HomeದಿಟನಾಗರFact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

Fact Check: 2014ರ ಬಳಿಕ ಯಾವುದೇ ರಾಜ್ಯದಲ್ಲೂ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲ ಎಂಬುವುದು ಸುಳ್ಳು

- Advertisement -
- Advertisement -

ದೇಶದಲ್ಲಿ ಕಾಂಗ್ರೆಸ್ ಆಡಳಿತವಿದ್ದಾಗ ಹಲವು ಬಾರಿ ವಿವಿಧ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿತ್ತು. ಆದರೆ, 2014ರ ಬಳಿಕ, ಅಂದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿಲ್ಲ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ.

“ನೆಹರೂ ಅವರು 7 ಬಾರಿ ರಾಜ್ಯ ಸರ್ಕಾರಗಳನ್ನು ವಜಾ ಮಾಡಿದ್ದಾರೆ.
ಇಂದಿರಾ ಗಾಂಧಿ 49 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ರಾಜೀವ್ ಗಾಂಧಿ 6 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದರು.
ನರಸಿಂಹರಾವ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ.
ಮನಮೋಹನ್ ಸಿಂಗ್ 11 ಬಾರಿ ರಾಜ್ಯ ಸರ್ಕಾರಗಳನ್ನು ವಜಾಗೊಳಿಸಿದ್ದಾರೆ”.

“ಆದರೆ 2014ರ ನಂತರ ಒಂದೇ ಒಂದು ರಾಜ್ಯ ಸರ್ಕಾರವನ್ನು ವಜಾ ಮಾಡಿಲ್ಲ. ಆದರೂ, ಮೋದಿ ಸರ್ವಾಧಿಕಾರಿ” ಎಂದು ವೈರಲ್ ಸಂದೇಶದಲ್ಲಿ ಹೇಳಲಾಗಿದೆ.

ಹಾಗಿದ್ದರೆ, 2014 ನಂತರ, ನರೇಂದ್ರ ಮೋದಿ ಆಡಳಿತದಲ್ಲಿ ಒಮ್ಮೆಯೂ, ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಲ್ಲವೇ? ಎಂದು ನೋಡೋಣ

ಫ್ಯಾಕ್ಟ್‌ಚೆಕ್ : ವೈರಲ್‌ ಪೋಸ್ಟ್ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. 1947 ರಿಂದ 2016 ರವರೆಗೆ ವಿವಿಧ ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಘೋಷಿಸಿದ ಘಟನೆಗಳನ್ನು ವಿವರಿಸುವ ಸಂಸತ್ತಿನ ಗ್ರಂಥಾಲಯದಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ 2014-16 ರ ನಡುವೆ ಮಹಾರಾಷ್ಟ್ರದ, ಅರುಣಾಚಲ ಪ್ರದೇಶದಲ್ಲಿ, ಉತ್ತರಾಖಂಡದಲ್ಲಿ ಮತ್ತು ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

2019ರಲ್ಲಿ ಆರ್‌ಟಿಐನಲ್ಲಿ ನೀಡಿರುವ ವಿವರಣೆಯ ಪ್ರಕಾರ, ರಾಜಕೀಯ ಅಸ್ಥಿರತೆಯ ಕಾರಣದಿಂದಾಗಿ 25-01-16ರಿಂದ 19-02-16ರ ವರೆಗೆ ಅರುಣಾಚಲ ಪ್ರದೇಶದಲ್ಲಿ, 27-03-2016ರಿಂದ 11-05-2016ರ ವರೆಗೆ ಉತ್ತರಾಖಂಡದಲ್ಲಿ, 12-11-2019ರಿಂದ 23-11-2019ರ ವರೆಗೆ ಮಹಾರಾಷ್ಟ್ರದಲ್ಲಿ ಮತ್ತು 19-12-2018 ರಿಂದ 31-10-2019ರ ವರೆಗೆ ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ.


ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯ ಹೇರಿಕೆಯ ಕುರಿತು ಮಾಧ್ಯಮ ಸುದ್ದಿ, ಲೇಖನಗಳನ್ನು ಇಲ್ಲಿ ಮತ್ತು ಇಲ್ಲಿ ಓದಬಹುದು .

ಸ್ವಾತಂತ್ರ್ಯದ ನಂತರ, ವಿವಿಧ ರಾಜ್ಯಗಳಲ್ಲಿ ಹಲವಾರು ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. 1951ರಲ್ಲಿ ಜವಾಹರಲಾಲ್ ನೆಹರು ಅವರ ಅಧಿಕಾರಾವಧಿಯಲ್ಲಿ ಮೊದಲ ಬಾರಿಗೆ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಯಿತು. ಒಟ್ಟಾರೆಯಾಗಿ ಅವರ ಅಧಿಕಾರಾವಧಿಯಲ್ಲಿ, 7 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ, 48 ಸಂದರ್ಭಗಳಲ್ಲಿ ರಾಜ್ಯಗಳಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹೇರಲಾಗಿದೆ. ಇದು ಒಬ್ಬರು ಪ್ರಧಾನಿಯ ಅವಧಿಯಲ್ಲಿ ಅತಿ ಹೆಚ್ಚು ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಿರುವುದಾಗಿದೆ. ರಾಜೀವ್ ಗಾಂಧಿ, ಪಿವಿ ನರಸಿಂಹ ರಾವ್ ಮತ್ತು ಮನಮೋಹನ್ ಸಿಂಗ್ ಅವರ ಅಧಿಕಾರಾವಧಿಯಲ್ಲಿ ಕ್ರಮವಾಗಿ 6, 11 ಮತ್ತು 10 ಸಂದರ್ಭಗಳಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ. ನರೇಂದ್ರ ಮೋದಿಯವರ ಅಧಿಕಾರಾವಧಿಯಲ್ಲಿಯೂ 5 ಬಾರಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.

ವೈರಲ್ ಪೋಸ್ಟ್‌ಗೆ ಪ್ರತಿಕ್ರಿಯಿಸಿರುವ ಅನೇಕ ಎಕ್ಸ್‌ ಬಳಕೆದಾರರು, 2014 ರ ನಂತರ ಕೇಂದ್ರ ಸರ್ಕಾರ ರಾಜ್ಯ ಸರ್ಕಾರವನ್ನು ವಜಾಗೊಳಿಸಿಲ್ಲ. ಬದಲಿಗೆ ನೇರವಾಗಿ ಶಾಸಕರನ್ನು ಖರೀದಿಸುವುದು ಮತ್ತು 24 ಗಂಟೆಗಳಲ್ಲಿ ಸರ್ಕಾರ ರಚಿಸುವುದು ಮಾತ್ರ ನಡೆಯುತ್ತಿದೆ. ಇಡಿ ಮತ್ತು ಐಟಿ ಇಲಾಖೆಗಳ ಅಧಿಕಾರಿಗಳನ್ನು ಬಳಸಿಕೊಂಡು ರಾಜ್ಯ ಸರ್ಕಾರಗಳನ್ನು ಅಸ್ತಿರಗೊಳಿಸಿ ಬಿಜೆಪಿ ಸರ್ಕಾರ ಬರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದಿದ್ದಾರೆ. 

ನಾವು ನಡೆಸಿದ ಪರಿಶೀಲನೆಯಲ್ಲಿ ಲಭ್ಯವಾದ ಮಾಹಿತಿ ಪ್ರಕಾರ, ನರೇಂದ್ರ ಮೋದಿ ದೇಶದ ಪ್ರಧಾನಿಯಾದ ಬಳಿಕ ಅಥವಾ 2014ರ ನಂತರ ಯಾವುದೇ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿಲ್ಲ ಎನ್ನುವುದು ಸುಳ್ಳು.

ಇದನ್ನೂ ಓದಿ : Fact Check: ಈ ಬಾರಿಯ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಸಲಾಗುತ್ತದೆ ಎನ್ನುವುದು ಸುಳ್ಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...