Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿಂದೂಗಳಿಗೆ ನೀಡುವ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸುತ್ತಿದ್ದ ಮುಸ್ಲಿಮರ ಸುಮಾರು 40 ಹೋಟೆಲ್‌ಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

“ಜಾಗ್ರತೆ ಹಿಂದೂಗಳೇ ಜಾಗ್ರತೆ…ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರದ ಹೆದ್ದಾರಿಗಳಲ್ಲಿ 40ಕ್ಕೂ ಹೆಚ್ಚು ಮುಸ್ಲಿಂ ಡಾಬಾಗಳ ಮೇಲೆ ದಾಳಿ ನಡೆಸಿದ್ದು, ಈ ಎಲ್ಲಾ ಹೋಟೆಲ್‌ಗಳಲ್ಲಿ ಹಿಂದೂಗಳಿಗೆ ಆಹಾರದಲ್ಲಿ ಸಂತಾನಹೀನತೆಯ ರಾಸಾಯನಿಕ ಬೆರೆಸಲಾಗಿರುವುದು ಪತ್ತೆಯಾಗಿದೆ. ಆ ಹೋಟೆಲ್‌ಗಳ ಬಗ್ಗೆ ಎಚ್ಚರದಿಂದಿರಿ. ಹಿಂದೂಗಳ ಜನಸಂಖ್ಯೆಯನ್ನು ಕಡಿಮೆ ಮಾಡಲು ಮತ್ತು ಹಿಂದೂ ಧರ್ಮವನ್ನು ನಾಶಮಾಡಲು, ಇವರ ಯಾವುದೇ ಆಹಾರ ಮಳಿಗೆಗಳಲ್ಲಿ ನಮ್ಮ ಆರೋಗ್ಯಕ್ಕೆ ಹಾನಿ ಮಾಡುವ ಇಂತಹ ರಾಸಾಯನಿಕಗಳನ್ನು ಬಳಸುತ್ತಿರುವುದು ಪದೇಪದೇ ಬೆಳಕಿಗೆ ಬರುತ್ತಿವೆ. ಸಾಕಷ್ಟು ಕಡೆ ಸರ್ಕಾರಿ ಬಸ್ಸುಗಳನ್ನೂ ಇಂತಹದೇ ಹೋಟೆಲ್ ಗಳಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಿಕೊಂಡಿರುತ್ತಾರೆ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ.

ಈ ಹಿಂದೆ ಇದೇ ಸುದ್ದಿಯನ್ನು “ತಮಿಳುನಾಡಿನ ಕೊಯಮತ್ತೂರಿನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂಗಳಿಗೆ ಬಿರಿಯಾನಿಯಲ್ಲಿ ಪುರುಷತ್ವ ಹರಣ ಔಷಧವನ್ನು ಸೇರಿಸಿದ್ದಾನೆ. ಈ ಬಿರಿಯಾನಿ ತಿನ್ನುವ ಗಂಡಸು ಅಥವಾ ಹೆಂಗಸರಿಗೆ ಮಕ್ಕಳಾಗೋದಿಲ್ಲ. ಹೀಗಾಗಿ, ಮುಸ್ಲಿಮರಿಂದ ಯಾವುದೇ ವಸ್ತು ಖರೀದಿಸಬೇಡಿ” ಎಂದು ಪ್ರತಿಪಾದಿಸಿ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳ ಪೋಸ್ಟ್ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ವೇಳೆ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋಗಳ ಬಗ್ಗೆ ಮಾಹಿತಿ ಕೆಳಗಿದೆ.

ಫೋಟೋ -1 :

ಈ ಫೋಟೋ ಯೂಟ್ಯೂಬ್‌ ವಿಡಿಯೋ ಒಂದರಿಂದ ತೆಗೆದುಕೊಳ್ಳಲಾಗಿದೆ. ಸ್ಟ್ರೀಟ್‌ ಫುಡ್ ಅಫಿಷಿಯಲ್ ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ “Indian Muslim festival DUM BIRYANI Preparation for 30 People & STREET FOOD” ಎಂಬ ಶೀರ್ಷಿಕೆಯಲ್ಲಿ ಜುಲೈ 1, 2026ರಲ್ಲಿ ವಿಡಿಯೋ ಅಪ್ಲೋಡ್ ಮಾಡಲಾಗಿತ್ತು. ಅದಕ್ಕೆ ಕೊಡಲಾಗಿದ್ದ ತಂಬ್‌ನೈಲ್‌ ಫೋಟೋ ಇದಾಗಿದೆ. ಈ ಫೋಟೋವನ್ನು ತಪ್ಪಾದ ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ ಎಂದು ಜೂನ್ 10, 2020ರಂದು ಟೈಮ್ಸ್‌ ಆಫ್ ಇಂಡಿಯಾ ಸುದ್ದಿ ಮಾಡಿತ್ತು.

ಮುಸ್ಲಿಮರು ತಮ್ಮ ಕಾರ್ಯಕ್ರಮಗಳಿಗೆ ಮಾಡುವ ರುಚಿಯಾದ ದಮ್ ಬಿರಿಯಾನಿ ಹೇಗೆ ತಯಾರಿಸುವುದು ಎಂದು ವಿಡಿಯೋದಲ್ಲಿ ವಿವರಿಸಲಾಗಿದೆ.

ಫೋಟೋ -2 :

ಸಾಮಾಜಿಕ ಜಾಲತಾಣದ ಪೋಸ್ಟ್‌ನ ಎರಡನೇ ಫೋಟೋ ಉತ್ತರ ಪ್ರದೇಶದ ಬಿಜ್ನೂರ್‌ಗೆ ಸಂಬಂಧಿಸಿದ್ದಾಗಿದೆ. ಈ ಫೋಟೋವನ್ನು ಬಿಜ್ನೋರ್ ಪೊಲೀಸರು ಜುಲೈ 11, 2019ರಲ್ಲಿ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಬಿಜ್ನೋರ್‌ನ ಶೆರ್ಕೋಟ್ ಠಾಣೆಯ ಪೊಲೀಸರು ಮದ್ರಸಾವೊಂದರ ಮೇಲೆ ದಾಳಿ ಮಾಡಿದ್ದು, ಶಸ್ತ್ರಾಸ್ತ್ರ ಮಾರಾಟ ದಂಧೆಯನ್ನು ಬೇಧಿಸಿದ್ದಾರೆ ಎಂದು ಪೋಸ್ಟ್‌ನಲ್ಲಿ ತಿಳಿಸಲಾಗಿತ್ತು.

ಫೋಟೋ-3 :

ಸಮವಸ್ತ್ರ ಧರಿಸಿದ ಸಿಬ್ಬಂದಿ ಮಾತ್ರೆಗಳಿರುವ ಬಾಕ್ಸ್‌ಗಳನ್ನು ಪರಿಶೀಲಿಸುತ್ತಿರುವ ಎರಡು ಫೋಟೋಗಳನ್ನು ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹಂಚಿಕೊಳ್ಳಲಾಗಿದೆ. ಅವುಗಳ ಬಗ್ಗೆ ಮಾಹಿತಿ ಹುಡುಕಿದಾಗ, ಅದು “ಶ್ರೀಲಂಕಾದ ಕೊಲಂಬೋದಲ್ಲಿ ವಶಕ್ಕೆ ಪಡೆಯಲಾದ ಮಾದಕ ವಸ್ತುಗಳ ಫೋಟೋ ಎಂದು ತಿಳಿದು ಬಂದಿದೆ. ಈ ಫೋಟೋಗಳನ್ನು ಕಳೆದ ವರ್ಷ ತೆಗೆಯಲಾಗಿತ್ತು. ಡೈಲಿ ಮಿರರ್ ಆನ್‌ಲೈನ್ ಎಂಬ ಶ್ರೀಲಂಕಾ ಮಾಧ್ಯಮದ ಈ ಘಟನೆ ಕುರಿತು ವರದಿ ಮಾಡಿತ್ತು. ವರದಿಯಲ್ಲೂ ವೈರಲ್ ಆಗಿರುವ ಮಾತ್ರೆಗಳ ಫೋಟೋಗಳು ಇರುವುದನ್ನು ನೋಡಬಹುದು.

ನಾವು ನಡೆಸಿದ ಪರಿಶೀಲನೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಫೋಟೋ ಮತ್ತು ಮಾಹಿತಿ ಸಂಪೂರ್ಣ ಸುಳ್ಳು ಎಂಬುವುದು ತಿಳಿದು ಬಂದಿದೆ. ಮುಸ್ಲಿಮರ ವಿರುದ್ದ ದ್ವೇಷ ಹರಡುವ ಸಲುವಾಗಿ ಬೇರೆ ಬೇರೆ ಸಂದರ್ಭಗಳ ಫೋಟೋಗಳನ್ನು ಬಳಸಿ ಸುಳ್ಳು ಸುದ್ದಿ ಹಬ್ಬಲಾಗಿದೆ.

ಇದನ್ನೂ ಓದಿ : FACT CHECK : ಕೇರಳದ ಚರ್ಚ್‌ನಲ್ಲಿ ₹ 7 ಸಾವಿರ ಕೋಟಿ ಕಪ್ಪು ಹಣ ಪತ್ತೆಯಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...