Homeಫ್ಯಾಕ್ಟ್‌ಚೆಕ್FACT CHECK : 'ಭಾರತ್ ಮಾತಾ ಕಿ ಜೈ' ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು...

FACT CHECK : ‘ಭಾರತ್ ಮಾತಾ ಕಿ ಜೈ’ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹಿರಿಯ ವಯಸ್ಸಿನ ವ್ಯಕ್ತಿಯೊಬ್ಬರಿಗೆ ಯುವಕರ ಗುಂಪೊಂದು ಹಲ್ಲೆ ನಡೆಸುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಂಚಿಕೊಂಡಿರುವ ಹಲವರು “ಮುಂಬೈನಲ್ಲಿ ‘ಭಾರತ್ ಮಾತಾಕಿ ಜೈ’ ಎಂದು ಘೋಷಣೆ ಕೂಗಿದ್ದಕ್ಕೆ ಮುಸ್ಲಿಮರು ವೃದ್ದನಿಗೆ ಥಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಜುಲೈ 29,2024ರಂದು ತನ್ನ ಎಕ್ಸ್‌ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದ ಅನು ಅನಿತಾ (@Ani_Sanatani) ಎಂಬ ಬಳಕೆದಾರರು “ಭಾರತ ಮಾತೆಗೆ ಜೈ ಎನ್ನಲಾಗದ ಪರಿಸ್ಥಿತಿ. ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಇದು ಭಾರತದಲ್ಲಿನ ಜಿಹಾದಿ ಮುಸಲ್ಮಾನರ ಪ್ರದೇಶಗಳಲ್ಲಿ ಭಾರತ್ ಮಾತಾಕಿ ಜೈ ಎನ್ನಲಾಗದ ಪರಿಸ್ಥಿತಿ. ಇದು ಇಸ್ಲಾಮಿಕ್ ದೇಶ ಅಲ್ಲ. ಇದು ಭಾರತ್ ಮಾತಾಕಿ ಜೈ! ಹೇಳಿದ ಭಾರತದ ಒಬ್ಬ ದೇಶ ಭಕ್ತ ಮುದುಕನ ಪರಿಸ್ಥಿತಿ” ಎಂದು ಬರೆದುಕೊಂಡಿದ್ದರು.

ಜುಲೈ 31ರಂದು ಅದೇ ಇದೇ ವಿಡಿಯೋವನ್ನು ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ‘ಪ್ರಭಾಕರ್ ಭಟ್’ ಎಂಬವರು ” ಎಚ್ಚೆತ್ತುಕೊಳ್ಳಿ ಭಾರತೀಯರೇ.. ಒಬ್ಬ ರಾಷ್ಟ್ರೀಯವಾದಿ ವೃದ್ಧರು ಭಾರತ ಮಾತೆಗೆ ಜೈ ಎಂದಾಗ ಅವರನ್ನು ಹೊಡೆದು ಬಡಿದು ದೈಹಿಕ ಹಲ್ಲೆ ಮಾಡಿದ ಘಟನೆ ಮುಂಬೈನ ಭಿಂಡಿ ಬಜಾರ್‌ನಲ್ಲಿ ನಡೆದಿದೆ. ಮಹಾರಾಷ್ಟ್ರ ಪೋಲೀಸರು ಮತ್ತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಈ ಘಟನೆಯ ತನಿಖೆ ನಡೆಸಿ ಅಪರಾಧಿಗಳನ್ನು ಶಿಕ್ಷಿಸಬೇಕು” ಎಂದು ಬರೆಕೊಂಡಿದ್ದರು.

ಹಾಗಾದರೆ, ಸಾಮಾಜಿಕ ಜಾಲತಾಣ ಬಳಕೆದಾರರು ಮಾಡಿರುವ ಪ್ರತಿಪಾದನೆ ನಿಜಾನಾ? ಎಂದು ನೋಡೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಮುಂಬೈನ ಭಿಂಡಿ ಬಜಾರ್‌ನ ವಿಡಿಯೋ ಅಲ್ಲ. ಅಕ್ಟೋಬರ್ 15, 2019ರಂದು ರಾಜಸ್ಥಾನದ ಬಿಲ್ವಾರ ಜಿಲ್ಲೆಯಲ್ಲಿ ನಡೆದ ಘಟನೆಯದ್ದು ಎಂದು ಗೊತ್ತಾಗಿದೆ. ‘ವೃದ್ದರೊಬ್ಬರು ಬೀದಿಯಲ್ಲಿ ಹೋಗುತ್ತಿದ್ದವರನ್ನು ನಿಂದಿಸಿದ್ದಕ್ಕೆ ಸ್ಥಳೀಯರು ಥಳಿಸಿರುವುದಾಗಿ’ ಮಾಧ್ಯಮಗಳು ವರದಿ ಮಾಡಿವೆ.

ಬಿಲ್ವಾರದ ಆಝಾದ್ ಚೌಕ್ ಪ್ರದೇಶದಲ್ಲಿ ಘಟನೆ ನಡೆದಿದೆ. ಸ್ಥಳೀಯ ವ್ಯಾಪಾರಿಗಳು ವೃದ್ದನಿಗೆ ಥಳಿಸಿದ್ದಾರೆ ಎಂದು ಬಿಲ್ವಾರ ಎಸ್ಪಿ ಹರ್ಷೇಂದ್ರ ಕುಮಾರ್ ಹೇಳಿರುವುದಾಗಿ 2023ರ ಅಕ್ಟೋಬರ್ 12ರಂದು ದಿ ಕ್ವಿಂಟ್ ವರದಿ ಮಾಡಿತ್ತು.

2019ರಲ್ಲಿ ಸುಳ್ಳು ಮಾಹಿತಿಯೊಂದಿಗೆ ವಿಡಿಯೋ ಹರಿದಾಡುತ್ತಿದ್ದಾಗ ಕ್ವಿಂಟ್ ಅದರ ಸತ್ಯಾಸತ್ಯತೆ ಪರಿಶೀಲಿಸಿತ್ತು. ಆ ವೇಳೆ ಎಸ್ಪಿ ಹರ್ಷೇಂದ್ರ ಕುಮಾರ್ ಜೊತೆ ಮಾತನಾಡಿತ್ತು. ಆಗ ಎಸ್ಪಿ ಕೊಟ್ಟ ಪ್ರತಿಕ್ರಿಯೆಯನ್ನೇ 2023ರ ವರದಿಯಲ್ಲೂ ಉಲ್ಲೇಖಿಸಿತ್ತು.

2019ರಲ್ಲಿ ಸುಳ್ಳು ಸಂದೇಶದೊಂದಿಗೆ ಇದೇ ವಿಡಿಯೋ ವೈರಲ್ ಆದಾಗ, 19 ಅಕ್ಟೋಬರ್ 2019ರಂದು ದೆಹಲಿಯ ಮಾಜಿ ಶಾಸಕ ಹಾಗೂ ಬಿಜೆಪಿ ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಮಂಜಿಂದರ್ ಸಿಂಗ್ ಸಿರ್ಸಾ ಅವರು ಫೇಸ್‌ಬುಕ್‌ನಲ್ಲಿ ವಿಡಿಯೋ ಕುರಿತು ಬರೆದುಕೊಂಡಿದ್ದರು. ಅದರಲ್ಲಿ ಈ ಘಟನೆ ರಾಜಸ್ಥಾನದ ಆಝಾದ್ ಚೌಕ್‌ನಲ್ಲಿ ನಡೆದಿದೆ ಎಂದು ಅವರು ಉಲ್ಲೇಖಿಸಿದ್ದರು. 2019ರ ಸೆಪ್ಟೆಂಬರ್ 25ರಂದು ರಾಜಸ್ಥಾನದ ವಿಧಾನಸಭೆ ಚುನಾವಣೆಯ ಮತದಾನ ನಿಗದಿಯಾಗಿತ್ತು. ಅದಕ್ಕೂ ಮುನ್ನ ಅಕ್ಟೋಬರ್‌ನಲ್ಲಿ ಸುಳ್ಳು ಸಂದೇಶದೊಂದಿಗೆ ವಿಡಿಯೋ ವೈರಲ್ ಆಗಿತ್ತು.

ವೃದ್ದನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೋಜ್ ಅಲಿಯಾಸ್ ಸಿಂಧಿ (39) ಹೇಮಂತ್ ನಥಾನಿ (45), ಭಗವಾನ್ ದಾಸ್ (37), ಮಜೂರ್ ಶೇಖ್ (31) ಇರ್ಫಾನ್ (34) ಎಂಬವರ ಮೇಲೆ 20 ಅಕ್ಟೋಬರ್ 2019ರಂದು ಎಫ್‌ಐಅರ್ ಕೂಡ ದಾಖಲಾಗಿತ್ತು.

ನಾವು ನಡೆಸಿದ ಪರಿಶೀಲನೆಯಲ್ಲಿ , ವೈರಲ್ ವಿಡಿಯೋದಲ್ಲಿರುವ ಘಟನೆ ರಾಜಸ್ಥಾನದ ಬಿಲ್ವಾರ ಜಿಲ್ಲೆಯ ಆಝಾದ್ ಚೌಕ್ ಪ್ರದೇಶದಲ್ಲಿ 2019ರ ಅಕ್ಟೋಬರ್ 15ರಂದು ನಡೆದದ್ದು ಎಂದು ಗೊತ್ತಾಗಿದೆ. ವೃದ್ದರೊಬ್ಬರು ಜನರೊಂದಿಗೆ ಅನುಚಿತವಾಗಿ ವರ್ತಿಸಿದ್ದಕ್ಕೆ ಸ್ಥಳೀಯ ವ್ಯಾಪಾರಿಗಳು ಥಳಿಸಿದ್ದಾರೆ. ಈ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದರು. ಈ ಘಟನೆಯ ವಿಡಿಯೋವನ್ನು ಮುಂಬೈನ ಭಿಂಡಿ ಬಜಾರ್‌ನಲ್ಲಿ ಭಾರತ್ ಮಾತಾಕಿ ಜೈ ಎಂದ ವೃದ್ದನಿಗೆ ಮುಸ್ಲಿಮರು ಥಳಿಸಿದ್ದಾರೆ ಎಂದು ಸುಳ್ಳು ಮತ್ತು ಕೋಮುದ್ವೇಷ ಪೂರಿತ ಸಂದೇಶದೊಂದಿಗೆ ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಶಿಬಿರದ ಮೇಲೆ ಮುಸ್ಲಿಮರಿಂದ ಬಾಂಬ್ ದಾಳಿ ಎಂದು ಸುಳ್ಳು ಸುದ್ದಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...