HomeದಿಟನಾಗರFACT CHECK : ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎನ್ನುವುದು...

FACT CHECK : ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎನ್ನುವುದು ಸುಳ್ಳು

- Advertisement -
- Advertisement -

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಮನೆಗೆ ಯಾವುದೇ ಕಾಂಗ್ರೆಸ್ ನಾಯಕರು ಭೇಟಿ ಕೊಟ್ಟಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಲಾಗಿದೆ.

Amitabh Chaudhary (@MithilaWaala) ಎಂಬ ಎಕ್ಸ್ ಬಳಕೆದಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಹಾ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿರುವ ವಿಡಿಯೋ ಹಂಚಿಕೊಂಡಿದ್ದು, “ಜೆಪಿ ನಡ್ಡಾ ಅವರ ಬಳಿಕ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ನೇಹಾ ಮನೆಗೆ ಭೇಟಿ ನೀಡಿ, ಕಾಂಗ್ರೆಸ್ ಕೌನ್ಸಿಲರ್ ಆಗಿರುವ ನೇಹಾಳ ತಂದೆ ನಿರಂಜನ್ ಹಿರೇಮಠ್ ಅವರನ್ನು ಭೇಟಿಯಾಗಿದ್ದಾರೆ.”

“ಆದರೆ, ಕಾಂಗ್ರೆಸ್‌ನ ಒಬ್ಬನೇ ಒಬ್ಬ ವ್ಯಕ್ತಿ ನೇಹಾ ಮನೆಗೆ ಭೇಟಿ ನೀಡಿಲ್ಲ. ಪ್ರಿಯಾಂಕಾ ಗಾಂಧಿ ರಾಜಕೀಯ ರ್‍ಯಾಲಿಗಾಗಿ ಕರ್ನಾಟಕಕ್ಕೆ ಬಂದಿದ್ದರು. ಆದರೆ ತಮ್ಮದೇ ಪಕ್ಷದ ನಾಯಕರಾಗಿರುವ ದುಃಖತಪ್ತ ತಂದೆಯನ್ನು ಭೇಟಿ ಮಾಡಲು ಅವರು ಮುಂದಾಗಿಲ್ಲ”

“ಮುಸ್ಲಿಂ ಓಲೈಕೆಗಾಗಿ ಕಾಂಗ್ರೆಸ್ ಅತ್ಯಂತ ಕೆಳಮಟ್ಟಕ್ಕೆ ಇಳಿದಿದೆ” ಎಂದು ಬರೆದುಕೊಂಡಿದ್ದಾರೆ.

ಪೋಸ್ಟ್ ಲಿಂಕ್ ಇಲ್ಲಿದೆ 

Politicspedia(@Politicspedia23) ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ವಿಡಿಯೋ ಮತ್ತು ಬರಹ ಹಂಚಿಕೊಳ್ಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

Sunanda Roy(@SaffronSunanda)ಎಂಬ 63,200 ಫಾಲೋವರ್ಸ್‌ ಇರುವ ಎಕ್ಸ್ ಖಾತೆಯಲ್ಲೂ ಮೇಲ್ಗಡೆ ಉಲ್ಲೇಖಿಸಿದ ವಿಡಿಯೋ ಮತ್ತು ಬರಹ ಹಂಚಿಕೊಳ್ಳಲಾಗಿದೆ. ಈ ಪೋಸ್ಟ್ ಬರೋಬ್ಬರಿ 1,13, 000 ಜನರಿಗೆ ತಲುಪಿದೆ.

ಪೋಸ್ಟ್ ಲಿಂಕ್ ಇಲ್ಲಿದೆ 

ಫ್ಯಾಕ್ಟ್‌ಚೆಕ್ : ಎಕ್ಸ್ ಪೋಸ್ಟ್‌ನಲ್ಲಿ ಉಲ್ಲೇಖಿಸಿದ ವಿಷಯ ಸಂಪೂರ್ಣ ಸುಳ್ಳಾಗಿದೆ. ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವರಾದ ಹೆಚ್‌.ಕೆ ಪಾಟೀಲ್, ಲಕ್ಷೀ ಹೆಬ್ಬಾಳ್ಕರ್ ಸೇರಿದಂತೆ ಅನೇಕರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಸಚಿವ ಸಂತೋಷ್ ಲಾಡ್ ಅವರು ನೇಹಾ ಹತ್ಯೆಯಾದ ಮರುದಿನ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಕುಟಂಬಸ್ಥರಿಗೆ ಸಮಾಧಾನ ಹೇಳಿದ್ದರು.

ನೇಹಾ ಹತ್ಯೆಯಾಗಿರುವುದು ಏಪ್ರಿಲ್ 18ರಂದು ಸಂಜೆಯ ಹೊತ್ತಿಗೆ. ಮರುದಿನ ಬೆಳಿಗ್ಗೆ ನೇಹಾಳ ಮೃತದೇಹವಿದ್ದ ಕಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ಸಚಿವ ಸಂತೋಷ್ ಲಾಡ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು “ನೇಹಾಳ ಹತ್ಯೆಯಂತಹ ಪ್ರಕರಣಗಳಲ್ಲಿ ಅಪರಾಧಿಯನ್ನು ಎನ್‌ಕೌಂಟರ್ ಮಾಡುವಂತಹ ಕಾನೂನು ತರಬೇಕು” ಎಂದು ಹೇಳಿದ್ದರು.

ಏಪ್ರಿಲ್ 20ರಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಅವರು ನೇಹಾ ಮನೆಗೆ ಭೇಟಿ ಕೊಟ್ಟು ಪೋಷಕರಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 23ರಂದು ಸಚಿವ ಹೆಚ್‌.ಕೆ ಪಾಟೀಲ್ ಅವರು ಭೇಟಿ ನೀಡಿ ತಂದೆ-ತಾಯಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 24ರಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ನೇಹಾ ಮನೆಗೆ ಭೇಟಿ ಕೊಟ್ಟು ಪೋಷಕರಿಗೆ ಸಾಂತ್ವನ ಹೇಳಿದ್ದರು.

ಏಪ್ರಿಲ್ 25ರಂದು ಸಿಎಂ ಸಿದ್ದರಾಮಯ್ಯ ಅವರು ನೇಹಾ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, “ನೇಹಾ ಹಿರೇಮಠ್ ಕೊಲೆ ಅತ್ಯಂತ ದುರದೃಷ್ಟಕರ. ತ್ವರಿತ ವಿಚಾರಣೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಜೊತೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸಿ, ಪ್ರತ್ಯೇಕ ವಿಚಾರಣೆ ಮಾಡಿ ಅಪರಾಧಿಗೆ ಕಠಿಣ ಶಿಕ್ಷೆ ಕೊಡಿಸಲು ಸರ್ಕಾರ ಬದ್ದವಾಗಿದೆ” ಎಂದಿದ್ದರು.

ಇವಿಷ್ಟೇ ಅಲ್ಲದೆ, ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಆನಂದ್ ಅಸೂಟಿ, ಹುಬ್ಬಳ್ಳಿ-ಧಾರವಾಡ ಜಿಲ್ಲಾ ಕಾಂಗ್ರೆಸ್ ಮುಖಂಡರು ಸೇರಿದಂತೆ ಅನೇಕರು ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ. ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವುದಾಗಿ ಹೇಳಿದೆ. ಹಾಗಾಗಿ, ಯಾವುದೇ ಕಾಂಗ್ರೆಸ್ ನಾಯಕರು ನೇಹಾ ಹಿರೇಮಠ್ ಮನೆಗೆ ಭೇಟಿ ನೀಡಿಲ್ಲ ಎಂಬುವುದು ಸುಳ್ಳು.

ಇದನ್ನೂ ಓದಿ : FACT CHECK : ಕರ್ನಾಟಕದಲ್ಲಿ ಇವಿಎಂ ಕಂಟ್ರೋಲ್ ಯೂನಿಟ್‌ಗೆ ಹಾನಿ ಮಾಡಿರುವ ವಿಡಿಯೋ ಹಳೆಯದು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...