Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...