Homeಫ್ಯಾಕ್ಟ್‌ಚೆಕ್FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

FACT CHECK : ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ಮಾಡಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯದವರು ರಸ್ತೆ ಮಧ್ಯೆಯೇ ಬಹಿರಂಗವಾಗಿ ಗೋಹತ್ಯೆ ಮಾಡಿದ್ದಾರೆ” ಎಂದು ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಜೀಪ್‌ ಒಂದರ ಮುಂಭಾಗದಲ್ಲಿ ಹಸುವಿನ ಕಳೇಬರ ಕಟ್ಟಿದಂತೆ ಕಾಣುತ್ತಿದೆ.

ಫ್ಯಾಕ್ಟ್‌ಚೆಕ್ : ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಅದಕ್ಕೂ ಮುನ್ನ ವಿಡಿಯೋವನ್ನು ಸರಿಯಾಗಿ ಗಮನಿಸಿದ್ದೇವೆ. ಈ ವೇಳೆ ಜೀಪ್ ಮುಂಭಾಗ ಫಾರೆಸ್ಟ್‌ ಎಂದು ಬರೆದಿರುವುದು ಮತ್ತು ಹಸುವಿನ ಕಳೇಬರದ ಮೇಲೆ ಶ್ರದ್ದಾಂಜಲಿ ಅರ್ಪಿಸಿದಂತೆ ಹೂವು ಹಾಕಿರುವುದು ಮತ್ತು ಜೀಪ್‌ ಹಿಂಭಾಗದ ಕಟ್ಟಡದ ಮೇಲೆ ಮಳಯಾಲಂ ಭಾಷೆಯಲ್ಲಿ ಬೋರ್ಡ್ ಹಾಕಿರುವುದು ನಾವು ನೋಡಿದ್ದೇವೆ.

ಈ ಅಂಶಗಳ ಆಧಾರದಲ್ಲಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ 17 ಫೆಬ್ರವರಿ 2024ರಂದು ಆಂಗ್ಲ ಭಾಷೆಯ ಫ್ರೀ ಪ್ರೆಸ್ ಜರ್ನಲ್ ಪ್ರಕಟಿಸಿದ್ದ ಸುದ್ದಿಯೊಂದು ದೊರೆತಿದೆ. “Video: Angry Mob Ties Dead Cow Over Forest Department Jeep In Protest Against Wild Animal Attacks In Kerala’s Wayanad” ಎಂಬ ಶೀರ್ಷಿಕೆಯ ಸುದ್ದಿಯಲ್ಲಿ, ‘ಕೇರಳದ ವಯನಾಡಿನಲ್ಲಿ ಮಾನವ-ಪ್ರಾಣಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ನೀಡುವಂತೆ ಆಗ್ರಹಿಸಿ ಆಡಳಿತಾರೂಢ ಎಲ್‌ಡಿಎಫ್, ಪ್ರತಿಪಕ್ಷ ಯುಡಿಎಫ್ ಮತ್ತು ಬಿಜೆಪಿ ಜಿಲ್ಲಾದ್ಯಂತ ಕರೆ ನೀಡಿರುವ ಹರತಾಳ ಶನಿವಾರ ಪುಲ್ಪಲ್ಲಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಅರಣ್ಯ ಇಲಾಖೆಯ ವಾಹನಕ್ಕೆ ಹಾನಿ ಮಾಡಿ, ಹುಲಿ ದಾಳಿಯಿಂದ ಮೃತಪಟ್ಟಿದೆ ಎನ್ನಲಾದ ಹಸುವಿನ ಕಳೇಬರವನ್ನು ಅದಕ್ಕೆ ಕಟ್ಟಿದ್ದಾರೆ’ ಎಂದು ಹೇಳಲಾಗಿದೆ.

ಫೆಬ್ರವರಿ 17,2024ರಂದು ಆನ್‌ ಮನೋರಮಾ ಈ ಕುರಿತು ವರದಿ ಪ್ರಕಟಿಸಿತ್ತು, ವರದಿಯಲ್ಲಿ “ಪ್ರತಿಭಟನಾಕಾರರು ಅರಣ್ಯ ಇಲಾಖೆ ವಾಹನದ ಮೇಲೆ ದಾಳಿ ನಡೆಸಿದ್ದು, ಅದರ ಚಕ್ರದ ಗಾಳಿಯನ್ನು ತೆಗೆದು ಟಾಪ್‌ ಹರಿದಿದ್ದಾರೆ. ಹುಲಿ ದಾಳಿಗೆ ಬಲಿಯಾದ ಹಸುವಿನ ಕಳೇಬರವನ್ನು ಜೀಪಿನ ಬಾನೆಟ್‌ ಮೇಲೆ ಕಟ್ಟಿದ್ದರು. ಈ ಘಟನೆಯಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾದ ಕಾರಣ ಪೋಲಿಸರು ಎರಡು ಬಾರಿ ಲಾಠಿ ಚಾರ್ಜ್ ನಡೆಸಿದ್ದು, ಉದ್ರಿಕ್ತರ ಗುಂಪು ಅಂಗಡಿಗಳ ಮೇಲೆ ದಾಳಿ ನಡೆಸಿದೆ. ಪುಲ್ಪಲ್ಲಿ ನಗರದಲ್ಲಿ ಅಧಿಕಾರಿಗಳ ಮೇಲೆ ಹಲ್ಲೆಗೆ ಮುಂದಾಗಿದೆ” ಎಂದು ಹೇಳಲಾಗಿದೆ.

ಫೆಬ್ರವರಿ 18,2024ರಂದು ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‘ Wayanad human-wildlife conflict: Anger boils over as protests spill onto streets in Pulpally ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ “ಶುಕ್ರವಾರ ಕಾಡಾನೆ ದಾಳಿಯಲ್ಲಿ ಅರಣ್ಯ ಇಲಾಖೆ ವೀಕ್ಷಕ ವಿ ಪಿ ಪೌಲ್ ಸಾವನ್ನಪ್ಪಿದ್ದನ್ನು ಖಂಡಿಸಿ ರಾಜಕೀಯ ಬೇಧವಿಲ್ಲದೆ ನೂರಾರು ಜನರು ಶನಿವಾರ ಪುಲ್ಪಲ್ಲಿಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಆಕ್ರೋಶಗೊಂಡ ಗುಂಪೊಂದು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ದೃಶ್ಯಗಳಿಗೆ ಪುಲ್ಪಲ್ಲಿ ಪಟ್ಟಣ ಸಾಕ್ಷಿಯಾಯಿತು. ಜನಸಂದಣಿಯು ಅರಣ್ಯ ಇಲಾಖೆಯ ಜೀಪ್ ಅನ್ನು ಅಡ್ಡಗಟ್ಟಿ ಹಾನಿಗೊಳಿಸಿದಾಗ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಯಿತು. ಮೂಡನಕೊಲ್ಲಿಯಲ್ಲಿ ಹುಲಿ ದಾಳಿಯಿಂದ ಹತ್ಯೆಯಾದ ಹಸುವಿನ ಕಳೇಬರವನ್ನು ತಂದು ಜೀಪಿನ ಬಾನೆಟ್ ಮೇಲೆ ಕಟ್ಟಿದ್ದರು ಎಂದಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ, ‘ಕೇರಳದ ವಯನಾಡಿನಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ವಿವಿಧ ರಾಜಕೀಯ ಪಕ್ಷಗಳ ನೇತೃತ್ವದಲ್ಲಿ ಸಾರ್ವಜನಿಕರು ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ವೇಳೆ ಹುಲಿ ದಾಳಿಯಿಂದ ಸಾವನ್ನಪ್ಪಿದ್ದ ಹಸುವಿನ ಕಳೇಬರವನ್ನು ಅರಣ್ಯ ಇಲಾಖೆಯ ಜೀಪಿನ ಬಾನೆಟ್‌ಗೆ ಕಟ್ಟಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ, ಇದು ಕರ್ನಾಟಕದಲ್ಲಿ ಮುಸ್ಲಿಮರು ರಸ್ತೆ ಮಧ್ಯೆ ಗೋಹತ್ಯೆ ನಡೆಸಿದ ವಿಡಿಯೋ ಅಲ್ಲ.

ಇದನ್ನೂ ಓದಿ : FACT CHECK : ಬಸವಣ್ಣ ಪ್ರತಿಮೆ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಕಡಿತಗೊಳಿಸಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...