HomeದಿಟನಾಗರFact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

Fact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

- Advertisement -
- Advertisement -

‘ಈ ಬಾರಿಯ ಲೋಕಸಭೆ ಚುನಾವಣೆ ಎಲೆಕ್ಟ್ರಾನಿಕ್ ವೋಟಿಂಗ್ ಮೆಶಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗ (ಇಸಿಐ) ಈ ಸಂಬಂಧ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ’ ಎಂಬ ಸುದ್ದಿಯ ಪತ್ರಿಕಾ ಪ್ರತಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ವರದಿಯಲ್ಲಿ ಚುನಾವಣಾ ಆಯೋಗ ಕೈಗೊಂಡಿದೆ ಎನ್ನಲಾದ ಹೊಸ ನಿರ್ಧಾರದ ಕುರಿತು ಕೆಲವರ ಅಭಿಪ್ರಾಯವನ್ನೂ ಪ್ರಕಟಿಸಲಾಗಿದೆ. ಅನೇಕ ಸಾಮಾಜಿಕ ಬಳಕೆದಾರರು ಪತ್ರಿಕೆಯ ಪ್ರತಿಯನ್ನು ತಮ್ಮ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಇತ್ತೀಚೆಗೆ, ಭಾರತೀಯ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಸಂಪೂರ್ಣ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ವೇಳೆ ಚುನಾವಣಾ ಆಯೋಗ ಬ್ಯಾಲೆಟ್ ಪೇಪರ್‌ನಲ್ಲಿ ಮತದಾನ ನಡೆಸುವ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ.

ಪತ್ರಿಕಾ ವರದಿಯ ಪ್ರತಿ ವೈರಲ್ ಆಗುತ್ತಿದ್ದಂತೆ ಭಾರತೀಯ ಚುನಾವಣಾ ಆಯೋಗ ಈ ಕುರಿತು ಸ್ಪಷ್ಟನೆ ನೀಡಿದ್ದು, “ಬ್ಯಾಲೆಟ್ ಪೇಪರ್ ಮೂಲಕ 2024ರ ಲೋಕಸಭೆ ಚುನಾವಣೆ ನಡೆಸಲು ಚುನಾವಣಾ ಆಯೋಗ ನಿರ್ದೇಶನ ನೀಡಿದೆ ಎಂದು ಛತ್ತೀಸ್‌ಗಢದ ಸ್ಥಳೀಯ ಪತ್ರಿಕೆಯಲ್ಲಿ ವರದಿ ಪ್ರಕಟಿಸಲಾಗಿದೆ. ಇದ ಸಂಪೂರ್ಣವಾಗಿ ಸುಳ್ಳು ಮತ್ತು ಆಧಾರರಹಿತವಾಗಿದೆ. ಅಂತಹ ಯಾವುದೇ ನಿರ್ದೇಶನಗಳನ್ನು ನೀಡಲಾಗಿಲ್ಲ” ಎಂದು ಎಕ್ಸ್‌ನಲ್ಲಿ ತಿಳಿಸಿದೆ.

ಭಾರತದ ಸಂವಿಧಾನದ 324 ನೇ ವಿಧಿಯ ಪ್ರಕಾರ, ಭಾರತದ ಚುನಾವಣಾ ಆಯೋಗವು ದೇಶದಲ್ಲಿ ಚುನಾವಣೆಗಳನ್ನು ಮೇಲ್ವಿಚಾರಣೆ, ನಿರ್ದೇಶನ ಮತ್ತು ನಿಯಂತ್ರಣ ಮಾಡುವ ಅಧಿಕಾರವನ್ನು ಹೊಂದಿದೆ. ಹೆಚ್ಚುವರಿಯಾಗಿ, 1988ರಲ್ಲಿ, ಸಂಸತ್ತು ಜನರ ಪ್ರಾತಿನಿಧ್ಯ ಕಾಯ್ದೆ 1951ಕ್ಕೆ ತಿದ್ದುಪಡಿ ತಂದು ಸೆಕ್ಷನ್ 61ಎ ಅನ್ನು ಪರಿಚಯಿಸಿದೆ. ಇದು ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಬಳಸಿಕೊಳ್ಳಲು ಚುನಾವಣಾ ಆಯೋಗಕ್ಕೆ ಅಧಿಕಾರ ನೀಡುತ್ತದೆ.

ಇತ್ತೀಚೆಗಷ್ಟೇ ಬಿಡುಗಡೆಯಾದ ಅಧಿಕೃತ ವೇಳಾಪಟ್ಟಿಯಲ್ಲಿಯೂ ಇವಿಎಂಗಳನ್ನು ಬಳಸಿ ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದೆ. ವೈರಲ್ ಸುದ್ದಿಯಲ್ಲಿರುವಂತೆ ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆ ನಡೆಸುವ ನಿರ್ಧಾರ ಮಾತ್ರವಲ್ಲ, ಒಲವನ್ನು ಕೂಡ ಚುನಾವಣಾ ಆಯೋಗ ವ್ಯಕ್ತಪಡಿಸಿಲ್ಲ.

ದೇಶದ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್‌ಗಳ ಬಳಕೆ ಮಾಡುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ವಜಾಗೊಳಿಸಿದೆ ಎಂಬುವುದು ಇಲ್ಲಿ ಗಮನಾರ್ಹ ಸಂಗತಿ. ನ್ಯಾಯಾಲಯ ಇವಿಎಂಗಳ ವಿಶ್ವಾಸಾರ್ಹತೆಯ ಬಗ್ಗೆ ಖಚಿತತೆ ವ್ಯಕ್ತಪಡಿಸಿದೆ. ಈ ಹಿಂದೆ, ಸುಪ್ರೀಂ ಕೋರ್ಟ್ ಮತ್ತು ಹಲವು ರಾಜ್ಯಗಳ ಹೈಕೋರ್ಟ್‌ಗಳು ಕೂಡ ಇದೇ ರೀತಿಯ ಮನವಿಗಳನ್ನು ಅನೇಕ ಸಂದರ್ಭಗಳಲ್ಲಿ ತಿರಸ್ಕರಿಸಿವೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ಚುನಾವಣಾ ಆಯೋಗವು ಬ್ಯಾಲೆಟ್ ಪೇಪರ್‌ಗಳನ್ನು ಬಳಸಿಕೊಂಡು ಚುನಾವಣೆಗಳನ್ನು ನಡೆಸುವ ವಿಚಾರವನ್ನು ತಳ್ಳಿಹಾಕಿದೆ. ಕೆಲ ಯೂಟ್ಯೂಬ್ ಚಾನೆಲ್‌ಗಳು ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್‌ಗಳನ್ನು ಬಳಸಲಾಗುತ್ತದೆ ಎಂದು  ಈ ಹಿಂದೆ ತಪ್ಪು ಮಾಹಿತಿ ಪ್ರಸಾರ ಮಾಡಿದ್ದಾಗ, ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಅದನ್ನು ಸುಳ್ಳು ಎಂದು ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ : Fact Check: ಸಚಿವೆ ನಿರ್ಮಲಾ ಸೀತಾರಾಮನ್ ಬಳಿ ಚುನಾವಣೆ ಎದುರಿಸುವಷ್ಟು ಹಣ ಇಲ್ವಾ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿಯಿಂದ ಸಹಿ ಅಭಿಯಾನ

0
ದೆಹಲಿ ಮುಖ್ಯಮಂತ್ರಿ, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಬಂಧನದ ವಿರುದ್ಧ ಆಮ್ ಆದ್ಮಿ ಪಕ್ಷ ಗುರುವಾರ ಸಹಿ ಅಭಿಯಾನವನ್ನು ಪ್ರಾರಂಭಿಸಿದೆ. ಮಾರ್ಚ್ 21ರಂದು ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ...