Homeಫ್ಯಾಕ್ಟ್‌ಚೆಕ್FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

FACT CHECK | ತಾಲಿಬಾನ್ ಕಾರ್ಯದರ್ಶಿ ಆರೆಸ್ಸೆಸ್‌, ಬಿಜೆಪಿಯನ್ನು ಹೊಗಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ ಆರೆಸ್ಸೆಸ್‌ ಮತ್ತು ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ” ಎಂದು ತಾಲಿಬಾನ್ ನಾಯಕ ಹೇಳಿದ್ದಾನೆಂದು ಪ್ರತಿಪಾದಿಸಿ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರುವ ವ್ಯಕ್ತಿಯು ಗಡ್ಡದಾರಿಯಾಗಿದ್ದು, ಟೋಪಿ ಧರಿಸಿದ್ದಾರೆ. ಅವರ ವೇಷ ಭೂಷಣ ನೋಡಿದರೆ ಅವರು ಮುಸ್ಲಿಂ ವ್ಯಕ್ತಿ ಎಂದು ಹೇಳಬಹುದಾಗಿದೆ.

ANU ANITHA(@Ani_Sanatani) ಎಂಬವರು ಅಕ್ಟೋಬರ್ 13, 2024ರಂದು ಎಕ್ಸ್‌ನಲ್ಲಿ ವೈರಲ್ ವಿಡಿಯೋ ಹಂಚಿಕೊಂಡಿದ್ದಾರೆ. ಈ ಹಿಂದೆ Karnataka BJP Supporters ಎಂಬ ಫೇಸ್‌ಬುಕ್ ಪೇಜ್ ಸೇರಿದಂತೆ ಹಲವೆಡೆ ಈ ವಿಡಿಯೋ ಹಂಚಿಕೊಳ್ಳಲಾಗಿತ್ತು.

“ಭಾರತದಲ್ಲಿ ಬಿಜೆಪಿ ಇರುವವರೆಗೂ ಯಾವುದೇ ದೇಶ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲ. ಆರೆಸ್ಸೆಸ್‌ ಮತ್ತು ಬಿಜೆಪಿ ಅತ್ಯಂತ ಶಕ್ತಿಶಾಲಿ. ಮೊದಲು ಬಿಜೆಪಿಯನ್ನು ತೊಡೆದುಹಾಕಿ ನಂತರ ಮಾತ್ರ ಭಾರತದ ಮೇಲೆ ಜಯ ಸಿಗುತ್ತದೆ…ಭಯೋತ್ಪಾದಕ ಸಂಘಟನೆ ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಅಲ್ ಬೇಡರ್ ಇಲ್ಯಾಸಿ ಹೇಳಿಕೆ” ಎಂಬ ಪ್ರತಿಪಾದನೆಯೊಂದಿಗೆ ಅಕ್ಟೋಬರ್ 9, 2023ರಂದು Karnataka BJP Supporters ಫೇಸ್‌ಬುಕ್ ಪೇಜ್‌ನಲ್ಲಿ ವಿಡಿಯೋ ಪೋಸ್ಟ್ ಮಾಡಲಾಗಿತ್ತು.

ಇದೇ ಪ್ರತಿಪಾದನೆಯೊಂದಿಗೆ ಹಲವಾರು ಜನರು ಬೇರೆ ಬೇರೆ ಭಾಷೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಅವುಗಳನ್ನು ಇಲ್ಲಿಇಲ್ಲಿಇಲ್ಲಿಇಲ್ಲಿಇಲ್ಲಿ ನೋಡಬಹುದಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ವಿಡಿಯೋ ಕುರಿತು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ ವಿಡಿಯೋದಲ್ಲಿರುವ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಾಬಾದ್‌ನ ಖಾಲಿದ್ ಮೆಹಮೂದ್ ಅಬ್ಬಾಸಿ ಎಂಬ ಮುಸ್ಲಿಂ ಧಾರ್ಮಿಕ ವಿದ್ವಾಂಸ ಎಂದು ತಿಳಿದು ಬಂದಿದೆ. ಅವರು ತಾಲಿಬಾನ್‌ನ ಜೊತೆಗೆ ಸಂಬಂಧ ಹೊಂದಿಲ್ಲ.

ಅವರ ಬಗ್ಗೆ ಮತ್ತಷ್ಟು ಮಾಹಿತಿ ಹುಡುಕಾಡಿದಾಗ Khalid Mehmood Abbasi Official ಎಂಬ ಯೂಟ್ಯೂಬ್ ಚಾನೆಲ್‌ ಅವರ ಹೆಸರಿನಲ್ಲಿ ಇರುವುದು ಕಂಡು ಬಂದಿದೆ. ಈ ಚಾನೆಲ್‌ನಲ್ಲಿ ಬಿಜೆಪಿ ಬೆಂಬಲಿಗರು ವೈರಲ್ ಮಾಡಿರುವ ಕ್ಲಿಪ್‌ ಇರುವ ವಿಡಿಯೋ ಕೂಡ ನಮಗೆ ಲಭ್ಯವಾಗಿದೆ. ಈ ವಿಡಿಯೋದಲ್ಲಿ 0.53 ಸೆಕೆಂಡ್‌ನಿಂದ ಕ್ಲಿಪ್ ಕಟ್‌ ಮಾಡಿ ವೈರಲ್ ಮಾಡಲಾಗಿದೆ.

ಈ ವಿಡಿಯೋ 3 ಆಗಸ್ಟ್ 2021ರಂದು ಅಪ್‌ಲೋಡ್ ಮಾಡಲಾಗಿದ್ದು, ಅದನ್ನು 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ ವಿಡಿಯೋ ಶೀರ್ಷಿಕೆಯು ಮಾತನಾಡುತ್ತಿರುವವರು ಖಾಲಿದ್ ಮೆಹಮೂದ್ ಅಬ್ಬಾಸಿ ಎಂದು ಉಲ್ಲೇಖಿಸಿದೆ.

ಅವರ ಅಧಿಕೃತ ಫೇಸ್‌ಬುಕ್ ಪೇಜ್‌ನಲ್ಲಿ, ಅವರು ಇಸ್ಲಾಮಿಕ್ ವಿದ್ವಾಂಸ ಎಂದು ಹೇಳಿಕೊಂಡಿದ್ದು, ತಂಝೀಮ್-ಎ-ಇಸ್ಲಾಮಿ ಎಂಬ ಸಂಘಟನೆಯೊಂದಿಗೆ 30 ವರ್ಷಗಳ ಕಾಲ ಕೆಲಸ ಮಾಡಿದ ಅವರು 2018ರಲ್ಲಿ ತಂಝೀಮ್-ಎ-ಇಸ್ಲಾಮಿ ತೊರೆದು ಶುಬ್ಬನ್-ಉಲ್-ಮುಸ್ಲಿಮೀನ್ ಅನ್ನು ಸ್ಥಾಪಿಸಿದ್ದಾರೆ ಎಂದು ಫೇಸ್‌ಬುಕ್‌ನಲ್ಲಿ ಉಲ್ಲೇಖವಿದೆ.

ದಿ ಕ್ವಿಂಟ್ ಮಾಧ್ಯಮದ ಜೊತೆಗೆ ಈ ಹಿಂದೆ ಮಾತನಾಡಿದ್ದ ಅಬ್ಬಾಸಿ ಅವರು, ತಾಲಿಬಾನ್‌ ಜೊತೆಗೆ ತನಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ವೈರಲ್ ಆಗಿರುವ ವಿಡಿಯೊ ಹಳೆಯದು ಎಂದಿದ್ದರು. ಅಲ್ಲದೆ, ಖಾಲಿದ್ ಅಬ್ಬಾಸಿ ಅವರು “ಶುಬ್ಬನ್ ಉಲ್ ಮುಸ್ಲಿಮೀನ್” ಹೆಸರಿನ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದಾರೆಯಾದರೂ, ಅದು ರಾಜಕೀಯ ಪಕ್ಷವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

“ನಾನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬುವುದು ಸಂಪೂರ್ಣ ಸುಳ್ಳು ಹೇಳಿಕೆಯಾಗಿದೆ. ತಾಲಿಬಾನ್ ಈಗ ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿದೆ, ಆದರೆ ವೈರಲ್ ಕ್ಲಿಪ್‌ನ ಭಾಗವು ಸುಮಾರು 1.5 ವರ್ಷಗಳ ಹಿಂದಿನ ವಿಡಿಯೋ ಆಗಿದೆ. ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ನನಗೆ ಯಾವುದೇ ಸಂಬಂಧ ಇಲ್ಲ” ಎಂದು ಖಾಲಿದ್ ಮೆಹಮೂದ್ ಅಬ್ಬಾಸಿ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಹೇಳಿತ್ತು.

ಒಟ್ಟಿನಲ್ಲಿ, ವೈರಲ್ ವಿಡಿಯೋ 1 ಮಾರ್ಚ್ 2019 ರಂದು ರೆಕಾರ್ಡ್ ಮಾಡಲಾದ ಕ್ಲಿಪ್‌ನ ಸಣ್ಣ ಭಾಗವಾಗಿದೆ. ಇದರಲ್ಲಿ ಕಾಣಿಸಿಕೊಂಡಿರುವ ವ್ಯಕ್ತಿ ಖಾಲಿದ್ ಮೆಹಮೂದ್ ಅಬ್ಬಾಸಿ. ಖಾಲಿದ್ ಅವರು ಪಾಕಿಸ್ತಾನದ ಇಸ್ಲಾಮಾಬಾದ್ ಮೂಲದ ಮುಸ್ಲಿಂ ಧಾರ್ಮಿಕ ಬೋಧಕರಾಗಿದ್ದಾರೆ. ಅವರು ಶುಬ್ಬನ್-ಉಲ್-ಮುಸ್ಲಿಮೀನ್ ಎಂಬ ಸಂಘಟನೆ 2018ರಲ್ಲಿ ಸ್ಥಾಪಿಸಿ ಅದರಲ್ಲಿ ಕೆಲಸ ಮಾಡುತ್ತಿದ್ದಾರೆ. ತನಗೂ ತಾಲಿಬಾನ್ ಅಥವಾ ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಇಲ್ಲ ಎಂದು ಸ್ವತಃ ಅವರೇ ಈ ಹಿಂದೆಯೇ ಹೇಳಿದ್ದರು. ಆದ್ದರಿಂದ ವೈರಲ್ ವಿಡಿಯೋದಲ್ಲಿ ಖಾಲಿದ್ ಮೆಹಮೂದ್ ಅಬ್ಬಾಸಿ ಅವರನ್ನು ತಾಲಿಬಾನ್‌ನ ಮುಖ್ಯ ಕಾರ್ಯದರ್ಶಿ ಎಂಬಂತೆ ತಪ್ಪಾಗಿ ಬಿಂಬಿಸಿ ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ಫೋಟೋ ಎಪಿಜೆ ಅಬ್ದುಲ್ ಕಲಾಂ ಅವರ ಬಾಲ್ಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...