Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಒತ್ತಾಯಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಕಚೇರಿಯೊಂದರಲ್ಲಿ ವ್ಯಕ್ತಿಯೊಬ್ಬರು ಕುಳಿತಿರುವುದು, ಸುತ್ತಲು ಜನರು ಗುಂಪು ಸೇರಿರುವುದು ಮತ್ತು ಗಡ್ಡದಾರಿ ವ್ಯಕ್ತಿಯೊಬ್ಬ ಜೋರಾಗಿ ಕುರ್‌ಆನ್‌ ಓದುತ್ತಿರುವ ದೃಶ್ಯವಿದೆ.

ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುತ್ತಿರುವ ಬಲಪಂಥೀಯ ಎಕ್ಸ್ ಬಳಕೆದಾರ Jitendra pratap singh(@jpsin1) ಈ ವಿಡಿಯೋ ಹಂಚಿಕೊಂಡು “ಜಮಾತೆ ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆಯು ಢಾಕಾ ಕಾಲೇಜಿನ ಹಿಂದೂ ಪ್ರೊಫೆಸರ್ ರಾಜೀನಾಮೆಯನ್ನು ಬಹಳ ವಿಚಿತ್ರವಾಗಿ ತೆಗೆದುಕೊಂಡಿದೆ. ಮೊದಲಿಗೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಹೇಳಲಾಯಿತು. ಅಂದರೆ, ಕುರಾನ್‌ನ ಶ್ಲೋಕಗಳನ್ನು ಪಠಿಸಲಾಯಿತು. ನಂತರ ಅವರ ರಾಜೀನಾಮೆ ತೆಗೆದುಕೊಳ್ಳಲಾಯಿತು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುರ್‌ಆನ್ ಓದುವ ಮೂಲಕ ರಾಜೀನಾಮೆ ನೀಡುವಂತೆ ಒತ್ತಾಯಿಸಿರುವುದು ಮುಸ್ಲಿಂ ಪ್ರೊಫೆಸರ್‌ಗೆ ಹೊರತು, ಹಿಂದೂ ಪ್ರೊಫೆಸರ್‌ಗೆ ಅಲ್ಲ. ಇದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ ಎಂದು ತಿಳಿದು ಬಂದಿದೆ.

ಈ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ನಾವು ಮಾಹಿತಿ ಹುಡುಕಿದಾಗ ಢಾಕಾ ಪೋಸ್ಟ್ ಎಂಬ ವೆರಿಫೈಡ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 19ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಚಾನೆಲ್ ಪ್ರಕಾರ, ಢಾಕಾ ವಿಶ್ವವಿದ್ಯಾನಿಲಯದಲ್ಲಿ ರಂಝಾನ್ ತಿಂಗಳಲ್ಲಿ ಕುರ್‌ಆನ್‌ ಪಠಿಸಿದ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಂಡಿದ್ದಕ್ಕೆ ಕಲಾ ವಿಭಾಗದ ಡೀನ್ ಪ್ರೊ.ಅಬ್ದುಲ್ ಬಶೀರ್ ಅವರ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಆಗಸ್ಟ್ 19ರಂದು ಢಾಕಾ ಟ್ರಿಬ್ಯೂನ್.ಕಾಂ ಮಾಡಿರುವ ವರದಿ ಪ್ರಕಾರ, “ವಿದ್ಯಾರ್ಥಿ ಮೇಲೆ ಆಪಾದಿತ ಹಲ್ಲೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಕುರ್‌ಆನ್ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಯವರು ಪ್ರತಿಭಟಿಸಿದ ಹಿನ್ನೆಲೆ ಪ್ರೊ. ಅಬ್ದುಲ್ ಬಶೀರ್ ಅವರು ಢಾಕಾ ವಿವಿಯ ಕಲಾ ವಿಭಾಗದ ಡೀನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ.

ಬಶೀರ್ ಅವರ ರಾಜೀನಾಮೆ ಬಳಿಕ ದೇಶದಲ್ಲಿ ಶಾಂತಿ ನೆಲೆಸಲು, ಕುರ್‌ಆನ್‌ ವಿರುದ್ದದ ದ್ವೇಷ ಮತ್ತು ಇಸ್ಲಾಮೋಫೋಬಿಕ್ ತೊಲಗಳು ಢಾಕಾ ವಿಶ್ವವಿದ್ಯಾನಿಲಯದಲ್ಲಿ ಕುರ್‌ಆನ್‌ ಪಠಣ ಮತ್ತು ಪ್ರಾರ್ಥನೆ ನಡೆದಿದೆ ಎಂದು ವರದಿ ತಿಳಿಸಿದೆ.

ಪ್ರೊ. ಬಶೀರ್ ಅವರ ರಾಜೀನಾಮೆ ಕುರಿತು ಭಾರತೀಯ ಮಾಧ್ಯಮಗಳಾದ ಟೈಮ್ಸ್‌ ನೌ ಸೇರಿದಂತೆ ಅನೇಕ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಢಾಕಾ ವಿಶ್ವವಿದ್ಯಾಲಯದ ಪ್ರೊಫೆಸರ್ ರಾಜೀನಾಮೆ ನೀಡಿರುವುದು ಹೌದು. ಆದರೆ, ಅವರು ಹಿಂದೂ ಪ್ರೊಫಸೆರ್ ಅಲ್ಲ, ಮುಸ್ಲಿಂ ಪ್ರೊಫೆಸರ್. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮಗಳಿಲ್ಲ. ಅಲ್ಲದೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಓದುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...