Homeಫ್ಯಾಕ್ಟ್‌ಚೆಕ್FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

FACT CHECK : ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತ ಮಹಿಳೆಯರು ಮುತ್ತಿಗೆ ಹಾಕಿದ್ದಾರೆ ಎನ್ನುವುದು ಸುಳ್ಳು

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಎರಡು ಹಂತಗಳ ಮತದಾನ ಮುಕ್ತಾಯಗೊಂಡಿದ್ದು, ಮೂರನೇ ಹಂತದ ಮತದಾನ ನಾಳೆ (ಅಕ್ಟೋಬರ್ 1) ನಡೆಯಲಿದೆ.

ಈ ನಡುವೆ ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಕಾಶ್ಮೀರಿ ಪಂಡಿತ ಸಮುದಾಯದ ಜನರು ಮುತ್ತಿಗೆ ಹಾಕಿದ್ದಾರೆ ಎನ್ನಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ವೈರಲ್ ವಿಡಿಯೋದಲ್ಲಿ ವಿಮಾನದೊಳಗೆ ಇತರ ನಾಯಕರೊಂದಿಗೆ ಕುಳಿತಿರುವ ರಾಹುಲ್ ಗಾಂಧಿಯವರನ್ನು ಒಂದಷ್ಟು ಜನರು, ವಿಶೇಷವಾಗಿ ಮಹಿಳೆಯರು ಸುತ್ತುವರಿದಿರುವ ಮತ್ತು ಒಬ್ಬರು ಮಹಿಳೆ “ಪುಟ್ಟ ಮಕ್ಕಳು ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ. ನನ್ನ ಸಹೋದರ ಹೃದಯ ರೋಗಿ, ಅವನು ತನ್ನ ಮಕ್ಕಳನ್ನು ಹುಡುಕಲು ಹೋದವ ವಾಪಸ್ ಬಂದಿಲ್ಲ. ಅವನ ಕುಟುಂಬ ಸದಸ್ಯರಿಗೆ ಕಳೆದ 10 ದಿನಗಳಿಂದ ಅವನು ಎಲ್ಲಿದ್ದಾನೆಂದು ತಿಳಿದಿಲ್ಲ. ನಾವು ತೊಂದರೆಯಲ್ಲಿದ್ದೇವೆ” ಎಂದು ಅಳುತ್ತಾ ಹೇಳುವುದು ನೋಡಬಹುದು.

ಸೆಪ್ಟೆಂಬರ್ 26ರಂದು ಎಕ್ಸ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿರುವ ‘ವಿಭೋರ್ ಆನಂದ್’ ಎಂಬ ಎಕ್ಸ್ ಬಳಕೆದಾರ “ಮಾರಾಟಗೊಂಡ ಭಾರತದ ಮಾಧ್ಯಮಗಳು ಈ ವಿಡಿಯೋ ತೋರಿಸುವುದಿಲ್ಲ. ಭಾರತ ವಿರೋಧಿ ನಿಲುವು ಮತ್ತು ಕಾಶ್ಮೀರಿ ಹಿಂದೂಗಳ ಸಮಸ್ಯೆಗಳ ಬಗ್ಗೆ ಗಮನ ಹರಿಸದ ರಾಹುಲ್ ಗಾಂಧಿಯನ್ನು ಕಾಶ್ಮೀರಿ ಪಂಡಿತ ಮಹಿಳೆಯೊಬ್ಬರು ವಿಮಾನದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ದೊಡ್ಡ ಮಟ್ಟದಲ್ಲಿ ವೈರಲ್ ಆಗಬೇಕು. ಹೆಚ್ಚಿನ ಸಂಖ್ಯೆಯಲ್ಲಿ ರಾಹುಲ್ ಗಾಂಧಿಗೆ ಟ್ಯಾಗ್ ಮಾಡಿ. 25 ಸಾವಿರದ ಗುರಿ” ಎಂದು ಬರೆದುಕೊಂಡಿದ್ದರು.

ಇನ್ನೂ ಕೆಲ ಎಕ್ಸ್‌ , ಫೇಸ್‌ಬುಕ್ ಬಳಕೆದಾರರು ಇದೇ ಪ್ರತಿಪಾದನೆಯೊಂದಿಗೆ ವಿಡಿಯೋ ಹಂಚಿಕೊಂಡಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲನೆ ನಡೆಸಿದ್ದೇವೆ. ಅಸಲಿಗೆ ಈ ವಿಡಿಯೋ 24 ಆಗಸ್ಟ್ 2019ರದ್ದು. ಆಗ ರಾಹುಲ್ ಗಾಂಧಿ ಮತ್ತು ಇತರ ನಾಯಕರು ಶ್ರೀನಗರಕ್ಕೆ ತೆರಳಲು ಮುಂದಾಗಿದ್ದರು. ಆದರೆ, ಅವರನ್ನು ಏರ್‌ಪೋರ್ಟ್‌ನಲ್ಲೇ ತಡೆಯಲಾಗಿತ್ತು.

ಆಗ, ಮಹಿಳೆಯೊಬ್ಬರು ವಿಮಾನದಲ್ಲೇ ರಾಹುಲ್ ಗಾಂಧಿಯನ್ನು ಭೇಟಿಯಾಗಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಆರ್ಟಿಕಲ್ 370ರ ರದ್ದತಿಯಿಂದ ಕಾಶ್ಮೀರ ಜನತೆ ಲಾಕ್‌ಡೌನ್‌ನಲ್ಲಿದ್ದೇವೆ ಎಂದು ಪರಿಸ್ಥಿತಿ ವಿವರಿಸಿದ್ದರು. ಆ ಕುರಿತು ವಿಡಿಯೋ ಆಗಿದೆ ವೈರಲ್ ಆಗಿರುವುದು.

ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ಅದಕ್ಕೆ ಸಂಬಂಧಿಸಿದ ಅನೇಕ ವರದಿಗಳು ಲಭ್ಯವಾಗಿದೆ.

ಆಗಸ್ಟ್ 25, 2019ರಂದು ಸ್ಕ್ರೋಲ್ ಪ್ರಕಟಿಸಿದ ವರದಿಯ ಪ್ರಕಾರ, ಶ್ರೀನಗರ ಪ್ರವೇಶಕ್ಕೆ ಅವಕಾಶ ನಿರಾಕರಿಸಿದ ನಂತರ ರಾಹುಲ್ ಗಾಂಧಿ ವಿಮಾನ ನಿಲ್ದಾಣದಿಂದಲೇ ಹಿಂದಿರುಗಲು ಮುಂದಾಗಿದ್ದರು. ಆಗ ಮಹಿಳೆ ಬಂದು ಅವರ ಬಳಿ ಅಳಲು ತೋಡಿಕೊಂಡಿದ್ದಾರೆ.

ಇದೇ ಘಟನೆಯ ಕುರಿತು ಇಂಡಿಯನ್ ಎಕ್ಸ್‌ಪ್ರೆಸ್ ಕೂಡ ವರದಿ ಪ್ರಕಟಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಇತ್ತೀಚೆಗೆ ನಿಧನರಾದ ಸೀತಾರಾಂ ಯೆಚೂರಿ ಮತ್ತು ಗುಲಾಂ ನಬಿ ಆಝಾದ್ ಸೇರಿದಂತೆ ಆಗಿನ ಪ್ರತಿಪಕ್ಷ ನಾಯಕರು 2019ರಲ್ಲಿ ಶ್ರೀನಗರಕ್ಕೆ ಭೇಟಿ ನೀಡಲು ತೆರಳಿದ್ದರು. ಆರ್ಟಿಕಲ್ 370ಅನ್ನು ರದ್ದುಪಡಿಸಿ ಸಮಯವಾದ್ದರಿಂದ ಪ್ರತಿಪಕ್ಷ ನಾಯಕರ ಭೇಟಿಗೆ ಅವಕಾಶ ನಿರಕಾರಿಸಲಾಗಿತ್ತು. ಆದ್ದರಿಂದ ವಿಮಾನದಿಂದ ಇಳಿಯದೆ ಅವರು ವಾಪಸ್ ಬಂದಿದ್ದರು.

ಘಟನೆಯ ವಿಡಿಯೋವನ್ನು ಆಗಸ್ಟ್ 25, 2019ರಂದು ಎಕ್ಸ್‌ನಲ್ಲಿ ರಿಟ್ವೀಟ್ ಮಾಡಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ” ಇದು ಎಷ್ಟು ದಿನ ಹೀಗೆ ಮುಂದುವರಿಯಲಿದೆ? ರಾಷ್ಟ್ರೀಯತೆ ಹೆಸರಿನಲ್ಲಿ ಧ್ವನಿ ಅಡಗಿಸಿದ ಲಕ್ಷಾಂತರ ಜನರಲ್ಲಿ ಇವರು ಒಬ್ಬರು. ಪ್ರತಿಪಕ್ಷಗಳು ವಿಷಯವನ್ನು ರಾಜಕೀಯ ಮಾಡುತ್ತಿದೆ ಎನ್ನುವವರಿಗೆ ಇದು ಅರ್ಪಣೆ” ಎಂದು ಬರೆದುಕೊಂಡಿದ್ದರು.

ಒಟ್ಟಿನಲ್ಲಿ 2019ರಲ್ಲಿ ಆರ್ಟಿಕಲ್ 370 ರದ್ದು ಮಾಡಿದ್ದ ಸಂದರ್ಭ ರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ಶ್ರೀನಗರ ಭೇಟಿಗೆ ತೆರಳಿದ್ದರು. ಆಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆಯಲಾಗಿತ್ತು. ಆಗ ಅಲ್ಲಿಗೆ ಆಗಮಿಸಿದ್ದ ಕೆಲ ಜನರ ಪೈಕಿ ಮಹಿಳೆಯೊಬ್ಬರು ತಮ್ಮ ಸಮಸ್ಯೆ ತೋಡಿಕೊಂಡಿದ್ದರು. ಆ ವಿಡಿಯೋವನ್ನು ರಾಹುಲ್ ಗಾಂಧಿಗೆ ಕಾಶ್ಮೀರಿ ಪಂಡಿತರು ಮುತ್ತಿಗೆ ಹಾಕಿದ್ದಾರೆ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ‘ವೀಟೋ ಅಧಿಕಾರ’ ದೊರೆತಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...