ್‌ನ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಅಂಗಡಿಗಳು ಸುಟ್ಟು ಹೋಗಿವೆ. ಇದರಿಂದ ಕೋಟ್ಯಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.

ನಮಗೆ ಲಭ್ಯವಾದ ಎರಡೂ ಮಾಧ್ಯಮ ವರದಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋ ಅಂಗಡಿಗಳು ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವುದಕ್ಕೆ ಸಂಬಂಧಿಸಿದ್ದು ಎಂದು ಹೇಳಿದೆ. ಹಾಗಾಗಿ, ಬಾಂಗ್ಲಾದೇಶದಲ್ಲಿ ಹಿಂದೂ ವ್ಯಕ್ತಿಯ ಅಂಗಡಿಗೆ ಬೆಂಕಿ ಹಚ್ಚಲಾಗಿದೆ ಎಂಬ ಸುದ್ದಿ ಸುಳ್ಳು.

ಇದನ್ನೂ ಓದಿ : FACT CHECK : ಮಾಲ್ಡೀವ್ಸ್ ತನ್ನ 28 ದ್ವೀಪಗಳನ್ನು ಭಾರತಕ್ಕೆ ಬಿಟ್ಟು ಕೊಟ್ಟಿರುವುದು ನಿಜಾನಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...