Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

FACT CHECK : ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆಗೈದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಜನನಿಬಿಡ ರಸ್ತೆಯ ಮಧ್ಯದಲ್ಲಿ ಯುವತಿಯ ಶವದ ಬಳಿ ಯುವಕನೊಬ್ಬ ನಿಂತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು, ಸಲೀಂ ಎಂಬ ಮುಸ್ಲಿಂ ಯುವಕ ಆರತಿ ಎಂಬ ಹಿಂದೂ ಹುಡುಗಿಯನ್ನು ಕೊಲೆ ಮಾಡಿದ್ದಾನೆ ಎಂದು ಬರೆದುಕೊಂಡಿದ್ದಾರೆ.

ಒಟ್ಟು 24 ಸೆಕೆಂಡ್‌ನ ವಿಡಿಯೋದಲ್ಲಿ ಯುವಕ ತನ್ನ ಎಡೆಗೈಯಲ್ಲಿ ಸ್ಪ್ಯಾನರ್ ಹಿಡಿದು ನಿಂತಿದ್ದರೆ, ಯುವತಿಯ ಶವ ರಸ್ತೆ ಮಧ್ಯ ಇದೆ. ಸುತ್ತಲು ಹಲವಾರು ಜನರು ಸುಮ್ಮನೆ ನಿಂತು ನೋಡುವ ದೃಶ್ಯವಿದೆ.

ವಿಡಿಯೋ ಹಂಚಿಕೊಂಡಿರುವ ಅನೇಕರು ” ಸಲೀಂ ಆರತಿಗೆ ಪ್ರೇಮ ನಿವೇದನೆ (ಪ್ರಪೋಸ್) ಮಾಡಿದ್ದ. ಆದರೆ, ಆರತಿ ಅದನ್ನು ತಿರಸ್ಕರಿಸಿದ್ದಳು.ಈ ಕಾರಣಕ್ಕೆ ಸಲೀಂ ಆರತಿಯನ್ನು ನಡು ರಸ್ತೆಯಲ್ಲಿ ಹತ್ಯೆ ಮಾಡಿ ಶವದ ಪಕ್ಕದಲ್ಲೇ ನಿಂತಿದ್ದಾನೆ. ಆತನಿಗೆ ಏನೂ ಹೇಳಲು ಯಾರಿಗೂ ಧೈರ್ಯವಿಲ್ಲ” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಯುವತಿಯನ್ನು ಯುವಕನೋರ್ವ ಹತ್ಯೆ ಮಾಡಿರುವುದು ಹೌದು. ಆದರೆ, ಮುಸ್ಲಿಂ ಯುವಕ ಹಿಂದೂ ಯುವತಿಯನ್ನು ಹತ್ಯೆ ಮಾಡಿದ್ದಾನೆ ಎಂಬ ಪ್ರತಿಪಾದನೆ ಸುಳ್ಳು ಎಂದು ತಿಳಿದು ಬಂದಿದೆ.

ಜೂನ್ 18, 2024ರಂದು ಬೆಳಿಗ್ಗೆ 8:30ರ ಸುಮಾರಿಗೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಪೂರ್ವ ವಾಸಿ ಪ್ರದೇಶದ ಚಿಂಚ್‌ಪಾಡದಲ್ಲಿ ಯುವತಿಯ ಹತ್ಯೆ ಘಟನೆ ನಡೆದಿದೆ. ಆರೋಪಿ 29 ವರ್ಷದ ರೋಹಿತ್ ಯಾದವ್ ಮತ್ತು ಮೃತ ಯುವತಿ 22 ವರ್ಷದ ಆರತಿ ಯಾದವ್ ಎಂದು ತಿಳಿದು ಬಂದಿದೆ.

ದಿ ಇಂಡಿಯನ್ ಎಕ್ಸ್‌ ಪ್ರೆಸ್ ವರದಿಯ ಪ್ರಕಾರ, “ಮೃತ ಯುವತಿ ಆರತಿ ಆರೋಪಿ ರೋಹಿತ್‌ನ ಮಾಜಿ ಪ್ರೇಯಸಿಯಾಗಿದ್ದು, ಆಕೆ ಇತ್ತೀಚೆಗೆ ಇನ್ನೊಬ್ಬ ಯುವಕನ ಜೊತೆ ಸುತ್ತಾಡುತ್ತಿದ್ದಳು. ಅದನ್ನು ನೋಡಿ ಕುಪಿತಗೊಂಡ ರೋಹಿತ್ ಯಾದವ್ ಹಾಡಹಗಲೇ ರಸ್ತೆ ಮಧ್ಯೆ ಸ್ಫ್ಯಾನರ್‌ನಿಂದ ತಲೆಗೆ ಹೊಡೆದು ಆರತಿಯನ್ನು ಹತ್ಯೆ ಮಾಡಿದ್ದಾನೆ”.

ಹಿಂದುಸ್ತಾನ್ ಟೈಮ್ಸ್‌ ವರದಿಯ ಪ್ರಕಾರ, “ಆರತಿಯನ್ನು ಹಿಂಬಾಲಿಸಿಕೊಂಡು ಬಂದ ರೋಹಿತ್, ರಸ್ತೆ ಮಧ್ಯೆ ಹಿಂಬದಿಯಿಂದ ಆಕೆಯ ತಲೆಗೆ ಸ್ಪ್ಯಾನರ್ ಮೂಲಕ ಹೊಡೆದಿದ್ದಾನೆ. ಆಕೆ ನೆಲಕ್ಕೆ ಬಿದ್ದಾಗ ಆಕೆಯ ತಲೆಗೆ ಹೊಡೆಯುವುದನ್ನು ಮುಂದುವರೆಸಿದ್ದಾನೆ. ಸ್ವಲ್ಪ ಹೊತ್ತಿನಲ್ಲೇ ರಕ್ತದ ಮಡುವಿನಲ್ಲಿ ಆರತಿ ಪ್ರಾಣ ಬಿಟ್ಟಿದ್ದಾಳೆ. ಸುತ್ತಮುತ್ತಲಿದ್ದ ಜನ ಈ ಕೃತ್ಯವನ್ನು ಸುಮ್ಮನೆ ನಿಂತು ನೋಡಿದ್ದಾರೆ”.

“ಪೊಲೀಸರ ಪ್ರಕಾರ, ರೋಹಿತ್ ಮತ್ತು ಆರತಿ ಇಬ್ಬರೂ ನಲಸೊಪರ ಮೂಲದವರು. ಇಬ್ಬರು ಸುಮಾರು 6 ವರ್ಷಗಳ ಕಾಲ ಸಂಪರ್ಕದಲ್ಲಿದ್ದರು. ಪೂರ್ವ ವಾಸಿಯ ಫ್ಯಾಕ್ಟರಿಯೊಂದರಲ್ಲಿ ಆರತಿ ಕೆಲಸ ಮಾಡುತ್ತಿದ್ದಳು. ನಿರೋದ್ಯೋಗಿಯಾಗಿದ್ದ ರೋಹಿತ್, ಇತ್ತೀಚೆಗೆ ಆರತಿ ಪುರುಷ ಸಹೋದ್ಯೋಗಿಗಳ ಜೊತೆ ಸುತ್ತಾಡುವುದನ್ನು ನೋಡಿ ಕುಪಿತಗೊಂಡಿದ್ದ. ಇದು ಇಬ್ಬರ ನಡುವೆ ಗಲಾಟೆಗೆ ಕಾರಣವಾಗಿತ್ತು. ಇದೇ ಕೋಪದಲ್ಲಿ ಆತ ಆರತಿಯನ್ನು ಹತ್ಯೆ ಮಾಡಿದ್ದಾನೆ”.

ನಾವು ನಡೆಸಿದ ಪರಿಶೀಲನೆಯಲ್ಲಿ ಆರತಿ ಎಂಬ ಯುವತಿಯನ್ನು ಹತ್ಯೆ ಮಾಡಿದವನ ಹೆಸರು ರೋಹಿತ್ ಯಾದವ್, ಸಲೀಂ ಅಲ್ಲ ಎಂದು ತಿಳಿದು ಬಂದಿದೆ. ಆರೋಪಿ ಮುಸ್ಲಿಂ ಎಂದು ಬಿಂಬಿಸಿ ಘಟನೆಗೆ ಕೋಮು ಬಣ್ಣ ಹಚ್ಚುವ ಪ್ರಯತ್ನ ನಡೆದಿರುವ ಹಿನ್ನೆಲೆ ನಾವು ಸತ್ಯಾಸತ್ಯತೆ ತೆರೆದಿಟ್ಟಿದ್ದೇವೆ. ಅಲ್ಲದೆ, ಕೊಲೆ ಪ್ರಕರಣದಲ್ಲಿ ಕೋಮು ಹುಡುಕುವ ಪ್ರಯತ್ನ ಇದಲ್ಲ.

ಇದನ್ನೂ ಓದಿ : FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...