Homeಫ್ಯಾಕ್ಟ್‌ಚೆಕ್FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

FACT CHECK : ಪ. ಬಂಗಾಳದಲ್ಲಿ ಮುಸ್ಲಿಂ ಯುವಕ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂಬುವುದು ಸುಳ್ಳು

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಹಾಡಹಗಲೇ ಮುಸ್ಲಿಂ ಯುವಕನೋರ್ವ ಹಿಂದೂ ಬಾಲಕಿಗೆ ಇರಿದಿದ್ದಾನೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ನಾಝಿಯಾ ಇಲಾಹಿ ಖಾನ್ (@naziaelahikhan) ಎಂಬ ಇನ್‌ಸ್ಟಾಗ್ರಾಂ ಬಳಕೆದಾರರೊಬ್ಬರು ವಿಡಿಯೋ ಹಂಚಿಕೊಂಡು “ಮುಸ್ಲಿಂ ಯುವಕ ಹಿಂದೂ ಯುವತಿಗೆ ಹಾಡಹಗಲೇ ಹೇಗೆ ಇರಿದಿದ್ದಾನೆ ಒಮ್ಮೆ ನೋಡಿ. ಮಮತಾ ರಾಜ್‌ನಲ್ಲಿ ಹಿಂದೂಗಳು ಸುರಕ್ಷಿತರಲ್ಲ. ಪಶ್ಚಿಮ ಬಂಗಾಳದ ಈ ಆಘಾತಕಾರಿ ಪರಿಸ್ಥಿತಿ ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ರಾಜ್ಯಗಳಿಗೆ ಹರಡಲಿದೆ. ಟಿಎಂಸಿ ಮತ ಪಡೆಯುವ ಸಲುವಾಗಿ ಬಾಂಗ್ಲಾದೇಶ, ಮ್ಯಾನ್ಮಾರ್‌ನಿಂದ ಬರುವ ಮುಸ್ಲಿಮರಿಗೆ ಹಣ ಪಡೆದು ಆಧಾರ್ ಕಾರ್ಡ್, ವೋಟರ್ ಐಡಿ, ರೇಷನ್ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲೆಗಳನ್ನು ಕೊಡುತ್ತಿದೆ. ಇದು ಯಾವ ಸಂದರ್ಭದಲ್ಲಾದರೂ ನನಗೂ ಸಂಭವಿಸಬಹುದು. ಮಮತಾ ಬ್ಯಾನರ್ಜಿಯವರೇ, ಕೋಲ್ಕತ್ತಾ ಪೊಲೀಸರೇ ದಯವಿಟ್ಟು ಸರಿಯಾದ ಕ್ರಮ ಕೈಗೊಳ್ಳಿ. ಪಶ್ಚಿಮ ಬಂಗಾಳ ಇಸ್ಲಾಮಿಕ್ ರಾಜ್ಯವಲ್ಲ. ಕೋಲ್ಕತ್ತಾ ಪೊಲೀಸರೇ ದಯವಿಟ್ಟು ಅರ್ಥ ಮಾಡಿಕೊಳ್ಳಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಇನ್‌ಸ್ಟಾಗ್ರಾಂ ಮತ್ತು ಎಕ್ಸ್‌ ಖಾತೆಗಳಲ್ಲೂ ವಿಡಿಯೋ ಹಂಚಿಕೊಂಡು ಇದೇ ರೀತಿಯ ಪ್ರತಿಪಾದನೆ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹಾಕಿ ಪರಿಶೀಲಿಸಿದ್ದೇವೆ. ಈ ವೇಳೆ ಸೆಪ್ಟೆಂಬರ್ 5, 2024ರಂದು ಟೈಮ್ಸ್ ಆಫ್ ಇಂಡಿಯಾ ವಿಡಿಯೋ ಕುರಿತು ವರದಿ ಪ್ರಕಟಿಸಿರುವುದು ಕಂಡು ಬಂದಿದೆ.

ವರದಿಯಲ್ಲಿ “ಪಶ್ಚಿಮ ಬಂಗಾಳದ ಬೆಲ್ಘರಿಯಾದ ಪ್ರಫುಲ್ಲಾ ನಗರದ ಅಭಿಜಿತ್ ದತ್ತಾ ಎಂಬ ಯುವಕ 14 ವರ್ಷದ ಶಾಲಾ ಬಾಲಕಿಗೆ ರಸ್ತೆ ಮಧ್ಯೆ ಸುಮಾರು ಮೂರು ಬಾರಿ ಹರಿತವಾದ ಆಯುಧದಿಂದ ಇರಿದಿದ್ದಾನೆ ಎಂದು ಹೇಳಲಾಗಿದೆ.

ಅಭಿಜಿತ್ ದತ್ತಾ ಬಾಲಕಿಗೆ ಪ್ರೇಮ ನಿವೇದನೆ ಮಾಡಿದ್ದ. ಆಕೆ ತಿರಸ್ಕರಿಸಿದ್ದಳು. ಸೆಪ್ಟೆಂಬರ್ 4,2024ರಂದು ಬಾಲಕಿ ಶಾಲೆಯಿಂದ ಮನೆಗೆ ಹಿಂದಿರುಗುವಾಗ ಅಭಿಜಿತ್ ಮತ್ತೊಮ್ಮೆ ಪ್ರೇಮ ನಿವೇದನೆ ಮಾಡಿದ್ದಾನೆ. ಆಗಲೂ ಬಾಲಕಿ ತಿರಸ್ಕರಿಸಿದ್ದಾಳೆ. ಆಗ ಆತ ಬಾಲಕಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ. ಈ ವೇಳೆ ಬಾಲಕಿ ಆತನಿಗೆ ಕಪಾಳಮೋಕ್ಷ ಮಾಡಿದ್ದಾಳೆ. ಇದರಿಂದ ಕುಪಿತಗೊಂಡ ಅಭಿಜಿತ್ ದತ್ತಾ ಬಾಲಕಿಗೆ ಇರಿದಿದ್ದಾನೆ ಎಂದು ವರದಿ ವಿವರಿಸಿದೆ.

ಬಾಲಕಿಗೆ ಇರಿಯುತ್ತಿದ್ದಂತೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ. ಇದರಿಂದ ಆತ ಪ್ರಜ್ಞಾಹೀನನಾಗಿ ಬಿದ್ದಿದ್ದ. ಸ್ಥಳಕ್ಕೆ ಆಗಮಿಸಿದ ಬೆಲ್ಘರಿಯಾ ಠಾಣೆಯ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕಿಯ ಮನೆಯವರ ದೂರಿನ ಅನ್ವಯ ಆತನ ವಿರುದ್ದ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬೆಲ್ಘರಿಯಾ ಪೊಲೀಸ್‌ ಅಧಿಕಾರಿ ಸುಭ್ರಜಿತ್ ಮಜುಂದರ್ ಅವರಲ್ಲಿ ಈ ಕುರಿತು ಮಾತನಾಡಿದಾಗ “ಘಟನೆಯ ಹಿಂದೆ ಯಾವುದೇ ಕೋಮು ಆಯಾಮಗಳಿಲ್ಲ. ಆರೋಪಿ ಮತ್ತು ಸಂತ್ರಸ್ತೆ ಇಬ್ಬರೂ ಒಂದೇ ಸಮುದಾಯದವರು ಎಂಬುದಾಗಿ ಹೇಳಿದ್ದಾರೆ ಎಂದು ಕನ್ನಡ ಫ್ಯಾಕ್ಟ್‌ ಚೆಕ್‌.ಕಾಂ ವರದಿ ಮಾಡಿದೆ.

ಇದನ್ನೂ ಓದಿ : FACT CHECK : ಆಂಧ್ರ ಪ್ರದೇಶದ ಹಳೆಯ ವಿಡಿಯೋವನ್ನು ಮಣಿಪುರದ್ದು ಎಂದು ಹಂಚಿಕೊಳ್ಳಲಾಗುತ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...