Homeಫ್ಯಾಕ್ಟ್‌ಚೆಕ್FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

FACT CHECK : ಕೇರಳದ ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಕೇರಳದಲ್ಲಿ ಮುಸ್ಲಿಂ ಮಹಿಳೆಯೊಬ್ಬರು ತನ್ನ ಮಗನನ್ನೇ ಮದುವೆಯಾಗಿದ್ದಾರೆ ಎಂದು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗ್ತಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

“ಝೀನತ್ ಜಹಾನ್ ಎಂಬ ಕೇರಳದ ಮುಸ್ಲಿಂ ಮಹಿಳೆಯ ಪತಿ ನಿಧನರಾಗಿದ್ದು, ಆಕೆಗೆ ಮೂವರು ಮಕ್ಕಳಿದ್ದಾರೆ. ಮಹಿಳೆ ತನ್ನ ಹಿರಿಯ ಮಗನನ್ನೇ ತನ್ನ ಮನೆಯಲ್ಲೇ ಮದುವೆಯಾಗಿದ್ದಾಳೆ” ಎಂದು ಬರೆದುಕೊಂಡು ಅನೇಕರು ವಿಡಿಯೋ ಪೋಸ್ಟ್ ಮಾಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

ವಿಡಿಯೋದಲ್ಲಿ ಮಹಿಳೆಯೊಬ್ಬರು ಮುಸ್ಲಿಮರ ಧಾರ್ಮಿಕ ಟೋಪಿ ಧರಿಸಿದ ಹುಡುಗನಿಗೆ ಹೂವಿನ ಹಾರ ಹಾಕಿ ಆಲಂಗಿಸುವುದು ನೋಡಬಹುದು.

ಫ್ಯಾಕ್ಟ್‌ ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಈ ಕುರಿತು ಮಾಹಿತಿ ಹುಡುಕಿದಾಗ ಜೂನ್ 23, 2024ರಂದು ಆಲ್ಟ್‌ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಈ ಕುರಿತು ಸ್ಪಷ್ಟನೆ ನೀಡಿರುವುದು ಕಂಡು ಬಂದಿದೆ.

ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸ್ಕ್ರೀನ್ ಶಾಟ್ ಹಂಚಿಕೊಂಡಿರುವ ಝುಬೈರ್ “ಕುರಾನ್ ಅಧ್ಯಯನ ಮುಗಿಸಿ ಬಂದ ಮಗನನ್ನು ತಾಯಿ ಅಭಿನಂದಿಸುತ್ತಿರುವ ವಿಡಿಯೋವನ್ನು ಮುಸ್ಲಿಂ ಮಹಿಳೆ ಮಗನನ್ನೇ ಮದುವೆಯಾಗಿದ್ದಾರೆ ಎಂದು ಸುಳ್ಳು ಮಾಹಿತಿಯೊಂದಿಗೆ ಹಂಚಿಕೊಳ್ಳಲಾಗ್ತಿದೆ. ಮುಖ್ಯವಾಗಿ @swetasamadhiya ಎಂಬ ಎಕ್ಸ್‌ ಖಾತೆಯಿಂದ ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಈ ಖಾತೆಯನ್ನು ಪ್ರಧಾನಿ ಮೋದಿ ಕೂಡ ಫಾಲೋ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಜೂನ್ 24ರಂದು ವಿಡಿಯೋ ಕುರಿತು ಎಕ್ಸ್‌ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದ ಕಾಂಗ್ರೆಸ್ ನಾಯಕಿ ಸುಪ್ರಿಯಾ ಶ್ರೀನಾಟೆ ” ಬಿಜೆಪಿ ಬೆಂಬಲಿಗರು ಹಿಂದೂ-ಮುಸ್ಲಿಂ ನಡುವೆ ವಿಷ ಬೀಜ ಬಿತ್ತುವ ಮೂಲಕ ಅಸಹ್ಯ ಕೆಲಸ ಮಾಡುತ್ತಿದ್ದಾರೆ. ಕುರಾನ್ ಅಧ್ಯಯನ ಪೂರ್ತಿಗೊಳಿಸಿದ ಮಗನನ್ನು ತಾಯಿ ಪ್ರೀತಿಯಿಂದ ತಬ್ಬಿಕೊಂಡ ವಿಡಿಯೋವನ್ನು ಬಿಜೆಪಿಯ ಕೊಳಕು ಬೆಂಬಲಿಗರು ತಾಯಿ ಮಗನ್ನೇ ಮದುವೆಯಾಗಿದ್ದಾರೆ ಎಂದು ಹೇಳುತ್ತಿದ್ದಾರೆ. ಇಂತಹ ಕೊಳೆಕು ಜನರು, ಈ ರಾಕ್ಷಸರು ಸಮಾಜದಲ್ಲಿ ಬದುಕಲು ಯೋಗ್ಯರಲ್ಲ” ಎಂದು ಖಾರವಾಗಿ ಹೇಳಿದ್ದರು.

ನಾವು ಗಮನಿಸಿದಂತೆ ಕೇರಳದಲ್ಲಿ ತಾಯಿ ಮಗನನ್ನು ಮದುವೆಯಾದ ಬಗ್ಗೆ ಇತ್ತೀಚೆಗೆ ಎಲ್ಲೂ ಸುದ್ದಿಯಾಗಿಲ್ಲ. ವಿಶೇಷವಾಗಿ ಮಹಿಳೆಯ ಹೆಸರನ್ನು ಝೀನತ್ ಜಹಾನ್ ಎಂದು ಹೇಳಲಾಗಿದೆ. ಕೇರಳದಲ್ಲಿ ಮುಸ್ಲಿಂ ಮಹಿಳೆಯರ ಹೆಸರಿನ ಮುಂದೆ ಜಹಾನ್, ಬೇಗಂ ಎಂಬ ಸರ್‌ ನೇಮ್ ಬಳಸುವುದಿಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣಗಳ ಪೋಸ್ಟ್‌ಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿರುವುದನ್ನು ಖಚಿತಪಡಿಸಬಹುದು.

ಇದನ್ನೂ ಓದಿ : FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿರುವ ಇನ್ನೂ 17 ಭಾರತದ ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...