HomeದಿಟನಾಗರFact Check : ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

Fact Check : ಏಪ್ರಿಲ್ 1ರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಾಗಲಿದೆ ಎನ್ನುವುದು ಸುಳ್ಳು

- Advertisement -
- Advertisement -

ಏಪ್ರಿಲ್ 1, 2024ರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳವಾಗಲಿದೆ ಎಂದು ಹೇಳಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘Index.daily’ ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ‘ ಕರ್ನಾಟಕದಲ್ಲಿ ಆಸ್ತಿ ಹೆಚ್ಚಳ’ ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡಲಾದ ವಿಡಿಯೋ ವೈರಲ್ ಆಗಿದ್ದು, ಆ ವಿಡಿಯೋದಲ್ಲಿ ಅನುರಾಗ್ ಸಿಂಗ್ ಎಂಬವರು “ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ತೆರಿಗೆ ಎರಡು ಪಟ್ಟು, ವಾಣಿಜ್ಯ ಸಂಸ್ಥೆಗಳ ತೆರಿಗೆ ಮೂರು ಪಟ್ಟು ಹೆಚ್ಚಾಗಲಿದೆ. ಎಲೆಕ್ಟ್ರಿಕ್ ವಾಹನಗಳ ಲೈಫ್ ಟೈಮ್ ತೆರಿಗೆ ಶೇ.10ರಷ್ಟು ಮತ್ತು ಹೊಸ ವಾಹನಗಳ ನೋಂದಣಿ ತೆರಿಗೆ ಶೇ.3ರಷ್ಟು ಹೆಚ್ಚಳ ಮಾಡಲಾಗುತ್ತದೆ. ಸರ್ಕಾರ ಈ ಹಿಂದೆ ಹಾಲು, ಪೆಟ್ರೋಲ್ ಮತ್ತು ಮದ್ಯದ ಮೇಲಿನ ತೆರಿಗೆ ಹೆಚ್ಚಿಸಿತ್ತು” ಎಂದು ಹೇಳಲಾಗಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

“ಕರ್ನಾಟಕ ಸರ್ಕಾರ 5 ಬಿಟ್ಟಿ ಭಾಗ್ಯಗಳಿಗೆ 52 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಪರಿಣಾಮ ಬಜೆಟ್ ಗಾತ್ರ ಶೇ 17ರಷ್ಟು ಹೆಚ್ಚಾಗಿದೆ. ಸರ್ಕಾರ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಶೇ.10, ನಗರಾಭಿವೃದ್ದಿ ಇಲಾಖೆಯ ಶೇ.25 ಅನುದಾನ ಕಡಿತಗೊಳಿಸಿದೆ. ವಿತ್ತೀಯ ಕೊರೆತ ನೀಗಿಸಲು ಸರ್ಕಾರ 1 ಲಕ್ಷ ಕೋಟಿ ಸಾಲ ಪಡೆಯುತ್ತಿದೆ “ಇತ್ಯಾದಿ ವಿಡಿಯೋದಲ್ಲಿ ಹೇಳಲಾಗಿದೆ.

ಹಾಗಿದ್ದರೆ ವಿಡಿಯೋದಲ್ಲಿ ಹೇಳಿರುವಂತೆ ನಿಜವಾಗಿಯೂ ಕರ್ನಾಟಕ ಸರ್ಕಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಹೆಚ್ಚಳಕ್ಕೆ ಮುಂದಾಗಿದೆಯಾ? ಎಂಬುವುದನ್ನು ಪರಿಶೀಲಿಸೋಣ

ಫ್ಯಾಕ್ಟ್‌ಚೆಕ್‌ : ನಾನುಗೌರಿ.ಕಾಂ ಅನುರಾಗ್ ಸಿಂಗ್ ಎಂಬವರು ಇನ್‌ಸ್ಟಾಗ್ರಾಂ ಪೇಜ್‌ನಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದ ಸತ್ಯಾಸತ್ಯತೆ ಪರಿಶೀಲಿಸಿದಾಗ ಅದೊಂದು ಸುಳ್ಳು ಪ್ರತಿಪಾದನೆ ಎಂಬುವುದು ಗೊತ್ತಾಗಿದೆ.

ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, “ಆತ್ಮೀಯ ನಾಗರಿಕರೇ, 1ನೇ ಏಪ್ರಿಲ್ 2024 ರಿಂದ ಬಿಬಿಎಂಪಿಯಲ್ಲಿ ಆಸ್ತಿ ತೆರಿಗೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಕೆಲವು ಸುಳ್ಳು ಸುದ್ದಿಯ ವೀಡಿಯೊಗಳು ಹರಿದಾಡುತ್ತಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯಲ್ಲಿ ಯಾವುದೇ ಹೆಚ್ಚಳ ಮಾಡುತ್ತಿಲ್ಲ” ಎಂದು ತಿಳಿಸಿದ್ದಾರೆ. ಜೊತೆಗೆ ಅನುರಾಗ್‌ ಸಿಂಗ್ ಅವರು ಸುಳ್ಳು ಮಾಹಿತಿ ಹರಡಿರುವ ವಿಡಿಯೋ ಹಂಚಿಕೊಂಡಿದ್ದಾರೆ.

ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕೂಡ ಈ ಕುರಿತು ಎಕ್ಸ್‌ನಲ್ಲಿ ಸ್ಪಷ್ಟನೆ ನೀಡಿದ್ದು, “ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ದರ ಏರಿಕೆಯಾಗಲಿದೆ ಎನ್ನುವ ಸುಳ್ಳು ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. BBMP ಯಾವುದೇ ಆಸ್ತಿ ತೆರಿಗೆಯನ್ನು ಏರಿಕೆ ಮಾಡಿಲ್ಲ 2016ರಲ್ಲಿ ಸೂಚಿಸಿರುವ ದರದಂತೆಯೇ ಪ್ರಸ್ತುತ ಆಸ್ತಿ ತೆರಿಗೆ ದರಗಳು ಚಾಲ್ತಿಯಲ್ಲಿರುತ್ತವೆ ಹಾಗೂ ಮುಂದುವರಿಯಲಿವೆ. ಬೆಂಗಳೂರಿನ ನಿವಾಸಿಗಳು ಆತಂಕಪಡುವ ಅವಶ್ಯಕತೆಯಿಲ್ಲ” ಎಂದಿದ್ದಾರೆ.

ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಬಿಬಿಎಂಪಿ ಆಯುಕ್ತರು ನೀಡಿರುವ ಸ್ಪಷ್ಟನೆ ಪ್ರಕಾರ, ‘Index.daily’ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಅಪ್ಲೋಡ್ ಮಾಡಿರುವ ವಿಡಿಯೋದಲ್ಲಿ ಹೇಳಿರುವ ಸುದ್ದಿ ಸುಳ್ಳು ಮಾಹಿತಿಯಾಗಿದೆ.

ಇದನ್ನೂ ಓದಿ : Fact Check : ಬೆಂಗಳೂರಿನಲ್ಲಿ ನಡೆದಿರುವುದು ಪಾರ್ಕಿಂಗ್ ಜಗಳವೇ ಹೊರತು ‘ಕೋಮು ಗಲಾಟೆಯಲ್ಲ’

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್‌ ರೇವಣ್ಣ ವಿರುದ್ಧ ಲುಕ್‌ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ

0
ದೇಶದಾದ್ಯಂತ ಭಾರೀ ಸದ್ದು ಮಾಡಿದ್ದ ಹಾಸನದ ಪೆನ್‌ಡ್ರೈವ್‌ ವೈರಲ್‌, ಸಂಸದ ಪ್ರಜ್ವಲ್‌ ರೇವಣ್ಣನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಇದೀಗ ಪ್ರಜ್ವಲ್‌ ರೇವಣ್ಣ ವಿರುದ್ಧ ಎಸ್ಐಟಿ ಅಧಿಕಾರಿಗಳು ಲುಕ್‌ಔಟ್ ನೋಟಿಸ್...