Homeಫ್ಯಾಕ್ಟ್‌ಚೆಕ್FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

FACT CHECK : ಉತ್ತರ ಪ್ರದೇಶದಲ್ಲಿ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದವರು ಮುಸ್ಲಿಮರು ಎಂಬುವುದು ಸುಳ್ಳು

- Advertisement -
- Advertisement -

ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದರೊಬ್ಬರ ಮುಖಕ್ಕೆ ಬೈಕ್‌ನಲ್ಲಿ ಹೋಗುತ್ತಿದ್ದ ಯುವಕನೋರ್ವ ಸ್ನೋ ಫೋಮ್ ಸ್ಪ್ರೇ ಮಾಡಿದ ವಿಡಿಯೋವೊಂದು ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಈ ಘಟನೆ ನಡೆದಿದ್ದು, ಝಾನ್ಸಿಯ ನವಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಓರ್ವ ಆರೋಪಿಯನ್ನೂ ಬಂಧಿಸಲಾಗಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಂಧಿತ ಆರೋಪಿ ಮುಸ್ಲಿಂ ಎಂದು ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲಾಗಿದೆ.

ನಾಗೇಶ್ ಪ್ರೀತಮ್ ಎಂಬವರು ಸೆಪ್ಟೆಂಬರ್ 24ರಂದು ತನ್ನ ಫೇಸ್‌ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು ” ಸೈಕಲ್‌ ಅಲ್ಲಿ ಹೋಗುತ್ತಿದ್ದ ಅಮಾಯಕ ವೃದ್ದನಿಗೆ ಮುಸ್ಲಿಂ ಯುವಕ ಅನುಚಿತ ವರ್ತನೆ ಯುಪಿ ಪೊಲೀಸರಿಗೆ ಭರ್ಜರಿ ಬ್ಯಾಟಿಂಗ್” ಎಂದು ಬರೆದುಕೊಂಡಿದ್ದರು.

ಅರುಣ್ ಕುಮಾರ್ ಹಿಂದೂ ಎಂಬ ಎಕ್ಸ್‌ ಖಾತೆಯಲ್ಲೂ ಸೆಪ್ಟೆಂಬರ್ 26ರಂದು ವಿಡಿಯೋ ಹಂಚಿಕೊಂಡು ” ತನ್ನ ಪಾಡಿಗೆ ಹೋಗುತ್ತಿದ್ದ ಅಮಾಯಕ ವೃದ್ಧನಿಗೆ ಪುಂಡ ಮುಸ್ಲಿಂ ಯುವಕರಿಂದ ಅನುಚಿತ ವರ್ತನೆ. ಆದರೆ ನಂತರ ನಡೆದಿದ್ದು ಯುಪಿ ಪೊಲೀಸರ ಕಾರ್ಯಾಚರಣೆ. ಈ ರೀತಿ ಕರ್ನಾಟಕದಲ್ಲೂ ಆಗಬೇಕು. ಆಗ ಈ ವೀಲಿಂಗ್ ಮಾಡುವ ಮುಸ್ಲಿಂ ಯುವಕರಿಗೆ ಬಿಸಿ ಮುಟ್ಟುತ್ತದೆ” ಎಂದು ಬರೆದುಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ಮುಸ್ಲಿಂ ಯುವಕ ವೃದ್ದನಿಗೆ ಮುಖಕ್ಕೆ ಸ್ಪ್ರೇ ಮಾಡಿದ್ದಾನೆ ಎಂಬ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ.

ಪ್ರಕರಣದ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದಂತೆ ಅನೇಕ ವರದಿಗಳು ನಮಗೆ ಲಭ್ಯವಾಗಿದೆ.

ಸೆಪ್ಟೆಂಬರ್ 24,2024ರಂದು ನ್ಯೂಸ್‌ 18 ಈ ಕುರಿತು ವರದಿ ಪ್ರಕಟಿಸಿತ್ತು. ವರದಿಯಲ್ಲಿ “ಝಾನ್ಸಿಯ ನವಾಬಾದ್ ಪ್ರದೇಶದ ಎಲೈಟ್ -ಚಿತ್ರಾ ರಸ್ತೆಯ ಮೇಲ್ಸೇತುವೆ ಬಳಿ ಇಬ್ಬರು ಬೈಕ್ ಸವಾರರು ವೃದ್ದರೊಬ್ಬರ ಮುಖಕ್ಕೆ ನೊರೆ ಎರಚಿ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದಾರೆ. ಅದನ್ನು ಲೈಕ್ಸ್‌ಗೋಸ್ಕರ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆಗಿ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾದ ಬಳಿಕ ಪೊಲೀಸರು ವಿನಯ್ ಯಾದವ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಆತ ಯೂಟ್ಯೂಬರ್” ಎಂದು ಪೊಲೀಸರು ತಿಳಿಸಿರುವುದಾಗಿ ಹೇಳಲಾಗಿತ್ತು.

ಸೆಪ್ಟೆಂಬರ್ 24ರಂದು ಹಿಂದುಸ್ತಾನ್ ಟೈಮ್ಸ್ ಕೂಡ ವಿಡಿಯೋ ಕುರಿತು ವರದಿ ಪ್ರಕಟಿಸಿತ್ತು. ಅದರಲ್ಲಿ ವೃದ್ದನ ಮುಖಕ್ಕೆ ಫೋಮ್ ಸ್ಪ್ರೇ ಮಾಡಿ ವಿಕೃತಿ ಮೆರೆದ ಯೂಟ್ಯೂಬರ್ ವಿನಯ್ ಯಾದವ್‌ನನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ಹೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಝಾನ್ಸಿ ಪೊಲೀಸರ ಅಧಿಕೃತ ಎಕ್ಸ್‌ ಖಾತೆಯಲ್ಲಿ ಪೊಲೀಸ್ ಅಧೀಕ್ಷರ ಸ್ಪಷ್ಟನೆಯ ವಿಡಿಯೋ ಕೂಡ ಅಪ್ಲೋಡ್ ಮಾಡಲಾಗಿತ್ತು. ವಿಡಿಯೋದಲ್ಲಿ ಪೊಲೀಸ್ ಅಧೀಕ್ಷರು ಆರೋಪಿ ವಿನಯ್ ಯಾದವ್ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 24ರಂದು ನವಭಾರತ್ ಟೈಮ್ಸ್ ಪ್ರಕಟಿಸಿದ ವರದಿಯಲ್ಲಿ ” ನಂದನಪುರ ನಿವಾಸಿ ಕಾನ್ಶಿರಾಂ ಪ್ರಜಾಪತಿ ಎಂಬವರ ದೂರು ಆಧರಿಸಿ ಪ್ರಕರಣ ದಾಖಲಾಗಿದೆ. ಒಟ್ಟು ಮೂವರು ಆರೋಪಿಗಳಾದ ಖೋಡಾನ್ ಗ್ರಾಮದ ವಿನಯ್ ಯಾದವ್, ಪಾಲಿ ಪಹಾರಿ ಗ್ರಾಮದ ರಿತೇಶ್ ಕೇವತ್ ಮತ್ತು ಡೈಲಿ ಗ್ರಾಮದ ಆರ್ಯನ್ ಶ್ರೀವಾಸ್ತವ್ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಓರ್ವ ಆರೋಪಿ ವಿನಯ್ ಯಾದವ್‌ನನ್ನು ಬಂಧಿಸಿದ್ದಾರೆ. ಉಳಿದವರ ಬಂಧನಕ್ಕೆ ಶೋಧ ನಡೆಸುತ್ತಿದ್ದಾರೆ” ಎಂದು ಹೇಳಲಾಗಿದೆ.

ಒಟ್ಟಿನಲ್ಲಿ ಸೈಕಲ್‌ನಲ್ಲಿ ಹೋಗುತ್ತಿದ್ದ ವೃದ್ದನ ಮುಖಕ್ಕೆ ಸ್ಪ್ರೇ ಮಾಡಿದ ಆರೋಪಿಗಳು ಮುಸ್ಲಿಮರಲ್ಲ ಎಂಬುವುದು ವರದಿಗಳಿಂದ ತಿಳಿದು ಬಂದಿದೆ.

ಈ ಫ್ಯಾಕ್ಟ್‌ಚೆಕ್ ಮೂಲಕ ಆರೋಪಿಗಳನ್ನು ಧರ್ಮದ ಆಧಾರದಲ್ಲಿ ಗುರುತಿಸುವ ಪ್ರಯತ್ನ ನಮ್ಮದಲ್ಲ. ಕೆಲವರು ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಕಾರಣ ಜನರಿಗೆ ಸತ್ಯ ತಿಳಿಸುವ ಪ್ರಯತ್ನ ಮಾಡಿದ್ದೇವೆ.

ಇದನ್ನೂ ಓದಿ : FACT CHECK | ಮಹಾಲಕ್ಷ್ಮಿ ಕೊಲೆ : ಅಶ್ರಫ್‌ನನ್ನು ಕಟಕಟೆಯಲ್ಲಿ ನಿಲ್ಲಿಸಿದ ಸುಳ್ಳು ಸುದ್ದಿ ಜಾಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...

ವೈರಮುತ್ತುಗೆ ಜ್ಞಾನಪೀಠ ಪ್ರಶಸ್ತಿ : ಚಿನ್ಮಯಿ ಶ್ರೀಪಾದ, ಟಿಎಂ ಕೃಷ್ಣ ಸೇರಿ ಹಲವರಿಂದ ಟೀಕೆ

ಲಿಂಗತಾರತಮ್ಯ ಮತ್ತು ಲೈಂಗಿಕ ಕಿರುಕುಳದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ತಮಿಳು ಸಾಹಿತಿ ವೈರಮುತ್ತು ಅವರಿಗೆ 2025ನೇ ಸಾಲಿನ ಪ್ರತಿಷ್ಠಿತ ಜ್ಞಾನಪೀಠ ಪ್ರಶಸ್ತಿ ಘೋಷಿಸಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ.  ಸಾಹಿತ್ಯ ಕ್ಷೇತ್ರದಲ್ಲಿನ ಅವರ ಕೊಡುಗೆಯನ್ನು ಪರಿಗಣಿಸಿ...

ಡ್ರೋನ್ ದಾಳಿಯ ನಂತರ ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ ಅವಘಡ; ವಿಮಾನ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತ

ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿಯಿಂದಾಗಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಆದರೆ, ದುಬೈ ಅಧಿಕಾರಿಗಳ ಪ್ರಕಾರ, ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ."ದುಬೈ ಅಂತರಾಷ್ಟ್ರೀಯ ವಿಮಾನ...

ಕಾನ್ಶಿ ರಾಮ್‌ಗೆ ಭಾರತ ರತ್ನ ನೀಡುವಂತೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಸ್ಥಾಪಿಸಿದ ದಲಿತ ಐಕಾನ್ ಕಾನ್ಶಿ ರಾಮ್‌ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಪ್ರಧಾನಿ ನರೇಂದ್ರ...

ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ; 26 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಹತ್ತು ರಾಜ್ಯಗಳ 37 ಸ್ಥಾನಗಳನ್ನು ಒಳಗೊಂಡ ದ್ವೈವಾರ್ಷಿಕ ರಾಜ್ಯಸಭಾ ಚುನಾವಣೆಗೆ ಸೋಮವಾರ (ಮಾ.16) ಮತದಾನ ನಡೆಯುತ್ತಿದೆ. ಬಿಹಾರ, ಒಡಿಶಾ ಮತ್ತು ಹರಿಯಾಣದಲ್ಲಿ ತೀವ್ರ ಪೈಪೋಟಿ ಏರ್ಪಡುವ ಸಾಧ್ಯತೆ ಇದ್ದು, 26 ಅಭ್ಯರ್ಥಿಗಳು ಈಗಾಗಲೇ...

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....