Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...