Homeಫ್ಯಾಕ್ಟ್‌ಚೆಕ್FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಹೈದರಾಬಾದ್‌ನಲ್ಲಿ ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಸಂಗೊಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಹರಿದಾಡುತ್ತಿದೆ.

ವಿಡಿಯೋದಲ್ಲಿ ದುರ್ಗಾ ಮೂರ್ತಿಯ ಕೈ ಸೇರಿದಂತೆ ಕೆಲ ಭಾಗಗಳು ಮುರಿದಿರುವುದು ಮತ್ತು ಸುತ್ತಮುತ್ತ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ನೋಡಬಹುದು.

ಅರುಣ್ ಕುಮಾರ್ ಹಿಂದೂ (@arukumrhin11669)ಎಂಬ ಎಕ್ಸ್‌ ಬಳಕೆದಾರ ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ.. ಇದು ಹೈದರಾಬಾದ್. ಹೈದರಾಬಾದ್‌ನಲ್ಲಿ ಮಾತೆ ದುರ್ಗಾ ಮೂರ್ತಿ ಧ್ವಂಸ ಮಾಡಿದ ಜಿಹಾದಿ ಮುಸ್ಲಿಮರು. ಗಣೇಶನ ಮೂರ್ತಿ ಆಯಿತು ಈಗ ದುರ್ಗಾ ಮೂರ್ತಿ.. ಹಿಂದೂಗಳೆ ಇನ್ನಾದರು ಎಚ್ಚೆತ್ತುಕೊಳ್ಳಿ ಇಲ್ಲದಿದ್ದರೆ ಸನಾತನ ಧರ್ಮ ನಾಶ ನಿಶ್ಚಿತ” ಎಂದು ಬರೆದುಕೊಂಡಿದ್ದರು.

ಶ್ರೇಯಾ ಸನಾತನಿ (@Shreya_Sanatani) ಎಂಬವರು ಅಕ್ಟೋಬರ್ 12ರಂದು ವಿಡಿಯೋ ಹಂಚಿಕೊಂಡು ” ಇದು ಎಲ್ಲೋ ದೂರದ ಪಾಕಿಸ್ತಾನ ಮತ್ತು ಪಕ್ಕದ ಬಾಂಗ್ಲಾದೇಶದಲ್ಲಿ ನಡೆದಿರುವ ಘಟನೆ ಅಲ್ಲವೇ ಅಲ್ಲ. ನಮ್ಮ ಪಕ್ಕದ ಕಾಂಗ್ರೆಸ್ ಆಡಳಿತದ ತೆಲಂಗಾಣದ ಹೈದರಾಬಾದ್ ನಗರದಲ್ಲಿ…ದುರ್ಗಾ ಮಾತೆಯನ್ನ ಧ್ವಂಸ ಮಾಡಿದ್ದಾರೆ” ಎಂದು ಬರೆದುಕೊಂಡಿದ್ದರು.

ಸುಳ್ಳು, ಕೋಮು ದ್ವೇಷದ ಸುದ್ದಿಗಳನ್ನು ಹಬ್ಬಿಸುವುದರಲ್ಲಿ ಕುಖ್ಯಾತಿ ಪಡೆದಿರುವ ಬಲಪಂಥೀಯ ಎಕ್ಸ್ ಬಳಕೆದಾರ ರೌಶನ್ ಸಿನ್ಹಾ ಅಥವಾ ಮಿ.ಸಿನ್ಹಾ (@MrSinha_) ಅಕ್ಟೋಬರ್ 11ರಂದು ವಿಡಿಯೋ ಹಂಚಿಕೊಂಡು “ಅತಿರೇಕ: ಹೈದರಾಬಾದ್‌ನಲ್ಲಿ ಮಾತೆ ದುರ್ಗೆಯ ಮೂರ್ತಿ ಧ್ವಂಸಗೊಳಿಸಲಾಗಿದೆ. ಇದು ಪಾಕಿಸ್ತಾನದ ಹೈದರಾಬಾದ್ ಅಲ್ಲ, ಕಾಂಗ್ರೆಸ್ ಆಡಳಿತ ಭಾರತದ ಹೈದರಾಬಾದ್” ಎಂದು ಬರೆದುಕೊಂಡಿದ್ದರು.

ಹಾಗಾದರೆ, ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿರುವುದು ನಿಜಾನಾ? ಎಂದು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ, ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್ (ವಸ್ತು ಪ್ರದರ್ಶನ ಮೈದಾನ) ನಲ್ಲಿ ಸ್ಥಾಪಿಸಿದ್ದ ದುರ್ಗಾ ಮೂರ್ತಿಗೆ ಹಾನಿ ಮಾಡಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಈ ಕುರಿತು ಅಕ್ಟೋಬರ್ 11ರಂದು ವರದಿ ಪ್ರಕಟಿಸಿದ್ದ ತೆಲಂಗಾಣ ಟುಡೇ ಸುದ್ದಿ ವೆಬ್‌ಸೈಟ್ “ಹೈದರಾಬಾದ್‌ನ ನಾಂಪಲ್ಲಿಯ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಬೇಗಂ ಬಝಾರ್ ಪೊಲೀಸರು ಬೇಧಿಸಿದ್ದು, ಆರೋಪಿ ನಾಗರ್‌ಕರ್ನೂಲ್ ಜಿಲ್ಲೆಯ ಕೃಷ್ಣಯ್ಯ ಗೌಡ್ ಎಂಬಾತನನ್ನು ಬಂಧಿಸಿದ್ದಾರೆ” ಎಂದು ತಿಳಿಸಿತ್ತು.

“ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ವಲಯ ಡಿಸಿಪಿ ಅಕ್ಷಾಂಶ್ ಯಾದವ್, ಕೃಷ್ಣಯ್ಯಗೌಡ್‌ ಮಾನಸಿಕ ಸ್ಥಿತಿ ಸ್ಥಿರವಾಗಿಲ್ಲ ಮತ್ತು ಅವರು ಹಸಿದಿದ್ದರು. ಹಾಗಾಗಿ, ಆಹಾರಕ್ಕಾಗಿ ದುರ್ಗಾ ಮೂರ್ತಿಯ ಬಳಿ ದಾಂಧಲೆ ನಡೆಸಿದ್ದಾರೆ” ಎಂದು ವಿವರಿಸಿದ್ದಾಗಿ ಹೇಳಿತ್ತು.

ಸಿಯಾಸತ್ ಡೈಲಿ‘ ಮತ್ತೊ ‘ಇಂಡಿಯಾ ಟುಡೇ‘ ಅಕ್ಟೋಬರ್ 12ರಂದು ಪ್ರಕಟಿಸಿದ್ದ ವರದಿಯಲ್ಲೂ ಇದೇ ವಿಷಯವನ್ನು ಹೇಳಲಾಗಿತ್ತು. ಆದ್ದರಿಂದ, ದುರ್ಗಾ ಮೂರ್ತಿಯನ್ನು ಮುಸ್ಲಿಮರು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...