Homeಫ್ಯಾಕ್ಟ್‌ಚೆಕ್FACT CHECK : ನ್ಯಾಯಾಲಯದ ಮುಸ್ಲಿಂ ಸಿಬ್ಬಂದಿ ಕುಡಿಯುವ ನೀರಿಗೆ ಉಗುಳಿದ್ದಾರೆ ಎಂಬುವುದು ಸುಳ್ಳು

FACT CHECK : ನ್ಯಾಯಾಲಯದ ಮುಸ್ಲಿಂ ಸಿಬ್ಬಂದಿ ಕುಡಿಯುವ ನೀರಿಗೆ ಉಗುಳಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಉತ್ತರ ಪ್ರದೇಶದ ಅಲೀಗಢದಲ್ಲಿ ನ್ಯಾಯಾಧೀಶರ ಕೊಠಡಿಯಲ್ಲಿ ಮುಸ್ಲಿಂ ಉದ್ಯೋಗಿಯೊಬ್ಬರು ಕುಡಿಯುವ ನೀರಿಗೆ ಉಗುಳುತ್ತಿದ್ದಾರೆ. ಹಿಂದುಗಳೇ ಈ ವಿಡಿಯೋವನ್ನು ನೋಡಿ..ಈಗಲಾದರೂ ಎಚ್ಚೆತ್ತುಕೊಳ್ಳಿ” ಎಂದು ಬರೆದುಕೊಂಡು ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಅನೇಕರು “ಇದು ಮುಸಲ್ಮಾನರ ಜಿಹಾದ್‌ನ ಒಂದು ಭಾಗ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲ ಸಾಮಾಜಿಕ ಜಾಲತಾಣದ ಬಳಕೆದಾರರು “ಅಲೀಗಢ ನ್ಯಾಯಾಲಯದಿಂದ ಉಗುಳುವ ಜಿಹಾದ್‌ನ ಹೊಚ್ಚ ಹೊಸ ವಿಡಿಯೋ ಬಿಡುಗಡೆಯಾಗಿದೆ. ನ್ಯಾಯಾಲಯದ ನ್ಯಾಯಾಧೀಶರು ಸಹ ಸ್ಪಿಟ್ ಜಿಹಾದ್‌ಗೆ ಬಲಿಯಾದರು” ಎಂಬ ಶೀರ್ಷಿಕೆಯನ್ನು ನೀಡಿ ವಿಡಿಯೋವನ್ನು ಹಂಚಿಕೊಳ್ಳುತ್ತಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆ ತಿಳಿಯಲು ನಾವು ಅದರ ಸ್ಕ್ರೀನ್ ಶಾಟ್ ಅನ್ನು ಗೂಗಲ್ ರಿವರ್ಸ್ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಈ ವಿಡಿಯೋ 2018ಕ್ಕೂ ಹಿಂದಿನದ್ದು ಎಂಬುವುದು ನಮಗೆ ತಿಳಿದು ಬಂದಿದೆ. ಈ ಕುರಿತು 29 ಮೇ 2018 ರಂದು ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯೊಂದು ಲಭ್ಯವಾಗಿದೆ.

ವರದಿಯ ಪ್ರಕಾರ, ವಿಕಾಸ್ ಗುಪ್ತಾ ಎಂಬ ನಾಲ್ಕನೇ ದರ್ಜೆಯ ಉದ್ಯೋಗಿ, ಉತ್ತರ ಪ್ರದೇಶದ ಅಲಿಗಢದಲ್ಲಿ ತನ್ನ ಜೊಲ್ಲು ನೀರಿನಲ್ಲಿ ಬೆರೆಸಿ ಮಹಿಳಾ ನ್ಯಾಯಾಧೀಶರಿಗೆ ನೀಡುತ್ತಿರುವುದು ಕಂಡುಬಂದಿದೆ. ವಿಡಿಯೋ ಬಹಿರಂಗವಾದ ನಂತರ, ಗುಪ್ತಾ ಅವರನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ ಮತ್ತು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪಿ.ಕೆ ಸಿಂಗ್ ಘಟನೆಯನ್ನು ದೃಢಪಡಿಸಿದ್ದರ ವರದಿಗಳು ಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಪತ್ರಿಕಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ನೀರಿನ ಲೋಟಕ್ಕೆ ಉಗುಳಿರುವ ವ್ಯಕ್ತಿ ಮುಸ್ಲಿಂ ಸಮುದಾಯಕ್ಕೆ ಸೇರಿದವರಲ್ಲ ಮತ್ತು ಆತ ಹಿಂದೂ ಎಂಬುವುದು ಸಾಬೀತಾಗಿದೆ. ಈ ಕುರಿತು ಎಬಿಪಿ ಸೇರಿದಂತೆ ಹಲವು ಸುದ್ದಿ ಮಾಧ್ಯಮಗಳು ಕೂಡ ವರದಿ ಮಾಡಿರುವುದು ಕಂಡು ಬಂದಿದೆ.

ವೈರಲ್ ವಿಡಿಯೋ ಕುರಿತು ಜುಲೈ 26, 2024ರಂದು ಅಲೀಗಢ ಪೊಲೀಸರು ಕೂಡ ಎಕ್ಸ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದು, “ದಯವಿಟ್ಟು ಸತ್ಯಾಂಶಗಳನ್ನು ಪರಿಶೀಲಿಸದೆ ತಪ್ಪುದಾರಿಗೆಳೆಯುವ ಮಾಹಿತಿಯನ್ನು ಪೋಸ್ಟ್ ಮಾಡಬೇಡಿ. ಮೇಲ್ಕಂಡ ಪ್ರಕರಣವು 2018 ನೇ ಸಾಲಿನದ್ದಾಗಿದ್ದು, ಆ ಸಮಯದಲ್ಲಿ ಸಂಬಂಧಪಟ್ಟ ಇಲಾಖೆಯು ತಪ್ಪಿತಸ್ಥ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಂಡಿದೆ” ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದಂತೆ ಕುಡಿಯುವ ನೀರಿಗೆ ಉಗುಳಿದ ವ್ಯಕ್ತಿ ಮುಸ್ಲಿಂ ಅಲ್ಲ ಎಂಬುವುದು ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದಿದೆ. ತಪ್ಪು ಯಾರು ಮಾಡಿದರೂ ತಪ್ಪೇ. ಅದರಲ್ಲಿ ಜಾತಿ, ಧರ್ಮದ ವ್ಯತ್ಯಾಸ ಇಲ್ಲ. ಈ ಪ್ರಕರಣಕ್ಕೆ ತಪ್ಪು ಮಾಹಿತಿಯೊಂದಿಗೆ ಕೋಮು ಬಣ್ಣ ಬಳಿದಿರುವ ಕಾರಣ ನಾವು ಸತ್ಯಾಸತ್ಯತೆ ತಿಳಿಸುವ ಕಾರ್ಯ ಮಾಡಿದ್ದೇವೆ.

ಇದನ್ನೂ ಓದಿ : FACT CHECK : ಮುಸ್ಲಿಮರ ಹೋಟೆಲ್‌ ಕುರಿತ ನ್ಯಾಯಮೂರ್ತಿಗಳ ಹೇಳಿಕೆಯನ್ನು ತಿರುಚಿ ಹಂಚಿಕೊಳ್ಳಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...