Homeಫ್ಯಾಕ್ಟ್‌ಚೆಕ್FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ...

FACT CHECK : ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಬದಲಿಸಿದ್ದರು ಎಂಬುವುದು ಸುಳ್ಳು

- Advertisement -
- Advertisement -

“ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ. ಕಾವಲುಗಾರ ವಾಹನ ಹೀಗೆ ಹೋಗುವುದಿಲ್ಲ ಎಂದು ಹೇಳುತ್ತಿದ್ದರೂ ಜಿಹಾದಿಗಳು ವಾಹನವನ್ನು ಹೀಗೆ ಕಳುಹಿಸಲು ಹಠ ಹಿಡಿದಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ? ಯಾವುದೇ ಸುದ್ದಿ ವಾಹಿನಿಯು ಈ ಸುದ್ದಿಯನ್ನು ತೋರಿಸುತ್ತಿಲ್ಲ, ದಯವಿಟ್ಟು ಇದನ್ನು ಸಾಧ್ಯವಾದಷ್ಟು ಶೇರ್ ಮಾಡಿ, ಇದರಿಂದ ಕೇಂದ್ರ ಸರ್ಕಾರವು ಇದರ ಬಗ್ಗೆ ಗಮನ ಹರಿಸಬೇಕು ಮತ್ತು ಅಂತಹ ಮೂರ್ಖರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬ ಬರಹದೊಂದಿಗೆ ರೈಲಿನ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿರುವ ರೈಲಿನ ಮುಂಭಾಗವನ್ನು ಗುಂಬಝ್ ರೀತಿಯ ಬ್ಯಾನರ್‌ನಿಂದ ಅಲಂಕರಿಸಲಾಗಿದೆ. ರೈಲಿನ ಬಲ ಬದಿಯಲ್ಲಿ ಅರಬಿಕ್ ಭಾಷೆಯ ಬ್ಯಾನರ್‌ವೊಂದು ಕಾಣಿಸುತ್ತಿದೆ. ಅಲ್ಲದೆ, ಕೆಲ ವ್ಯಕ್ತಿಗಳು ರೈಲಿಗೆ ಯಾವುದೋ ಸ್ಟಿಕ್ಕರ್ ಅಂಟಿಸುವುದನ್ನು ನೋಡಬಹುದು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ವಿಡಿಯೋದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲಿಸಿದೆ. ನಾವು ವೈರಲ್ ವಿಡಿಯೋದ ಸ್ಕ್ರೀನ್ ಶಾಟ್‌ ಬಳಸಿ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದಾಗ ಹಲವಾರು ಮಾಧ್ಯಮಗಳು ಈ ಕುರಿತು ಈಗಾಗಲೇ ಫ್ಯಾಕ್ಟ್‌ಚೆಕ್ ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಕನ್ನಡದ ಏನ್‌ಸುದ್ದಿ ವೆಬ್‌ಸೈಟ್‌ ಮಾಡಿರುವ ಫ್ಯಾಕ್ಟ್‌ಚೆಕ್‌ ಅನ್ನು ನಾವು ಪರಿಶೀಲಿಸಿದಾಗ ಇದು ಕರ್ನಾಟಕದ ಕಲಬುರಗಿ ಜಿಲ್ಲೆಯ ವಾಡಿಯ ಬಳಿಯ ಹಲ್ಕಟ್ಟಾ ಶರೀಫ್‌ನ ಉರೂಸ್ ಪ್ರಯುಕ್ತ ದಕ್ಷಿಣ ಮಧ್ಯ ರೈಲ್ವೇ ವಿಶೇಷ ರೈಲಿನ ವ್ಯವಸ್ಥೆ ಮಾಡಿತ್ತು. ಅದಕ್ಕೆ ಮುಸ್ಲಿಮರು ಈ ರೀತಿ ಅಲಂಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

2023ರ ಆಗಸ್ಟ್ 1 ರಂದು ಹೈದರಾಬಾದ್‌ನಿಂದ ಕಲಬುರಗಿಯ ವಾಡಿ ಜಂಕ್ಷ‌ನ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿತ್ತು. ಹಲ್ಕಟ್ಟಾ ಶರೀಫ್‌ನಲ್ಲಿ ಹಝರತ್ ಖ್ವಾಜಾ ಸೈಯದ್ ಮೊಹಮ್ಮದ್ ಬಡೇಶ ಕ್ವಾದ್ರಿ ಚಿಸ್ತಿ ಯಮಾನಿ ಅವರ ಉರೂಸ್ ಆಚರಣೆಯಲ್ಲಿ ಪಾಲ್ಗೊಳ್ಳುವ ಯಾತ್ರಾರ್ಥಿಗಳ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನಾಲ್ಕು ವಿಶೇಷ ರೈಲುಗಳನ್ನು ಓಡಿಸಲಾಗಿತ್ತು ಎಂಬ ಮಾಹಿತಿ ದೊರೆತಿದೆ.

ಜುಲೈ 27, 2023 ರಂದು ದಕ್ಷಿಣ ಮಧ್ಯ ರೈಲ್ವೆ ಉರೂಸ್ ಪ್ರಯುಕ್ತ ಹೈದರಾಬಾದ್‌-ವಾಡಿ ನಡುವೆ ವಿಶೇಷ ರೈಲಿನ ವ್ಯವಸ್ಥೆ ಮಾಡಿದ್ದ ಕುರಿತು ಪತ್ರಿಕಾ ಪ್ರಕಟನೆ ಹೊರಡಿಸಿತ್ತು. ಅದನ್ನು ಕೆಳಗೆ ನೋಡಬಹುದು.

ಹಲ್ಕಟ್ಟಾ ದರ್ಗಾ ಶರೀಫ್ ಉರೂಸ್ ಪ್ರಯುಕ್ತ ವಿಶೇಷ ರೈಲಿನ ವ್ಯವಸ್ಥೆ ಮಾಡಿರುವ ಕುರಿತು ಅನೇಕರು ಯೂಟ್ಯೂಬ್‌ನಲ್ಲಿ ವಿಡಿಯೋ ಕೂಡ ಅಪ್ಲೋಡ್ ಮಾಡಿದ್ದರು. ಆ ವಿಡಿಯೋ ಲಿಂಕ್ ಕೆಳಗಿದೆ.

ವೈರಲ್ ವಿಡಿಯೋಲ್ಲಿರುವ ರೈಲು ಮತ್ತು ಯೂಟ್ಯೂಬ್‌ ವಿಡಿಯೋದಲ್ಲಿರುವ ರೈಲು ಒಂದೇ ಎಂಬುವುದನ್ನು ಕೆಳಗಿನ ಫೋಟೋ ಮೂಲಕ ಖಚಿತಪಡಿಸಬಹುದು.

ನಮ್ಮ ಪರಿಶೀಲನೆಯಲ್ಲಿ ಕಂಡು ಬಂದ ಅಂಶವೆಂದರೆ, ಹಲ್ಕಟ್ಟಾ ಶರೀಫ್ ದರ್ಗಾಕ್ಕೆ ನಿಗದಿಪಡಿಸಲಾದ ವಿಶೇಷ ರೈಲನ್ನು ಮುಸ್ಲಿಮರು ಅಲಂಕರಿಸಿದ ವಿಡಿಯೋವನ್ನು ಹಂಚಿಕೊಂಡು “ಹೈದರಾಬಾದ್‌ನಿಂದ ಪಶ್ಚಿಮ ಬಂಗಾಳಕ್ಕೆ ಹೋಗುತ್ತಿದ್ದ ರೈಲನ್ನು ಜಿಹಾದಿಗಳು ಮುಸ್ಲಿಂ ಎಕ್ಸ್‌ಪ್ರೆಸ್ ಆಗಿ ಪರಿವರ್ತಿಸಿದ್ದಾರೆ” ಎಂದು ಮುಸ್ಲಿಮರ ವಿರುದ್ದ ಕೋಮು ದ್ವೇಷದ ಸುಳ್ಳು ಸುದ್ದಿ ಹರಿಬಿಡಲಾಗಿದೆ.

ಇದನ್ನೂ ಓದಿ : FACT CHECK : ಗುಜರಾತ್‌ನ ಅದಾನಿ ಬಂದರಿನ ಮೂಲಕ ಹಸುಗಳನ್ನು ಅರಬ್‌ ದೇಶಕ್ಕೆ ಕಳಿಸಲಾಗುತ್ತಿದೆ ಎನ್ನುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...