Homeಫ್ಯಾಕ್ಟ್‌ಚೆಕ್FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ 'ವೀಟೋ ಅಧಿಕಾರ' ದೊರೆತಿದೆ ಎಂಬುವುದು ಸುಳ್ಳು

FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

- Advertisement -
- Advertisement -

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಅಧಿವೇಶನ ಇತ್ತೀಚೆಗೆ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಜಾಗತಿಕ ನಾಯಕರು ಪಾಲ್ಗೊಂಡಿದ್ದರು.

ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದ ಸಭೆಯಯಲ್ಲಿ ಪಾಲ್ಗೊಂಡು ಪ್ರಧಾನಿ ಮೋದಿ ವಾಪಸ್ ಬಂದ ಬಳಿಕ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಯಲ್ಲಿ ಭಾರತಕ್ಕೆ ವೀಟೋ ಅಧಿಕಾರ (Veto power) ದೊರೆತಿದೆ ಎಂದು ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಸೆಪ್ಟೆಂಬರ್ 26ರಂದು ಮೋದಿ ವಿದೇಶ ಭೇಟಿಯ ವಿಡಿಯೋವೊಂದನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದ ‘ಸನಾತನಿ ಹಿಂದೂ ಶೇಖರ್‘ ಎಂಬ ಬಳಕೆದಾರ ” ಭಾರತಕ್ಕೆ ವಿಟೋ ಅಧಿಕಾರದೊಂದಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಖಾಯಂ ಸದಸ್ಯತ್ವ ದೊರೆತಿದೆ! ಅಭಿನಂದನೆಗಳು” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಎಕ್ಸ್‌ ಖಾತೆಗಳಲ್ಲೂ ಇದೇ ಸಂದೇಶಗಳು ಹರಿದಾಡುತ್ತಿದೆ. ಹಾಗಾದರೆ, ಭಾರತ ಯುಎನ್‌ಎಸ್‌ಸಿಯಲ್ಲಿ ವೀಟೋ ಅಧಿಕಾರೊಂದಿಗೆ ಖಾಯಂ ಸದಸ್ಯತ್ವ ಪಡೆದಿರುವುದು ನಿಜಾನಾ? ಎಂದು ಪರಿಶೀಲಿಸೋಣ..

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಸಂದೇಶದ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಆ ಕುರಿತ ಯಾವುದೇ ಮಾಧ್ಯಮ ವರದಿಗಳು ನಮಗೆ ಲಭ್ಯವಾಗಿಲ್ಲ. ನಾವು ವಿಶ್ವಸಂಸ್ಥೆ ಮತ್ತು ಭಾರತ ಸರ್ಕಾರದ ವೆಬ್‌ಸೈಟ್‌ಗಳನ್ನೂ ಪರಿಶೀಲನೆ ನಡೆಸಿದ್ದೇವೆ. ಅಲ್ಲೂ ಯಾವುದೇ ಮಾಹಿತಿ ದೊರೆತಿಲ್ಲ.

ಬಳಿಕ ನಾವು ವಿಶ್ವಸಂಸ್ಥೆಯ ವೆಬ್‌ಸೈಟ್‌ನಲ್ಲಿ ವೀಟೋ ಅಧಿಕಾರದ ಕುರಿತ ವಿಭಾಗವನ್ನು ಪರಿಶೀಲನೆ ನಡೆಸಿದ್ದೇವೆ. ಅಲ್ಲಿ ಈ ಹಿಂದಿನಂತೆ ಐದು ದೇಶಗಳಾದ ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಂ ಮತ್ತು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರವನ್ನು ಹೊಂದಿರುವ ಬಗ್ಗೆ ಮಾಹಿತಿಯಿದೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿ 15 ಸದಸ್ಯರನ್ನು ಒಳಗೊಂಡಿದೆ. ಈ ಪೈಕಿ ವಿಟೋ ಅಧಿಕಾರ ಹೊಂದಿರುವ ಐದು ಖಾಯಂ ರಾಷ್ಟ್ರಗಳು (ಚೀನಾ, ಫ್ರಾನ್ಸ್, ರಷ್ಯಾ, ಯುನೈಟೆಡ್ ಕಿಂಗ್‌ಡಂ ಮತ್ತು ಯುನೈಟೆಡ್ ಸ್ಟೇಟ್ಸ್) ಖಾಯಂ ಸದಸ್ಯಸತ್ವ ಹೊಂದಿದೆ. ಉಳಿದ ಹತ್ತು ದೇಶಗಳು ಖಾಯಂ ಸದಸ್ಯರಲ್ಲ. ಈ ಸದಸ್ಯರನ್ನು ಸಾಮಾನ್ಯ ಸಭೆಯಿಂದ ಎರಡು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗುತ್ತದೆ. ಈ ರಾಷ್ಟ್ರಗಳಿಗೆ ವೀಟೋ ಅಧಿಕಾರ ಇರುವುದಿಲ್ಲ.

ಒಟ್ಟಿನಲ್ಲಿ, ಯುಎನ್‌ಎಸ್‌ಸಿಯಲ್ಲಿ ಭಾರತಕ್ಕೆ ವೀಟೋ ಅಧಿಕಾರ ದೊರೆತಿದೆ ಎಂಬ ಸಾಮಾಜಿಕ ಜಾಲತಾಣದ ಸಂದೇಶ ಸುಳ್ಳು ಎಂಬುವುದು ನಮ್ಮ ಪರಿಶೀಲನೆಯಲ್ಲಿ ಖಚಿತವಾಗಿದೆ.

ಇದನ್ನೂ ಓದಿ : FACT CHECK : ಸಾವರ್ಕರ್ ಸಿನಿಮಾ ಆಸ್ಕರ್‌ಗೆ ಪ್ರವೇಶ ಪಡೆದಿಲ್ವಾ? ನಿರ್ಮಾಪಕರು ಸುಳ್ಳು ಹೇಳಿದ್ರಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...