Homeಫ್ಯಾಕ್ಟ್‌ಚೆಕ್FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

FACT CHECK : CARIPILL ಮಾತ್ರೆ ಸೇವನೆಯಿಂದ ಡೆಂಘೀ ಸೋಂಕು ನಿವಾರಿಸಬಹುದು ಎಂಬುವುದು ಸುಳ್ಳು

- Advertisement -
- Advertisement -

ರಾಜ್ಯದಲ್ಲಿ ಇತ್ತೀಚೆಗೆ ಮಳೆ ಹೆಚ್ಚಾಗುತ್ತಿದ್ದಂತೆ ಡೆಂಗಿ ಸೋಂಕು ಕೂಡ ಎಲ್ಲಡೆ ಹಬ್ಬಲು ಪ್ರಾರಂಭವಾಗಿದೆ. ಇದರ ಮಧ್ಯೆ ” ಡೆಂಗ್ಯು ಕಾಯಿಲೆಯನ್ನು 48 ಗಂಟೆಗಳಲ್ಲಿ ಗುಣಪಡಿಸುವ ಔಷಧವೊಂದು ಮಾರುಕಟ್ಟೆಯಲ್ಲಿ ಲಭ್ಯವಿದೆ, ಈಗಲೆ ಖರೀದಿಸಿ, ಪಪ್ಪಾಯ ಎಲೆಯ ಸಾರವನ್ನು ಒಳಗೊಂಡಿರುವ ‘CARIPILL’ ಮಾತ್ರೆಯು ಡೆಂಗಿವನ್ನು ಕೆಲವೇ ಗಂಟೆಗಳಲ್ಲಿ ಗುಣಪಡಿಸುವ ಶಕ್ತಿ ಹೊಂದಿದೆ. ‘ಅಂತಃಕರಣ’ ಇದನ್ನು ಉಚಿತವಾಗಿ ನೀಡುತ್ತಿದೆ. ಈ ಸಂದೇಶವನ್ನು ಯಾವುದೇ ಕಾರಣಕ್ಕೂ ಅಳಿಸಬೇಡಿ ಎಲ್ಲರಿಗೂ ತಲುಪುವವರೆಗೂ ಶೇರ್‌ ಮಾಡಿ”ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಪ್ರಸಾರವಾಗುತ್ತಿದೆ.

ಈ ಸುದ್ದಿಯನ್ನು ಓದಿದ ಹಲವು ಮಂದಿ ಪಪಾಯಿ ಸಾರವನ್ನು ಹೊಂದಿರುವ ಕ್ಯಾರಿಪಿಲ್‌ ನಿಜಕ್ಕೂ ಡೆಂಗಿ ಖಾಯಿಲೆಯಿಂದ ತಮ್ಮನ್ನು ಮುಕ್ತಗೊಳಿಸುತ್ತದೆ ಎಂದು ಭಾವಿಸಿದ್ದಾರೆ. ಹೀಗಾಗಿ ಕೆಲವರು ಯಾವುದೇ ವೈದ್ಯರ ಸಲಹೆಯನ್ನು ಪಡೆಯದೆ ಈ CARIPILL ಸೇವಿಸುತ್ತಿದ್ದಾರೆ ಎಂಬ ಮಾಹಿತಿ ಕೂಡ ಲಭ್ಯವಾಗುತ್ತದೆ.

ವಾಟ್ಸ್‌ಆಪ್‌ ಸೇರಿದಂತೆ ವಿವಿಧ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ಈ CARIPILL ನಿಜಕ್ಕೂ ಡೆಂಗಿ ಖಾಯಿಲೆಯನ್ನು ನಿವಾರಣೆ ಮಾಡುತ್ತದೆಯೇ ಎಂದು ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್‌ ಆಗುತ್ತಿರುವ ಈ ಮಾತ್ರೆಯ ಕುರಿತು ಪರಿಶೀಲನೆ ನಡೆಸಲು  ಕೆಲವೊಂದು ಕೀ ವರ್ಡ್ಸ್‌ಗಳನ್ನು ಬಳಸಿ ಗೂಗಲ್ ಸರ್ಚ್ ಮಾಡಿದಾಗ, 12 ಆಗಸ್ಟ್‌ 2016ರಂದು ದ ಹೆಲ್ತ್‌ ಸೈಟ್‌.ಕಾಮ್ ಎಂಬ ವೆಬ್‌ಸೈಟ್‌ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ. ಈ ವರದಿಯಲ್ಲಿ ‌ಈ ಸಂಸ್ಥೆಯು ಜಾಹಿರಾತಿನಲ್ಲಿ ನೀಡಲಾದ ನಂಬರ್‌ಗೆ ಕರೆ ಮಾಡಿ ವಿಚಾರಣೆ ನಡೆಸಿದಾಗ ಈ ಮಾತ್ರೆಗೂ ಅಂತಃಕರಣ ಕ್ಲಿನಿಕ್‌ಗೂ ಯಾವುದೇ ರೀತಿಯಾದ ಸಂಬಂಧವಿಲ್ಲ ಎಂಬುದು ಖಚಿತ ಪಡಿಸಿಕೊಂಡಿದೆ.

ಬಳಿಕ ಈ ಕ್ಯಾರಿಪಿಲ್ ಮಾತ್ರೆಯನ್ನು  ಬೆಂಗಳೂರಿನ ಮೈಕ್ರೋ ಲ್ಯಾಬ್ಸ್ ಎಂಬ ಫಾರ್ಮಾಸ್ಯುಟಿಕಲ್ಸ್ ಕಂಪನಿಯಿಂದ ತಯಾರಿಸಲ್ಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಮಾತ್ರೆಗಳು ಸಸ್ಯಶಾಸ್ತ್ರೀಯಕ್ಕೆ ಸಂಬಂಧಪಟ್ಟಿದೆ  ಎಂಬುದನ್ನು ಖಚಿತ ಪಡಿಸಿಕೊಂಡ ಈ ತಂಡ, ಬಳಿಕ ಮೈಕ್ರೋ ಲ್ಯಾಬ್ಸ್ ಲಿಮಿಟೆಡ್‌ನ ವೈದ್ಯಕೀಯ ವ್ಯವಹಾರಗಳ ವಿಪಿ ಡಾ ಮಂಜುಳಾ ಸುರೇಶ್  ಅವರನ್ನು ಸಂಪರ್ಕಿಸಿ ಮಾತನಾಡಿದೆ. ಇದಕ್ಕೆ ಅವರು  “ಈ ಸಂದೇಶವನ್ನು ವಾಟ್ಸಾಪ್‌ನಲ್ಲಿ ಪ್ರಸಾರ ಮಾಡುವ ಬಗ್ಗೆ ನಮಗೆ ತಿಳಿದಿಲ್ಲ. ಕ್ಯಾರಿಪಿಲ್ ಒಂದು ಪ್ರಿಸ್ಕ್ರಿಪ್ಷನ್ ಔಷಧವಾಗಿದೆ ಮತ್ತು ನಾವು ಅದನ್ನು ವೈದ್ಯರಿಗೆ ಮಾತ್ರ ಮಾರಾಟ ಮಾಡುತ್ತೇವೆ. ಡೆಂಗ್ಯೂವನ್ನು 48 ಗಂಟೆಗಳಲ್ಲಿ ಗುಣಪಡಿಸಬಹುದು ಎಂದು ನಾವು ಹೇಳುವುದಿಲ್ಲ. ವಾಸ್ತವವಾಗಿ, ಔಷಧವನ್ನು ಐದು ದಿನಗಳವರೆಗೆ ತೆಗೆದುಕೊಳ್ಳಬೇಕು.” ಎಂದು ದ ಹೆಲ್ತ್‌ ಸೈಟ್‌.ಕಾಮ್‌ಗೆ ಸ್ಪಷ್ಟ ಪಡಿಸಿದೆ.

ಒಟ್ಟಾರೆಯಾಗಿ ಹೇಳುವುದಾದರೆ , CARIPILL ಮಾತ್ರೆ ಸೇವನೆಯಿಂದ ಡೆಂಗಿ ಸೋಂಕಿನಿಂದ ಕೇವಲ 48 ಗಂಟೆಗಳಲ್ಲಿ ಮುಕ್ತಿ ಪಡೆಯಬಹುದು ಎಂಬ ಪ್ರತಿಪಾದನೆ ಸುಳ್ಳಾಗಿದೆ. ಹಾಗೂ ಈ ಸಂದೇಶ 2016ರಿಂದಲೂ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗುತ್ತಿರುವುದರಿಂದ ಇದು ಹಳೆಯ ಮತ್ತು ಸುಳ್ಳು ಸುದ್ದಿಯಾಗಿದೆ.

ಇದನ್ನೂ ಓದಿ : FACT CHECK : ನಟ ದರ್ಶನ್ ಪತ್ನಿ ದೇವರ ಮೊರೆ ಎಂದು ಒಂದು ವರ್ಷದ ಹಿಂದಿನ ಹಳೆಯ ಫೋಟೊ ಹಂಚಿಕೊಳ್ಳಲಾಗ್ತಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...