Homeಫ್ಯಾಕ್ಟ್‌ಚೆಕ್FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು...

FACT CHECK : ಬಾಂಗ್ಲಾದಲ್ಲಿ ಮುಸ್ಲಿಮರು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿ ನೇತು ಹಾಕಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ರಾಜಕೀಯ ಅರಾಜಕತೆಯ ನಡುವೆ, ಅಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳನ್ನು ಗುರಿಯಾಗಿಸಿ ಮುಸ್ಲಿಮರು ದಾಳಿ ಮಾಡುತ್ತಿದ್ದಾರೆ ಎಂದು ಪ್ರತಿಪಾದಿಸಿ ಅನೇಕ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಇತ್ತೀಚಿನ ವೈರಲ್ ವಿಡಿಯೋವೊಂದರಲ್ಲಿ “ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ, ಮೃತದೇಹವನ್ನು ಪ್ರತಿಮೆಯೊಂದಕ್ಕೆ ನೇತುಹಾಕಿ ಘೋಷಣೆಗಳನ್ನು ಕೂಗುವ ದೃಶ್ಯವಿದೆ. ಇದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅನೇಕರು “ಬಾಂಗ್ಲಾದೇಶದಲ್ಲಿ ಹಿಂದೂ ವೃದ್ದರೊಬ್ಬರನ್ನು ಹತ್ಯೆ ಮಾಡಿ ಪ್ರತಿಮೆಗೆ ನೇತು ಹಾಕಿದ ಇಸ್ಲಾಮಿಸ್ಟ್‌ಗಳು ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಈ ಹಿಂದೆ ನಾವು ಅನೇಕ ಬಾರಿ ಉಲ್ಲೇಖಿಸಿರುವ ಸುಳ್ಳು ಮತ್ತು ಕೋಮು ವೈಷಮ್ಯದ ಸುದ್ದಿಗಳನ್ನು ಹರಡುವ ಎಕ್ಸ್‌ ಬಳಕೆದಾರ ಮಿ.ಸಿನ್ಹಾ(MrSinha_) ವಿಡಿಯೋ ಹಂಚಿಕೊಂಡು ಮೇಲಿನಂತೆ ಬರೆದುಕೊಂಡಿದ್ದಾರೆ.

ದೀಪಕ್ ಶರ್ಮಾ (@SonOfBharat7) ಎಂಬ ಮತ್ತೋರ್ವ ಎಕ್ಸ್ ಪ್ರೀಮಿಯಂ ಬಳಕೆದಾರ ಕೂಡ ವಿಡಿಯೋ ಹಂಚಿಕೊಂಡು ಅದೇ ರೀತಿ ಬರೆದುಕೊಂಡಿದ್ದಾರೆ.

ಇವರಿಬ್ಬರೇ ಅಲ್ಲದೆ, ಇನ್ನೂ ಅನೇಕ ಎಕ್ಸ್ ಬಳಕೆದಾರರು ವಿಡಿಯೋ ಹಂಚಿಕೊಂಡು “ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿ ನೇತು ಹಾಕಿದ್ದಾಗಿ” ಆರೋಪಿಸಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆ ತಿಳಿಯಲು ವೈರಲ್ ವಿಡಿಯೋ ಕುರಿತ ಮಾಹಿತಿಯನ್ನು ನಾವು ಹುಡುಕಾಡಿದ್ದೇವೆ. ಈ ವೇಳೆ ಖ್ಯಾತ ಫ್ಯಾಕ್ಟ್‌ಚೆಕ್ ವೆಬ್‌ಸೈಟ್ ಆಲ್ಟ್ ನ್ಯೂಸ್ ಈ ಕುರಿತು ಸುದ್ದಿ ಪ್ರಕಟಿಸಿರುವುದು ಕಂಡು ಬಂದಿದೆ.

ಆಲ್ಟ್‌ ನ್ಯೂಸ್ ಸುದ್ದಿಯಲ್ಲಿ “ನಾವು ವೈರಲ್ ವಿಡಿಯೋ ಕುರಿತು ಬಾಂಗ್ಲಾದೇಶದ ಪತ್ರಕರ್ತರ ಜೊತೆ ಮಾತನಾಡಿದ್ದೇವೆ. ಅವರು ವಿಡಿಯೋದಲ್ಲಿರುವ ವ್ಯಕ್ತಿ ‘ಶಾಹಿದುಲ್ ಇಸ್ಲಾಂ ಹಿರಾನ್’ ಎಂದು ತಿಳಿಸಿದ್ದಾಗಿ ಹೇಳಲಾಗಿದೆ.

ವರದಿ ಆಧರಿಸಿ ನಾವು ಶಾಹಿದುಲ್ ಇಸ್ಲಾಂ ಕುರಿತು ಮಾಹಿತಿ ಹುಡುಕಿದ್ದೇವೆ. ಈ ವೇಳೆ “75 ವರ್ಷ ವಯಸ್ಸಿನ ಶಾಹಿದುಲ್ ಇಸ್ಲಾಂ ಅವರು ನೈಋತ್ಯ ಬಾಂಗ್ಲಾದೇಶದ ಜೆನೈದಾ ಪ್ರದೇಶದ ಅವಾಮಿ ಲೀಗ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದು, ಅವರನ್ನು ಮತ್ತು ಅವರ ಚಾಲಕ ಅಖ್ತರ್ ಹುಸೈನ್ ಅನ್ನು ಇರಿದು ಹತ್ಯೆ ಮಾಡಿ ಬಳಿಕ ಸುಟ್ಟು ಹಾಕಲಾಗಿದೆ ಎಂಬ ವರದಿಗಳು ಲಭ್ಯವಾಗಿದೆ.

ಢಾಕಾ ಪೋಸ್ಟ್ ಸುದ್ದಿ ವೆಬ್‌ಸೈಟ್‌ನ ವರದಿಯ ಪ್ರಕಾರ, ಆಗಸ್ಟ್ 5ರಂದು ಪ್ರತಿಭಟನಾಕಾರರು ಶಾಹಿದುಲ್ ಇಸ್ಲಾಂ ಹಿರಾನ್ ಅವರ ಮನೆಗೆ ದಾಳಿ ನಡೆಸಿದ್ದರು. ಈ ವೇಳೆ ಆತ್ಮರಕ್ಷಣೆಗೆ ಹಿರಾನ್ ಅವರು ಜನರ ಗುಂಪಿನ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದ ಕೆಲವರು ಗಾಯಗೊಂಡಿದ್ದರು. ಬಳಿಕ ಜನರ ಗುಂಪು ಹಿರಾನ್ ಅವರ ಮನೆಗೆ ಬೆಂಕಿ ಹಚ್ಚಿದೆ ಮತ್ತು ಹಿರಾನ್ ಅವರ ಚಾಲಕ ಅಖ್ತರ್ ಅವರನ್ನು ಗಾಯಗೊಳಿಸಿದೆ. ಅಖ್ತರ್ ಅವರನ್ನು ಬಳಿಕ ಆಸ್ಪತ್ರೆಗೆ ಕರೆದೊಯ್ದರೂ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಇನ್ನು ಗುಂಪು ದಾಳಿಯ ವೇಳೆ ಹಿರಾನ್ ಅವರು ಮನೆಯ ಮೂರನೇ ಮಹಡಿಯಲ್ಲಿ ಸಿಲುಕಿಕೊಂಡಿದ್ದರು. ಮನೆಗೆ ಬೆಂಕಿ ಹಚ್ಚಿದ್ದರಿಂದ ಅವರು ಅಲ್ಲೇ ಸಜೀವ ದಹನವಾಗಿದ್ದಾರೆ. ಬಳಿಕ ಗುಂಪು ಮನೆಯ ಬಾಗಿಲು ಒಡೆದು ಹಿರಾನ್ ಅವರ ಮೃತದೇಹವನ್ನು ಹೊರತಂದಿದೆ. ಅದನ್ನು ಢಾಕಾ ನಗರ ಹೃದಯ ಭಾಗದ ಪೈರಾ ಚತ್ತರ್ ಎಂಬಲ್ಲಿ ಪ್ರತಿಮೆಗೆ ನೇತುಹಾಕಿ ಘೋಷಣೆಗಳನ್ನು ಕೂಗಿದೆ.

ಯೂಟ್ಯೂಬ್ ಚಾನೆಲ್‌ವೊಂದರಲ್ಲಿ ಈ ಕುರಿತು ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲಿ ಹತ್ಯೆ ಮಾಡಿ ನೇತುಹಾಕಿರುವುದು ಅವಾಮಿ ಲೀಗ್ ಪಕ್ಷದ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನು ಎಂದು ಹೇಳಲಾಗಿದೆ. ವಿಡಿಯೋ ಲಿಂಕ್ ಇಲ್ಲಿದೆ.

ನಮ್ಮ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ಬಾಂಗ್ಲಾದಲ್ಲಿ ಪ್ರತಿಭಟನಾಕಾರರು ಹತ್ಯೆ ಮಾಡಿ ನೇತು ಹಾಕಿರುವುದು ಅವಾಮಿ ಲೀಗ್ ನಾಯಕ ಶಾಹಿದುಲ್ ಇಸ್ಲಾಂ ಹಿರಾನ್ ಅವರನ್ನೇ ಹೊರತು, ಯಾವುದೇ ಹಿಂದೂ ವ್ಯಕ್ತಿಯನ್ನಲ್ಲ. ಇದೊಂದು ರಾಜಕೀಯ ವೈಷಮ್ಯದ ಕೃತ್ಯವಾಗಿದೆ. ಅಲ್ಲದೆ ಹಿಂದೂ ವ್ಯಕ್ತಿಯನ್ನು ಮುಸ್ಲಿಮರು ಹತ್ಯೆ ಮಾಡಿರುವ ಕೋಮು ಘಟನೆಯಲ್ಲ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಪ್ರತಿಪಾದನೆ ಸುಳ್ಳಾಗಿದೆ.

ಇದನ್ನೂ ಓದಿ : FACT CHECK : ಬಾಂಗ್ಲಾದಲ್ಲಿ ಹಿಂದೂ ಕ್ರಿಕೆಟಿಗನ ಮನೆಗೆ ಬೆಂಕಿ ಹಚ್ಚಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...