Homeಫ್ಯಾಕ್ಟ್‌ಚೆಕ್FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭ ಕಾಶ್ಮೀರದ ಶ್ರೀನಗರದಲ್ಲಿ ಅಪರಿಚಿತ ವ್ಯಕ್ತಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದಾರೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲವು ಮುಸ್ಲಿಂ ಹೆಸರುಗಳನ್ನೊಳಗೊಂಡ ಖಾತೆಗಳಿಂದ ಪೋಸ್ಟ್‌ಗಳನ್ನು ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯಂತೆ ಭಾರತದ 78ನೇ ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಿದ ಬಗ್ಗೆ ಯಾವುದೇ ವಿಶ್ವಾಸಾರ್ಹ ಮಾಧ್ಯಮಗಳು ಅಥವಾ ಸ್ಥಳೀಯ ಮೂಲಗಳು ವರದಿ ಮಾಡಿರುವುದು ನಮಗೆ ಲಭ್ಯವಾಗಿಲ್ಲ.

ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾದ ಫೋಟೋವನ್ನು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, ಅದು 2019ರ ಹಳೆಯ ಫೋಟೋ ಎಂದು ತಿಳಿದು ಬಂದಿದೆ. ಇದೇ ಚಿತ್ರವನ್ನು ಈ ಹಿಂದೆ ಪಾಕಿಸ್ತಾನಿ ಮಾಧ್ಯಮಗಳು ಮತ್ತು ಟ್ವಿಟರ್ ಬಳಕೆದಾರರು 2019ರಲ್ಲಿ ಹಂಚಿಕೊಂಡ ಮಾಹಿತಿ ಲಭ್ಯವಾಗಿದೆ. ಈಗ ಮತ್ತೆ ಅದೇ ಫೋಟೋವನ್ನು 78ನೇ ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ ಎಂಬ ಸುಳ್ಳು ನಿರೂಪಣೆಯೊಂದಿಗೆ ಹಂಚಿಕೊಂಡಿರುವುದು ಸ್ಪಷ್ಟವಾಗುತ್ತದೆ  ಎಂದು DFRAC ಪತ್ತೆ ಮಾಡಿದೆ.

ಕೆಲವು ಪಾಕಿಸ್ತಾನಿ ಖಾತೆಗಳು ಮಾಡಿದ ಪ್ರತಿಪಾದನೆಗೆ ವ್ಯತಿರಿಕ್ತವಾಗಿ, ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದ (POJK)ರಾವಲಕೋಟ್‌ನಲ್ಲಿ ಪ್ರತಿಭಟನಾಕಾರರು ಪಾಕಿಸ್ತಾನದ ಧ್ವಜವನ್ನು ತೆಗೆದು ಭಾರತೀಯ ತ್ರಿವರ್ಣ ಧ್ವಜವನ್ನು ಹಾರಿಸಿದ ಇತ್ತೀಚಿನ ವರದಿಗಳಿವೆ. ಹಾಗಾಗಿ ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ನಿರೂಪಣೆಗೊಂಡ ಪೋಸ್ಟ್‌ಗಳಿಗಿಂತ ಭಿನ್ನವಾಗಿದೆ.

ಒಟ್ಟಾರೆಯಾಗಿ ಹೇಳುವುದಾದರೆ, ಭಾರತದ 78ನೇ ಸ್ವಾತಂತ್ರ್ಯ ದಿನದಂದು ಕಾಶ್ಮೀರದ ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜವನ್ನು ಹಾರಿಸಲಾಗಿದೆ ಎಂಬ ಹೇಳಿಕೆಯು ಸಂಪೂರ್ಣವಾಗಿ ಆಧಾರರಹಿತವಾಗಿದೆ. ಸೋಶಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾದ ಚಿತ್ರವು 2019 ರದ್ದಾಗಿದೆ. ಜನರಲ್ಲಿ ಗೊಂದಲ ಮತ್ತು ಅಶಾಂತಿಯನ್ನು ಸೃಷ್ಟಿಸಲು ತಪ್ಪು ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಇಂಗ್ಲೆಂಡ್ ಪೊಲೀಸರು ಮುಸ್ಲಿಮರ ಕಾಲಿಗೆ ಬಿದ್ದು ನಮಸ್ಕರಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...