ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರನ್ನು ಮನೆಗೆ ಕರೆದೊಯ್ದು ಸುರಕ್ಷಿತವಾಗಿ ತಲುಪಿಸುವ ಯೋಜನೆಯೊಂದನ್ನು ದೇಶದಾದ್ಯಂತ ಪೊಲೀಸ್ ಇಲಾಖೆ ಜಾರಿಗೆ ತಂದಿದೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶವೊಂದು ಹರಿದಾಡುತ್ತಿದೆ.
“ಯಾವುದೇ ಮಹಿಳೆ ಮನೆಗೆ ಹೋಗಲು ವಾಹನ ಸಿಗದಿದ್ದರೆ ಪೊಲೀಸ್ ಸಹಾಯವಾಣಿ ಸಂಖ್ಯೆ 1091 ಮತ್ತು 7837018555 ಗೆ ಕರೆ ಮಾಡಬಹುದು. ಪೊಲೀಸ್ ವಾಹನವು ಮಹಿಳೆಯನ್ನು ಸುರಕ್ಷಿತವಾಗಿ ಅವರ ಮನೆಗೆ ಕರೆದೊಯ್ಯುತ್ತದೆ. ಮಹಿಳೆಯರು ಈ ಸಹಾಯವಾಣಿ ಸಂಖ್ಯೆಗಳಿಗೆ 24X7 ಕರೆ ಮಾಡಬಹುದು. ದೇಶದಲ್ಲಿ ಎಲ್ಲ ಭಾಗಗಳಲ್ಲಿ ಈ ಸೇವೆಯನ್ನು ಜಾರಿಗೊಳಿಸಲಾಗಿದೆ” ಎಂದು ಸಾಮಾಜಿಕ ಮಾಧ್ಯಮ ಸಂದೇಶಗಳಲ್ಲಿ ಹೇಳಿಕೊಳ್ಳಲಾಗುತ್ತಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಂದೇಶದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಅದು ಸುಳ್ಳು ಸಂದೇಶ ಎಂದು ಗೊತ್ತಾಗಿದೆ.
ಆಗಸ್ಟ್ 22, 2024ರಂದು ಬೆಂಗಳೂರು ನಗರ ಪೊಲೀಸರು ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ಕೊಟ್ಟಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು ಎಂದು ತಿಳಿಸಿದ್ದಾರೆ.
ALERT!! The message circulating about free travel for women from 10 PM to 6 AM is FAKE. Please rely only on official sources. In any emergency, dial #Namma112 for immediate help.#WeServeWeProtect
ಎಚ್ಚರವಾಗಿರಿ!! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ… pic.twitter.com/jKtCa3A93F
— ಬೆಂಗಳೂರು ನಗರ ಪೊಲೀಸ್ BengaluruCityPolice (@BlrCityPolice) August 22, 2024
“ಎಚ್ಚರವಾಗಿರಿ!! ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನಿಯಂತ್ರಣ ಕೊಠಡಿಗೆ ಕರೆ ಮಾಡಿದಲ್ಲಿ, ಮಹಿಳೆಯರಿಗೆ ಉಚಿತ ಪ್ರಯಾಣ ಎಂಬ ಮೆಸೇಜ್ ಹರಿದಾಡುತ್ತಿದ್ದು, ಇದು ಸುಳ್ಳು. ಇಂತಹ ಸುಳ್ಳು ಮೆಸೇಜ್ ನಂಬಬೇಡಿ. ತುರ್ತು ಪರಿಸ್ಥಿತಿಯಲ್ಲಿ ನಮ್ಮ112 ಸಹಾಯವಾಣಿಗೆ ಕರೆಮಾಡಿ ನೆರವು ಪಡೆಯಿರಿ” ಎಂದು ಬೆಂಗಳೂರು ನಗರ ಪೊಲೀಸ್ ಎಕ್ಸ್ ಖಾತೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು


