Homeಫ್ಯಾಕ್ಟ್‌ಚೆಕ್FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

FACT CHECK : ನೀಟ್ ಅಕ್ರಮದ ಆರೋಪಿಗಳನ್ನು ಕಾಂಗ್ರೆಸ್ ಕಚೇರಿಯಿಂದ ಬಂಧಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ದೇಶದಾದ್ಯಂತ ಸುದ್ದಿಯಲ್ಲಿರುವ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿ ಅಕ್ರಮದ ಆರೋಪಿಗಳನ್ನು ಜಾರ್ಖಂಡ್‌ನ ಕಾಂಗ್ರೆಸ್‌ ಕಚೇರಿಯಿಂದ ಬಂಧಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹಬ್ಬಿದೆ.

ಮೂರ್ನಾಲ್ಕು ಮಂದಿಯನ್ನು ಅಧಿಕಾರಿಗಳು ಕರೆದುಕೊಂಡು ಹೋಗುತ್ತಿರುವ ಎಎನ್‌ಐ ಸುದ್ದಿ ಸಂಸ್ಥೆಯ ಲೋಗೋ ಇರುವ ವಿಡಿಯೋವೊಂದನ್ನು ಹಂಚಿಕೊಂಡಿರುವ ಅನೇಕರು “ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ 6 ಆರೋಪಿಗಳನ್ನು ಬಿಹಾರ ಪೊಲೀಸರು ಜಾರ್ಖಂಡ್‌ನ ದಿಯೋಘರ್‌ನಲ್ಲಿರುವ ಕಾಂಗ್ರೆಸ್ ಕಚೇರಿಯಿಂದ ಬಂಧಿಸಿದ್ದಾರೆ. ಕಾಂಗ್ರೆಸ್ ನೀಟ್ ಆಕಾಂಕ್ಷಿಗಳನ್ನು ಭೇಟಿಯಾಗಿ ತನ್ನ ಮೊಸಳೆ ಕಣ್ಣೀರಿನ ಮೂಲಕ ಪ್ರಚೋದಿಸುತ್ತಿದೆ” ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋದ ಸ್ಕ್ರೀನ್ ಶಾಟ್ ಹಾಕಿ ಸರ್ಚ್‌ ಮಾಡಿದಾಗ 23 ಜೂನ್ 2024 ರಂದು ಎಎನ್‌ಐ ತನ್ನ ಅಧಿಕೃತ ಎಕ್ಸ್‌ ಹ್ಯಾಂಡಲ್‌ನಿಂದ ಹಂಚಿಕೊಳ್ಳಲಾದ ಪೋಸ್ಟ್‌ವೊಂದು ಲಭ್ಯವಾಗಿದೆ.

ವಿಡಿಯೋ ಜೊತೆಗೆ ” ನೀಟ್-ಯುಜಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಯ ನಂತರ ಪಾಟ್ನಾದ ಎಲ್‌ಎನ್‌ಜೆಪಿ ಆಸ್ಪತ್ರೆಯಿಂದ ಕರೆದೊಯ್ಯಲಾಯಿತು. ಬಿಹಾರ ಪೊಲೀಸರು ಆರೋಪಿಗಳನ್ನು ಜೂನ್ 21 ರಂದು ಜಾರ್ಖಂಡ್‌ನ ದಿಯೋಘರ್‌ನಿಂದ ಬಂಧಿಸಿದ್ದರು” ಎಂದು ಎಎನ್‌ಎ ಬರೆದುಕೊಂಡಿತ್ತು.

ವೈರಲ್ ವಿಡಿಯೋ ಮತ್ತು ಎಎನ್‌ಐ ಹಂಚಿಕೊಂಡಿರುವ ವಿಡಿಯೋಗಳು ಒಂದೇ ಆಗಿರುವುದರಿಂದ ಸುಳ್ಳು ಸುದ್ದಿ ಹಬ್ಬಿಸಿರುವುದು ನಮಗೆ ಗೊತ್ತಾಗಿದೆ.

ಮೇ 5, 2024 ರಂದು ದೇಶದಾದ್ಯಂತ ನಡೆದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ -ಯುಜಿಯ ಫಲಿತಾಂಶ ಜೂನ್ 4, 2024 ರಂದು ಪ್ರಕಟಗೊಂಡಿತ್ತು. ಈ ಬೆನ್ನಲ್ಲೇ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿತ್ತು. ದೇಶದ ಹಲವೆಡೆ ಪ್ರತಿಭಟನೆಗಳು ನಡೆದಿತ್ತು. ಪ್ರತಿಭಟನೆಗಳು ತೀವ್ರಗೊಳ್ಳುತ್ತಿದ್ದಂತೆ ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿತ್ತು.

ಈ ನಡುವೆ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 21ರಂದು ಬಿಹಾರ ಪೊಲೀಸರು ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯ ಆರು ಮಂದಿಯನ್ನು ಬಂಧಿಸಿದ್ದರು. ದಿಯೋಘರ್ ಜಿಲ್ಲೆಯ ದೇವಿಪುರ ಪೊಲೀಸ್ ಠಾಣೆ ವ್ಯಾಪ್ತಿಯ ಏಮ್ಸ್-ದಿಯೋಘರ್ ಬಳಿಯ ಮನೆಯೊಂದರಿಂದ ಶಂಕಿತರನ್ನು ಬಂಧಿಸಲಾಗಿತ್ತು.

ಬಂಧಿತರನ್ನು ಬಿಹಾರದ ಪಾಟ್ನಾಗೆ ಕರೆತಂದಿದ್ದ ಪೊಲೀಸರು, ಅವರನ್ನು ಎಲ್‌ಎನ್‌ಜೆಪಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ತಪಾಸಣೆ ಬಳಿಕ ಬಂಧಿತರನ್ನು ಪೊಲೀಸರು ಆಸ್ಪತ್ರೆಯಿಂದ ಕರೆದೊಯ್ಯುವ ವಿಡಿಯೋವನ್ನು ಎಎನ್‌ಐ ಪೋಸ್ಟ್‌ ಮಾಡಿತ್ತು.

ಆ ವಿಡಿಯೋವನ್ನು ಕಾಂಗ್ರೆಸ್ ಕಚೇರಿಯಿಂದ ನೀಟ್ ಅಕ್ರಮದ ಆರೋಪಿಗಳನ್ನು ಬಂಧಿಸಲಾಗಿದೆ ಎಂಬ ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : FACT CHECK ಸಂಸತ್‌ನಲ್ಲಿ ರಾಷ್ಟ್ರಗೀತೆ ನುಡಿಸುವ ವೇಳೆ ರಾಹುಲ್ ಗಾಂಧಿ ಹಾಜರಿರಲಿಲ್ಲ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...